< Дела апостолска 10 >

1 А у Ћесарији беше један човек по имену Корнилије, капетан од чете која се зваше талијанска.
ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
2 Побожан и богобојазан са целим домом својим, који даваше милостињу многим људима и мољаше се Богу без престанка;
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
3 Он виде на јави у утвари око деветог сата дневи анђела Божјег где сиђе к њему и рече му: Корнилије!
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
4 А он погледавши на њ и уплашивши се рече: Шта је, Господе? А он му рече: Молитве твоје и милостиње твоје изиђоше на памет Богу;
ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
5 И сад пошљи у Јопу људе и дозови Симона прозваног Петра:
ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.
6 Он стоји у неког Симона кожара, ког је кућа код мора: он ће ти казати речи којима ћеш се спасти ти и сав дом твој.
ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.
7 И кад отиде анђео који говори Корнилију, дозвавши двојицу од својих слугу и једног побожног војника од оних који му служаху,
ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
8 И казавши им све посла их у Јопу.
ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು.
9 А сутрадан кад они иђаху путем и приближише се ка граду, изиђе Петар у горњу собу да се помоли Богу у шести сат.
ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
10 И огладне, и хтеде да једе; а кад му они готовљаху, дође изван себе,
೧೦ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,
11 И виде небо отворено и суд некакав где силази на њега, као велико платно, завезан на четири рогља и спушта се на земљу;
೧೧ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.
12 У коме беху сва четвороножна на земљи, и звериње и бубине и птице небеске.
೧೨ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.
13 И постаде глас к њему: Устани, Петре! Покољи и поједи.
೧೩ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ಅವನಿಗೆ ಒಂದು ವಾಣಿ ಕೇಳಿಸಿತು.
14 А Петар рече: Нипошто, Господе! Јер никад не једох шта погано или нечисто.
೧೪ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.
15 И гле, глас опет к њему другом: Шта је Бог очистио ти не погани.
೧೫ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.
16 И ово би трипут, и суд се опет узе на небо.
೧೬ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.
17 А кад се Петар у себи дивљаше шта би била утвара коју виде, и гле људи послани од Корнилија, напитавши и нашавши дом Симонов стадоше пред вратима,
೧೭ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
18 И зовнувши питаху: Стоји ли овде Симон прозвани Петар?
೧೮ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
19 А док Петар размишљаваше о утвари, рече му Дух: Ево три човека траже те;
೧೯ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
20 Него устани и сиђи и иди с њима не премишљајући ништа, јер их ја послах.
೨೦ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.
21 А Петар сишавши к људима посланим к себи од Корнилија рече: Ево ја сам кога тражите; што сте дошли?
೨೧ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,
22 А они рекоше: Корнилије капетан, човек праведан и богобојазан, познат код свега народа јеврејског, примио је заповест од анђела светог да дозове тебе у свој дом и да чује речи од тебе.
೨೨ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.
23 Онда их дозва унутра и угости. А сутрадан уставши Петар пође с њима, и неки од браће која беше у Јопи пођоше с њим.
೨೩ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
24 И сутрадан уђоше у Ћесарију. А Корнилије чекаше их сазвавши родбину своју и љубазне пријатеље.
೨೪ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
25 А кад Петар хтеде да уђе, срете га Корнилије, и паднувши на ноге његове поклони се.
೨೫ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.
26 И Петар га подиже говорећи: Устани, и ја сам човек.
೨೬ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ,
27 И с њим говорећи уђе, и нађе многе који се беху сабрали.
೨೭ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.
28 И рече им: Ви знате како је неприлично човеку Јеврејину дружити се или долазити к туђину; али Бог мени показа да ниједног човека не зовем поганим или нечистим;
೨೮ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.
29 Зато и без сумње дођох позван. Питам вас дакле зашто посласте по мене?
೨೯ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.
30 И Корнилије рече: Од четвртог дана до овог часа ја постих, и у девети сат мољах се Богу у својој кући; и гле, човек стаде преда мном у хаљини сјајној,
೩೦ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
31 И рече: Корнилије! Услишена би молитва твоја и милостиње твоје поменуше се пред Богом.
೩೧ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
32 Пошљи дакле у Јопу и дозови Симона који се зове Петар: он стоји у кући Симона кожара код мора, који кад дође казаће ти.
೩೨ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.
33 Онда ја одмах послах к теби; и ти си добро учинио што си дошао. Сад дакле ми сви стојимо пред Богом да чујемо све што је теби од Бога заповеђено.
೩೩ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.
34 А Петар отворивши уста рече: Заиста видим да Бог не гледа ко је ко;
೩೪ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,
35 Него у сваком народу онај који се боји Њега и твори правду, мио је Њему.
೩೫ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.
36 Реч што посла синовима Израиљевим, јављајући мир по Исусу Христу, који је Господ свима.
೩೬ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
37 Ви знате говор који је био по свој Јудеји почевши од Галилеје по крштењу које проповеда Јован:
೩೭ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.
38 Исуса из Назарета како га помаза Бог Духом Светим и силом, који прође чинећи добро и исцељујући све које ђаво беше надвладао; јер Бог беше с њим.
೩೮ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
39 И ми смо сведоци свему што учини у земљи јудејској и Јерусалиму; ког и убише обесивши на дрво.
೩೯ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
40 Овог Бог васкрсе трећи дан, и даде Му да се покаже,
೪೦ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.
41 Не свему народу него нама сведоцима напред избранима од Бога, који с Њим једосмо и писмо по васкрсењу Његовом из мртвих.
೪೧ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
42 И заповеди нам да проповедамо народу и да сведочимо да је Он наречени од Бога судија живим и мртвим.
೪೨ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
43 За ово сведоче сви пророци да ће именом Његовим примити опроштење греха сви који Га верују.
೪೩ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.
44 А док још Петар говораше ове речи, сиђе Дух Свети на све који слушаху реч.
೪೪ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.
45 И удивише се верни из обрезања који беху дошли с Петром, видећи да се и на незнабошце изли дар Духа Светог.
೪೫ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,
46 Јер их слушаху где говораху језике, и величаху Бога. Тада одговори Петар:
೪೬ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.
47 Еда може ко воду забранити да се не крсте они који примише Духа Светог као и ми?
೪೭ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ,
48 И заповеди им да се крсте у име Исуса Христа. Тада га молише да остане код њих неколико дана.
೪೮ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.

< Дела апостолска 10 >