< Колошанима 1 >
1 Од Павла, по вољи Божијој апостола Исуса Христа и брата Тимотија,
೧ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,
2 Светима који су у Колосима и верној браћи у Христу Исусу: благодат вам и мир од Бога Оца нашег и Господа Исуса Христа.
೨ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.
3 Захваљујемо Богу и Оцу Господа свог Исуса Христа, молећи се свагда за вас,
೩ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
4 Чувши веру вашу у Христа Исуса, и љубав коју имате к свима светима,
೪ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.
5 За наду остављену вама на небесима, за коју напред чусте у речи истине јеванђеља,
೫ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
6 Које је у вама, као и у свему свету, и плодно је и расте, као и у вама, од оног дана како чусте и разуместе благодат Божију у истини,
೬ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
7 Као што и дознасте од Епафраса, љубазног нашег другара у служењу, који је за вас верни слуга Христов,
೭ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.
8 Који нам и јави вашу љубав у духу.
೮ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.
9 Тога ради и ми од оног дана како чусмо не престајемо за вас молити се Богу и искати да се испуните познањем воље Његове у свакој премудрости и разуму духовном,
೯ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
10 Да живите пристојно Богу на свако угађање и у сваком добром делу да будете плодни, и да растете у познању Божијем,
೧೦ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
11 Јачајући сваком снагом по сили славе Његове, и у сваком трпљењу и дугом подношењу с радошћу;
೧೧ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
12 Захваљујући Богу и Оцу, који нас призва у део наследства светих у виделу;
೧೨ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
13 Који нас избави од власти тамне, и премести нас у царство Сина љубави своје,
೧೩ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
14 У коме имамо избављење крвљу Његовом и опроштење греха;
೧೪ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
15 Који је обличје Бога што се не види, који је рођен пре сваке твари.
೧೫ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.
16 Јер кроз Њега би саздано све што је на небу и што је на земљи, што се види и што се не види, били престоли или господства или поглаварства, или власти: све се кроза Њ и за Њ сазда.
೧೬ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
17 И Он је пре свега, и све је у Њему.
೧೭ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
18 И Он је глава телу цркве, који је почетак и прворођени из мртвих, да буде Он у свему први;
೧೮ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
19 Јер би воља Очева да се у Њ усели сва пунина,
೧೯ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,
20 И кроза Њ да примири све са собом, умиривши крвљу крста Његова, кроза Њ све, било на земљи или на небу.
೨೦ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
21 И вас који сте некад били одлучени и непријатељи кроз помисли у злим делима,
೨೧ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
22 А сад вас примири у телу меса Његовог смрћу Његовом, да вас свете и без мане и без кривице изведе преда се;
೨೨ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.
23 Ако само останете у вери утемељени и тврди, и непокретни од наде јеванђеља, које чусте, које је проповедано свој твари под небом, коме ја Павле постадох слуга.
೨೩ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
24 Сад се радујем у свом страдању за вас, и довршујем недостатак невоља Христових на телу свом за тело Његово које је црква,
೨೪ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
25 Којој ја постадох слуга по наредби Божијој која ми је дана међу вама да испуним реч Божију,
೨೫ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
26 Тајну која је била сакривена од постања света и нараштаја, а сад се јави светима Његовим, (aiōn )
೨೬ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. (aiōn )
27 Којима Бог науми показати како је богата слава тајне ове међу незнабошцима, које је Христос у вама, нада славе;
೨೭ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
28 Ког ми проповедамо саветујући сваког човека, и учећи свакој премудрости, да покажемо сваког човека савршеног у Христу Исусу.
೨೮ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
29 Зашто се и трудим и борим по Његовој моћи која у мени силно чини.
೨೯ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.