< 5 Мојсијева 27 >

1 И заповеди Мојсије са старешинама Израиљевим народу говорећи: Држите све ове заповести које вам ја данас заповедам.
ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.
2 И кад пређеш преко Јордана у земљу коју ти даје Господ Бог твој, подигни себи камење велико и намажи га кречом.
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.
3 И напиши на њему све речи овог закона, кад пређеш да уђеш у земљу коју ти даје Господ Бог твој, у земљу где тече млеко и мед, као што ти је казао Господ Бог отаца твојих.
ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.
4 Када, дакле, пређеш преко Јордана, подигни то камење, за које ти заповедам данас, на гори Евалу, и намажи га кречом.
ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
5 И начини онде олтар Господу Богу свом, олтар од камења, али га немој гвожђем тесати.
“ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.
6 Од целог камења начини олтар Господу Богу свом, и на њему принеси Господу Богу свом жртве паљенице.
ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.
7 Принеси и захвалне жртве, и једи их онде, и весели се пред Господом Богом својим.
ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
8 И напиши на том камењу све речи овог закона добро и разговетно.
ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.
9 И рече Мојсије и свештеници Левити свему Израиљу говорећи: Пази и чуј Израиљу, данас си постао народ Господа Бога свог.
ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.
10 Зато слушај глас Господа Бога свог, и твори заповести Његове и уредбе Његове, које ти ја данас заповедам.
೧೦ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.
11 И заповеди Мојсије у онај дан народу говорећи:
೧೧ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,
12 Ови нека стану да благосиљају народ на гори Гаризину, кад пређете преко Јордана: Симеун, Левије, Јуда, Исахар, Јосиф и Венијамин.
೧೨“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
13 А ови нека стану да проклињу на гори Евалу: Рувим, Гад, Асир, Завулон, Дан, и Нефталим,
೧೩ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.
14 И нека проговоре Левити, гласовито и кажу свима у Израиљу:
೧೪“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,
15 Проклет да је човек који би начинио лик резан или ливен, ствар гадну пред Господом, дело руку уметничких, ако би и на скривеном месту метнуо. А сав народ одговарајући нека каже: Амин.
೧೫‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
16 Проклет да је који би ружио оца свог или матер своју. А сав народ нека каже: Амин.
೧೬“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
17 Проклет да је који би помакао међу ближњег свог. А сав народ нека каже: Амин.
೧೭“ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
18 Проклет да је који би завео слепца с пута. А сав народ неке каже: Амин.
೧೮“ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.
19 Проклет да је који би изврнуо правицу дошљаку, сироти или удовици. А сав народ нека каже: Амин.
೧೯“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
20 Проклет да је који би облежао жену оца свог, те открио скут оца свог. А сав народ нека каже: Амин.
೨೦“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
21 Проклет да је који би облежао какво год живинче. А сав народ нека каже: Амин.
೨೧“ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
22 Проклет да је који би облежао сестру своју, кћер оца свог или кћер матере своје. А сав народ нека каже: Амин.
೨೨“ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
23 Проклет да је који би облежао ташту своју. А сав народ нека каже: Амин.
೨೩“ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
24 Проклет да је који би убио ближњег свог из потаје. А сав народ нека каже: Амин.
೨೪“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
25 Проклет да је који би примио какав поклон да убије човека права. А сав народ нека каже: Амин.
೨೫“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
26 Проклет да је који не би остао на речима овог закона, и творио их. А сав народ нека каже: Амин.
೨೬“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

< 5 Мојсијева 27 >