< 2 Мојсијева 12 >
1 И рече Господ Мојсију и Арону у земљи мисирској говорећи:
ಯೆಹೋವ ದೇವರು ಈಜಿಪ್ಟಿನಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 Овај месец да вам је почетак месецима, да вам је први месец у години.
“ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರಬೇಕು.
3 Кажите свему збору Израиљевом и реците: Десетог дана овог месеца сваки нека узме јагње или јаре, по породицама, по једно на дом;
ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು.
4 Ако ли је дом мали за јагње или јаре, нека узме к себи суседа, који му је најближи, с онолико душа колико треба да могу појести јагње или јаре.
ಆ ಕುರಿಮರಿಯನ್ನು ಪೂರ್ತಿಯಾಗಿ ತಿನ್ನುವುದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ, ತನ್ನ ಮನೆಗೆ ಸಮೀಪವಾಗಿರುವ ತನ್ನ ನೆರೆಯವನ ಕುಟುಂಬದಲ್ಲಿ ಲೆಕ್ಕನೋಡಿ ಅವರೊಂದಿಗೆ ಪಾಲು ಹೊಂದಲಿ. ಒಬ್ಬೊಬ್ಬನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತೆಗೆದುಕೊಳ್ಳಲಿ.
5 А јагње или јаре да вам буде здраво, мушко, од године; између оваца или између коза узмите.
ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.
6 И чувајте га до четрнаестог дана овог месеца, а тада савколики збор Израиљев нека га закоље увече.
ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.
7 И нека узму крви од њега и покропе оба довратка и горњи праг на кућама у којима ће га јести.
ಅವರು ರಕ್ತದಲ್ಲಿ ಸ್ವಲ್ಪ ತೆಗೆದು, ಕುರಿಮರಿಯ ಮಾಂಸವನ್ನು ಭೋಜನಮಾಡುವ ಮನೆಗಳ ಬಾಗಿಲಿನ ನಿಲುವು ಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.
8 И нека једу месо исте ноћи, на ватри печено, с хлебом пресним и са зељем горким нека једу.
ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
9 Немојте јести сирово ни у води кувано, него на ватри печено, с главом и с ногама и с дробом.
ಅದರಲ್ಲಿ ಯಾವುದನ್ನೂ ಹಸಿಯಾದದ್ದನ್ನಾಗಲಿ, ನೀರಿನಲ್ಲಿ ಬೇಯಿಸಿಯಾಗಲಿ ತಿನ್ನದೆ, ಅದರ ತಲೆ, ತೊಡೆ, ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
10 И ништа немојте оставити до јутра; ако ли би шта остало до јутра, спалите на ватри.
ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
11 А овако једите: опасани, обућа да вам је на ногу и штап у руци, и једите хитно, јер је пролазак Господњи.
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.
12 Јер ћу проћи по земљи мисирској ту ноћ, и побићу све првенце у земљи мисирској од човека до живинчета, и судићу свим боговима мисирским, ја Господ.
“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.
13 А крв она биће вам знак на кућама, у којима ћете бити; и кад видим крв, проћи ћу вас, те неће бити међу вама помора, кад станем убијати по земљи мисирској.
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ.
14 И тај ће вам дан бити за спомен, и празноваћете га Господу од колена до колена; празнујте га законом вечним.
“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.
15 Седам дана једите хлебове пресне, и првог дана уклоните квасац из кућа својих; јер ко би год јео шта с квасцем од првог дана до седмог, истребиће се она душа из Израиља.
ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.
16 Први дан биће свети сабор; тако и седми дан имаћете свети сабор; никакав посао да се не ради у те дане, осим шта треба за јело свакој души, то ћете само готовити.
ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.
17 И држите дан пресних хлебова, јер у тај дан изведох војске ваше из земље мисирске; држите тај дан од кољена до кољена законом вечним.
“ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.
18 Првог месеца четрнаести дан увече почните јести пресне хлебове па до двадесет првог дана истог месеца увече.
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
19 За седам дана да се не нађе квасца у кућама вашим; јер ко би год јео шта с квасцем, истребиће се она душа из збора Израиљевог, био дошљак или рођен у земљи.
ಏಳು ದಿನಗಳವರೆಗೆ ಹುಳಿ ಹಿಟ್ಟು ನಿಮ್ಮ ಮನೆಗಳಲ್ಲಿ ಸಿಕ್ಕಬಾರದು, ಏಕೆಂದರೆ ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವರು ಪರದೇಶದವರಾಗಲಿ, ಸ್ವದೇಶದವರಾಗಲಿ ಅವರನ್ನು ಇಸ್ರಾಯೇಲ್ ಸಭೆಯೊಳಗಿಂದ ಬಹಿಷ್ಕರಿಸಬೇಕು.
20 Ништа с квасцем немојте јести, него једите хлеб пресан по свим становима својим.
ಹುಳಿ ಕಲಸಿದ್ದು ಯಾವುದೇ ಆಗಿರಲಿ ನೀವು ತಿನ್ನಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು,” ಎಂದು ಹೇಳಿದರು.
21 И сазва Мојсије све старешине израиљске, и рече им: Изберите и узмите себи јагње или јаре по породицама својим, и закољите пасху.
ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯರನ್ನು ಕರೆದು ಅವರಿಗೆ, “ನಿಮ್ಮ ಕುಟುಂಬಗಳ ಪ್ರಕಾರ ಕುರಿಗಳನ್ನು ಆಯ್ದುಕೊಂಡು ಪಸ್ಕಹಬ್ಬಕ್ಕಾಗಿ ಕೊಯ್ಯಿರಿ.
22 И узмите киту исопа и замочите је у крв, која ће бити у здели, и покропите горњи праг и оба довратка крвљу, која ће бити у здели, и ниједан од вас да не излази на врата кућна до јутра.
ಹಿಸ್ಸೋಪ ಗಿಡದ ಕಟ್ಟನ್ನು ತೆಗೆದುಕೊಂಡು, ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ, ಬಾಗಿಲಿನ ಮೇಲೆ ಅಡ್ಡ ಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವು ಕಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟುಹೋಗಬಾರದು.
23 Јер ће изаћи Господ да бије Мисир, па кад види крв на горњем прагу и на оба довратка, проћи ће Господ мимо она врата, и неће дати крвнику да уђе у куће ваше да убија.
ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.
24 И држите ово као закон теби и синовима твојим довека.
“ಇದನ್ನು ಒಂದು ಶಾಸನವಾಗಿ ನೀವೂ, ನಿಮ್ಮ ಪುತ್ರರೂ ಸದಾಕಾಲಕ್ಕೂ ಆಚರಿಸತಕ್ಕದ್ದು.
25 И кад дођете у земљу коју ће вам дати Господ, као што је казао, држите ову службу.
ಯೆಹೋವ ದೇವರು ಕೊಡುವೆನೆಂದು ಪ್ರಮಾಣ ಮಾಡಿದ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ನೀವು ಕೈಗೊಳ್ಳಬೇಕು.
26 И кад вам кажу синови ваши: Каква вам је то служба?
ನಿಮ್ಮ ಮಕ್ಕಳು, ‘ಈ ಆಚರಣೆಯ ಅರ್ಥವೇನು?’ ಎಂದು ಕೇಳಿದಾಗ,
27 Реците: Ово је жртва за пролазак Господњи, кад прође куће синова Израиљевих у Мисиру убијајући Мисирце, а домове наше сачува. Тада народ сави главу и поклони се.
ನೀವು ಅವರಿಗೆ, ‘ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಈಜಿಪ್ಟಿನವರನ್ನು ಸಂಹರಿಸಿ, ನಮ್ಮ ಮನೆಗಳನ್ನು ಕಾಪಾಡುವುದಕ್ಕಾಗಿ ಇಸ್ರಾಯೇಲರ ಮನೆಗಳನ್ನು ದಾಟಿಹೋದ ಯೆಹೋವ ದೇವರ ಪಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ,’ ಎಂದು ನೀವು ಹೇಳಬೇಕು,” ಎಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
28 И отидоше и учинише синови Израиљеви, како заповеди Господ преко Мојсија и Арона, тако учинише.
ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲರು ಮಾಡಿದರು.
29 А око поноћи поби Господ све првенце у земљи мисирској од првенца Фараоновог који хтеде седети на престолу његовом до првенца сужња у тамници, и шта год беше првенац од стоке.
ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.
30 Тада уста Фараон оне ноћи, он и све слуге његове и сви Мисирци, и би вика велика у Мисиру, јер не беше куће у којој не би мртваца.
ಆಗ ಫರೋಹನೂ, ಅವನ ಎಲ್ಲಾ ಅಧಿಕಾರಿಗಳೂ, ಎಲ್ಲಾ ಈಜಿಪ್ಟಿನವರೂ ರಾತ್ರಿಯಲ್ಲಿ ಎದ್ದರು. ಆ ಈಜಿಪ್ಟಿನಲ್ಲಿ ದೊಡ್ಡ ಗೋಳಾಟವಾಯಿತು. ಏಕೆಂದರೆ ಅಲ್ಲಿ ಸತ್ತವರು ಇಲ್ಲದ ಒಂದು ಮನೆಯಾದರೂ ಇರಲಿಲ್ಲ.
31 И дозва Мојсија и Арона по ноћи и рече: Устајте, идите из народа мог и ви и синови Израиљеви, и отидите, послужите Господу, као што говористе.
ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ.
32 Узмите и овце своје и говеда своја, као што говористе, и идите, па и мене благословите.
ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು.
33 И Мисирци наваљиваху на народ да брже иду из земље, јер говораху: Изгибосмо сви.
ಇದಲ್ಲದೆ ಈಜಿಪ್ಟಿನವರು, “ನಾವೆಲ್ಲರೂ ಸಾಯುತ್ತೇವೆ,” ಎಂದು ಹೇಳಿ, ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ಜನರನ್ನು ಒತ್ತಾಯಮಾಡಿದರು.
34 И народ узе тесто своје још неускисло, умотавши га у хаљине своје, на рамена своја.
ಆದ್ದರಿಂದ ಜನರು ಹಿಟ್ಟಿಗೆ ಹುಳಿ ಹಾಕುವುದಕ್ಕಿಂತ ಮುಂಚೆ, ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ, ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
35 И учинише синови Израиљеви по заповести Мојсијевој, и заискаше у Мисираца накита сребрних и накита златних и хаљина.
ಇಸ್ರಾಯೇಲರು ಮೋಶೆಯು ಹೇಳಿದಂತೆ ಮಾಡಿ, ಬೆಳ್ಳಿಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಈಜಿಪ್ಟಿನವರಿಂದ ಕೇಳಿ ಪಡೆದರು.
36 И Господ учини, те народ нађе љубав у Мисираца, те им дадоше; тако опленише Мисирце.
ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.
37 И отидоше синови Израиљеви из Рамесе у Сохот, око шест стотина хиљада пешака, самих људи осим деце.
ಆಗ ಇಸ್ರಾಯೇಲರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಜನರು ಕಾಲುನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣಮಾಡಿದರು.
38 И других људи много отиде с њима, и стоке ситне и крупне врло много.
ಬೇರೆ ಜನಸಮೂಹವೂ ಕುರಿದನ ಮೊದಲಾದ ಪಶುಗಳ ಬಹುದೊಡ್ಡ ಹಿಂಡೂ ಇಸ್ರಾಯೇಲರ ಸಂಗಡ ಹೋದವು.
39 И од теста које изнесоше из Мисира испекоше погаче пресне, јер не беше ускисло кад их потераше Мисирци, те не могаше оклевати, нити спремише себи брашњенице.
ಆಗ ಅವರು ಈಜಿಪ್ಟಿನಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿಯಾಗದ ಕಾರಣ, ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿದರು. ಏಕೆಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಈಜಿಪ್ಟಿನಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.
40 А бавише се синови Израиљеви у Мисиру четири стотине и тридесет година.
ಇಸ್ರಾಯೇಲರು ಈಜಿಪ್ಟಿನಲ್ಲಿ ಪ್ರವಾಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರ್ಷಗಳಾಗಿದ್ದವು.
41 И кад се наврши четири стотине и тридесет година, у исти дан изађоше све војске Господње из земље мисирске.
ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.
42 Та се ноћ светкује Господу, у коју их изведе из Мисира; то је ноћ Господња, коју треба да светкују синови Израиљеви од кољена на кољено.
ದೇವರು ಈಜಿಪ್ಟ್ ದೇಶದಿಂದ ಅವರನ್ನು ಹೊರಗೆ ತಂದ ಕಾರಣ, ಇದು ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲರು ತಮ್ಮ ಸಂತತಿಗಳಲ್ಲಿ ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯು ಇದೇ.
43 И рече Господ Мојсију и Арону: Ово нека буде закон за пасху: ниједан туђин да је не једе;
ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು.
44 А сваки слуга ваш купљен за новце, кад га обрежете, онда нека је једе.
ಆದರೆ ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ತರುವಾಯ, ಅಂಥವನು ಅದನ್ನು ತಿನ್ನಬಹುದು.
45 Дошљак или најамник да је не једе.
ಪರದೇಶದವರೂ, ಕೂಲಿಯವರೂ, ಅದನ್ನು ತಿನ್ನಬಾರದು.
46 У истој кући да се једе, да не изнесете меса од ње из куће, и кости да јој не преломите.
“ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು.
47 Сав збор Израиљев нека чини тако.
ಇಸ್ರಾಯೇಲಿನ ಸಮೂಹದಲ್ಲಿರುವವರೆಲ್ಲರೂ ಇದನ್ನು ಆಚರಿಸಬೇಕು.
48 Ако би код тебе седео туђин и хтео би светковати пасху Господњу, нека му се обрежу све мушкиње, па онда нека приступи да је светкује, и нека буде као рођен у земљи; а нико необрезан да је не једе.
“ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
49 Закон један да је и рођеном у земљи и дошљаку који седи међу вама.
ಸ್ವದೇಶದಲ್ಲಿ ಹುಟ್ಟಿದವನಿಗೂ, ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯನಿಗೂ ಒಂದೇ ನಿಯಮವಿರಲಿ,” ಎಂದು ಹೇಳಿದರು.
50 И учинише сви синови Израиљеви како заповеди Господ Мојсију и Арону, тако учинише.
ಇಸ್ರಾಯೇಲರೆಲ್ಲಾ ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಮಾಡಿದರು.
51 И тај дан изведе Господ синове Израиљеве из земље мисирске у четама њиховим.
ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.