< Књига пророка Језекиља 39 >

1 Ти дакле, сине човечји, пророкуј против Гога, и реци: Овако вели Господ Господ: Ево ме на те, Гоже, кнеже и главо Месеху и Тувалу.
“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.
2 И вратићу те натраг и водићу те, и извешћу те из северних крајева и довешћу те на горе Израиљеве.
ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರ ದಿಕ್ಕಿನ ಕಟ್ಟಕಡೆಯಿಂದ ಬರಮಾಡಿ ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,
3 И избићу ти лук твој из леве руке, и просућу ти из десне руке стреле.
ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು.
4 На горама ћеш Израиљевим пасти ти и све чете твоје и народи који буду с тобом; птицама, свакојаким птицама крилатим и зверима пољским даћу те да те изједу.
ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
5 На пољу ћеш пасти, јер ја рекох, говори Господ Господ.
ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
6 И пустићу огањ на Магога и на оне који живе на острвима без страха; и познаће да сам ја Господ.
ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.
7 И свето име своје обзнанићу усред народа свог Израиља, и нећу више дати да се скврни свето име моје, него ће познати народи да сам ја Господ, Светац у Израиљу.
“‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.
8 Ево, доћи ће, и збиће се, говори Господ Господ; то је дан за који говорих.
ಇದು ಬಂದಿತು, ಇದು ನೆರವೇರಿತು. ನಾನು ಮುಂತಿಳಿಸಿದ ದಿನವು ಇದೇ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
9 Тада ће изаћи становници градова Израиљевих, и наложиће на огањ и спалиће оружје и штитове и штитиће, лукове и стреле, сулице и копља, и ложиће их на огањ седам година.
“‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
10 И неће носити дрва из поља, нити ће сећи у шуми, него ће оружје ложити на огањ, и оплениће оне који их пленише, и поотимаће од оних који од њих отимаше, говори Господ Господ.
ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
11 И у то ћу време дати Гогу место за гроб онде у Израиљу, долину којом се иде на исток к мору, и она ће стиснути уста путницима; онде ће бити погребен Гог и све мноштво његово, и прозваће се долина мноштва Гоговог.
“‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು.
12 И укопаваће их дом Израиљев седам месеци, да би очистили земљу.
“‘ಇಸ್ರಾಯೇಲನ ಮನೆತನದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳವರೆಗೂ ಸಮಾಧಿಮಾಡುವರು.
13 И укопаваће их сав народ, и биће им на славу у онај дан кад се прославим, говори Господ Господ.
ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
14 И одвојиће људе који ће једнако ићи по земљи и с онима који пролазе укопавати оне који би остали по земљи да је очисте; после седам месеца тражиће.
ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹೂಳಿಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನಿರಂತರವಾಗಿ ನೇಮಿಸುವರು. “‘ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
15 И проходиће земљу и ићи по њој, и ко види кости људске, начиниће код њих знак, докле их не укопају гробари у долини мноштва Гоговог.
ಪ್ರಯಾಣಿಕರು ಆ ದೇಶದಲ್ಲಿ ಹಾದುಹೋಗುತ್ತಿರುವಾಗ ಯಾವುದಾದರೊಂದು ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ಹಾಕುವರು, ಹೂಣಿಡುವವರು ಅದನ್ನು ಹಾಮೋನ್ ಗೋಗಿನ ಕಣಿವೆಯಲ್ಲಿ ಹೂಳಿಡುವ ತನಕ ಆ ಗುರುತು ಹಾಗೆಯೇ ಇರುವದು.
16 А и граду ће бити име Амона; и тако ће очистити земљу.
ಆ ನಗರಕ್ಕೆ ಹಾಮೋನ ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’
17 Ти, дакле, сине човечји, овако говори Господ Господ, реци птицама, свакојаким птицама и свим зверима пољским: Скупите се и ходите, саберите се са свих страна на жртву моју, коју кољем за вас, на велику жртву на горама Израиљевим, и јешћете меса и пићете крви;
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.
18 Јешћете меса јуначког и пићете крви кнезова земаљских, овнова, јагањаца и јараца и телаца, све угојене стоке васанске.
ಟಗರು, ಕುರಿಮರಿ, ಹೋತ, ಹೋರಿ ಮತ್ತು ಬಾಷಾನಿನ ಕೊಬ್ಬಿದ ಪ್ರಾಣಿಗಳಂತೆ ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ರಾಜಕುಮಾರರ ರಕ್ತವನ್ನು ಕುಡಿಯುವಿರಿ.
19 И јешћете претилине да ћете се наситити, и пићете крви да ћете се опити од жртава мојих што ћу вам наклати.
ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವವರೆಗೂ ಕೊಬ್ಬನ್ನು ತಿಂದು ಮತ್ತೇರುವವರೆಗೂ ರಕ್ತವನ್ನು ಕುಡಿಯಬಹುದು.
20 И наситићете се за мојим столом коња и коњика, јунака и свакојаких војника, говори Господ Господ.
ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.
21 И пустићу славу своју међу народе, и сви ће народи видети суд мој који ћу учинити и моју руку коју ћу дигнути на њих.
“ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು.
22 И познаће дом Израиљев да сам ја Господ Бог њихов, од оног дана и после.
ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.
23 И народи ће познати да се за своје безакоње зароби дом Израиљев, што мени згрешише, те сакрих лице своје од њих, и дадох их у руке непријатељима њиховим, и сви падоше од мача.
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.
24 По нечистоти њиховој и по преступу њихову учиних им и сакрих лице своје од њих.
ಅವರ ಅಶುದ್ಧತ್ವದ ಪ್ರಕಾರವೂ ಅವರ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
25 Тога ради овако говори Господ Господ: Повратићу робље Јаковљево и смиловаћу се свему дому Израиљевом и ревноваћу за свето име своје,
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.
26 Пошто поднесу срамоту своју и све преступе своје, којима ми преступише док сеђаху у својој земљи без страха и никога не беше да их плаши,
ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
27 Кад их доведем натраг из народа и саберем их из земаља непријатеља њихових, и посветим се у њима пред многим народима.
ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ತಮ್ಮ ನಾಚಿಕೆಯನ್ನು ಮರೆತುಬಿಡುವರು.
28 И познаће да сам ја Господ Бог њихов кад одведавши их у ропство међу народе опет их саберем у земљу њихову не оставивши их ниједнога онде.
ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.
29 И нећу више крити лице своје од њих кад излијем Дух свој на дом Израиљев, говори Господ Господ.
ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

< Књига пророка Језекиља 39 >