< 1 Мојсијева 24 >

1 А Аврам беше стар и временит, и Господ беше благословио Аврама у свему;
ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.
2 И рече Аврам слузи свом најстаријем у кући својој, који беше над свим добром његовим: Метни руку своју под стегно моје,
ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
3 Да те закунем Господом Богом небеским и Богом земаљским да нећеш довести жене сину мом између кћери ових Хананеја, међу којима живим;
ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,
4 Него да ћеш отићи у земљу моју и у род мој и довести жену сину мом Исаку.
ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.
5 А слуга му рече: и ако девојка не хтедбуде поћи са мном у ову земљу; хоћу ли одвести сина твог у земљу из које си се иселио?
ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು.
6 А Аврам му рече: Пази да не одведеш сина мог онамо.
ಅಬ್ರಹಾಮನು ಅವನಿಗೆ, “ಅಲ್ಲಿಗೆ ನನ್ನ ಮಗನನ್ನು ಎಂದಿಗೂ ಕರೆದುಕೊಂಡು ಹೋಗಲೇ ಬಾರದು.
7 Господ Бог небески, који ме је узео из дома оца мог и из земље рода мог, и који ми је рекао и заклео ми се говорећи: Семену ћу твом дати земљу ову, Он ће послати анђела свог пред тобом да доведеш жену сину мом оданде.
ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.
8 Ако ли девојка не хтедбуде поћи с тобом, онда да ти је проста заклетва моја; само сина мог немој одвести онамо.
ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
9 И метну слуга руку своју под стегно Авраму господару свом, и закле му се за ово.
ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು.
10 Тада слуга узе десет камила између камила господара свог да иде, јер све благо господара његовог беше под његовом руком; и отишавши дође у Месопотамију до града Нахоровог.
೧೦ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
11 И пусти камиле да полежу иза града код студенца пред вече кад излазе грађанке да захватају воде;
೧೧ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.
12 И рече: Господе Боже господара мог Аврама, дај ми срећу данас и учини милост господару мом Авраму.
೧೨“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.
13 Ево, ја ћу стајати код овог студенца, а грађанке ће доћи да захватају воде.
೧೩ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.
14 Којој девојци кажем: Нагни крчаг свој да се напијем, а она рече: На пиј, и камиле ћу ти напојити; дај то да буде она коју си наменио слузи свом Исаку; и по томе да познам да си учинио милост господару мом.
೧೪ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.
15 И он још не изговори, а то Ревека, кћи Ватуила сина Мелхе жене Нахора брата Аврамовог, дође с крчагом на рамену.
೧೫ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
16 И беше врло лепа, још девојка, још је човек не беше познао. Она сиђе на извор, и наточи крчаг, и пође;
೧೬ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.
17 А слуга искочи пред њу, и рече; дај ми да се напијем мало воде из крчага твог.
೧೭ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು.
18 А она рече: На пиј, господару. И брже спусти крчаг на руку своју, и напоји га.
೧೮ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ “ಕುಡಿಯಿರಿ” ಎಂದು ಕುಡಿಯಲು ಕೊಟ್ಟಳು.
19 И кад га напоји, рече: и камилама ћу твојим налити нека се напију.
೧೯ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ,
20 И брже изручи крчаг свој у појило, па опет отрча на студенац да налије, и нали свим камилама његовим.
೨೦ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.
21 А човек јој се дивљаше, и ћуташе, неће ли познати је ли Господ дао срећу путу његовом или није.
೨೧ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.
22 А кад се камиле напише, извади човек златну гривну од по сикала и метну јој око чела, и две наруквице метну јој на руке од десет сикала злата.
೨೨ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.
23 И рече: Чија си кћи? Кажи ми. Има ли у кући оца твог места за нас да преноћимо?
೨೩ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು.
24 А она му рече: Ја сам кћи Ватуила сина Мелшиног, кога роди Нахору.
೨೪ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು.
25 Још рече: Има у нас много сламе и пиће и места за ноћиште.
೨೫ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು.
26 Тада човек савивши се поклони се Господу,
೨೬ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,
27 И рече: Благословен да је Господ Бог господара мог Аврама, што не остави милост своју и веру своју према господару мом, и путем доведе ме Господ у дом родбине господара мог.
೨೭“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.
28 А девојка отрча и све ово каза у дому матере своје.
೨೮ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು.
29 А Ревека имаше брата, коме име беше Лаван; и истрча Лаван к човеку на студенац,
೨೯ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
30 Како виде гривну и наруквице на рукама сестре своје и чу где Ревека сестра му рече: Тако ми каза човек; дође к човеку; а он стајаше код камила на студенцу.
೩೦ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.
31 И рече: Ходи, који си благословен од Господа; што би стајао напољу? Спремио сам кућу, има места и за камиле.
೩೧ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.
32 И доведе човека у кућу, и растовари камиле; и додаше сламе и пиће камилама, и донесоше воде за ноге њему и људима што беху с њим;
೩೨ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.
33 И поставише му да једе; али он рече: Нећу јести докле не кажем ствар своју. А Лаван му рече: Говори.
೩೩ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು.
34 Тада рече: Ја сам слуга Аврамов.
೩೪ಆಗ ಅವನು, “ನಾನು ಅಬ್ರಹಾಮನ ಸೇವಕನು.
35 А Господ је благословио господара мог веома, те је постао велик, и дао му је оваца и говеда, и сребра и злата, и слуга и слушкиња, и камила и магараца.
೩೫ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.
36 И још Сара жена господара мог роди сина господару мом у старости његовој, и он му даде све што има.
೩೬ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.
37 А мене закле господар мој говорећи: Немој довести сину мом жене између кћери ових Хананеја, међу којима живим;
೩೭ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ
38 Него иди у дом оца мог и у род мој, да доведеш жену сину мом.
೩೮ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’
39 А ја рекох господару свом:
೩೯ನಾನು ನನ್ನ ದಣಿಗೆ, ‘ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ’” ಎಂದು ಹೇಳಲು.
40 Може бити да девојка неће хтети поћи са мном.
೪೦ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.
41 А он ми рече: Господ, по чијој вољи свагда живех, послаће анђела свог с тобом, и даће срећу твом путу да доведеш жену сину мом од рода мог, из дома оца мог.
೪೧ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ” ಎಂದು ಹೇಳಿದನು.
42 Онда ће ти бити проста заклетва моја, кад отидеш у род мој; ако ти је и не даду, опет ће ти бити проста заклетва моја.
೪೨ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ
43 И кад дођох данас на студенац, рекох: Господе Боже господара мог Аврама, ако си дао срећу путу мом, којим идем,
೪೩ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು,
44 Ево, ја ћу стајати код студенца: која девојка дође да захвати воде, и ја јој кажем: Дај ми да се напијем мало воде из крчага твог,
೪೪‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು,
45 А она ми одговори: и ти пиј и камилама ћу твојим налити; то нека буде жена коју је наменио Господ сину господара мог.
೪೫ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು.
46 Ја још не изговорих у срцу свом, а дође Ревека с крчагом на рамену, и сишавши на извор захвати; и ја јој рекох: Дај ми да се напијем.
೪೬ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.
47 А она брже спустивши са себе крчаг рече: На пиј, и камиле ћу ти напојити. И кад се напих, напоји и камиле моје.
೪೭ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.
48 И запитах је говорећи: Чија си кћи? А она одговори: Ја сам кћи Ватуила сина Нахоровог, ког му роди Мелха. Тада јој метнух гривну око чела и наруквице на руке;
೪೮ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.
49 И падох и поклоних се Господу, и захвалих Господу Богу господара мог Аврама, што ме доведе правим путем да нађем кћер брата господара свог за сина његовог.
೪೯ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.
50 Ако ћете дакле учинити љубав и веру господару мом, кажите ми; ако ли нећете, кажите ми, да идем на десно или на лево.
೫೦ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;
51 А Лаван и Ватуило одговарајући рекоше: Од Господа је ово дошло; ми ти не можемо казати ни зло ни добро. Ето, Ревека је у твојој власти, узми је па иди, и нека буде жена сину твог господара, као што каза Господ.
೫೧ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು.
52 А кад чу слуга Аврамов речи њихове, поклони се Господу до земље;
೫೨ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.
53 И извади закладе сребрне и златне и хаљине, и даде Ревеци; такође и брату њеном и матери њеној даде дарове.
೫೩ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
54 Потом једоше и пише он и људи који беху с њим, и преноћише. А кад ујутру усташе, рече слуга: Пустите ме господару мом.
೫೪ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.
55 А брат и мати њена рекоше: Нека остане девојка код нас који дан, барем десет дана, па онда нека иде.
೫೫ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
56 А он им рече: Немојте ме задржавати, кад је Господ дао срећу мом путу; пустите ме да идем господару свом.
೫೬ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.
57 Тада рекоше: Да зовемо девојку, и упитамо шта она вели.
೫೭ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ” ಎಂದರು.
58 И дозваше Ревеку и рекоше јој: Хоћеш ићи с овим човеком? А она одговори: Хоћу.
೫೮ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು.
59 И пустише Ревеку сестру своју и дојкињу њену са слугом Аврамовим и људима његовим.
೫೯ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.
60 И благословише Ревеку и рекоше јој: Сестро наша, да се намножиш на хиљаде хиљада, и семе твоје да наследи врата својих непријатеља!
೬೦ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
61 И подиже се Ревека с девојкама својим, и поседаше на камиле, и пођоше с човеком; и слуга узевши Ревеку отиде.
೬೧ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.
62 А Исак иђаше враћајући се од студенца Живога који ме виде јер живљаше у јужном крају;
೬೨ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.
63 А беше изашао Исак у поље пред вече да се помоли Богу; и подигавши очи своје угледа камиле где иду.
೬೩ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.
64 И Ревека подигавши очи своје угледа Исака, те скочи с камиле,
೬೪ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು.
65 И рече слузи: Ко је онај човек што иде преко поља пред нас? А слуга рече: Оно је господар мој. И она узе покривало и покри лице.
೬೫ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.
66 И приповеди слуга Исаку све што је свршио.
೬೬ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.
67 И одведе је Исак у шатор Саре матере своје; и узе Ревеку, и она му поста жена, и омиле му. И Исак се утеши за матером својом.
೬೭ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.

< 1 Мојсијева 24 >