< 1 Мојсијева 6 >

1 А кад се људи почеше множити на земљи, и кћери им се народише.
ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು
2 Видећи синови Божји кћери човечије како су лепе узимаше их за жене које хтеше.
ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
3 А Господ рече: Неће се дух мој до века прети с људима, јер су тело; нека им још сто двадесет година.
ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
4 А беше тада дивова на земљи; а и после, кад се синови Божји састајаху са кћерима човечијим, па им оне рађаху синове; то беху силни људи, од старине на гласу.
ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
5 И Господ видећи да је неваљалство људско велико на земљи, и да су све мисли срца њиховог свагда само зле,
ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
6 Покаја се Господ што је створио човека на земљи, и би му жао у срцу.
ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
7 И рече Господ: Хоћу да истребим са земље људе, које сам створио, од човека до стоке и до ситне животиње и до птица небеских; јер се кајем што сам их створио.
ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
8 Али Ноје нађе милост пред Господом.
ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
9 Ово су догађаји Нојеви: Ноје беше човек праведан и безазлен свог века; по вољи Божјој свагда живљаше Ноје.
ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
10 И роди Ноје три сина: Сима, Хама и Јафета.
೧೦ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
11 А земља се поквари пред Богом, и напуни се земља безакоња.
೧೧ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
12 И погледа Бог на земљу, а она беше покварена; јер свако тело поквари пут свој на земљи.
೧೨ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
13 И рече Бог Ноју: Крај сваком телу дође преда ме, јер напунише земљу безакоња; и ево хоћу да их затрем са земљом.
೧೩ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
14 Начини себи ковчег од дрвета гофера, и начини прегратке у ковчегу; и затопи га смолом изнутра и споља.
೧೪ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
15 И начини га овако; у дужину нека буде триста лаката, у ширину педесет лаката, и у висину тридесет лаката;
೧೫ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
16 Пусти доста светлости у ковчег; и кров му сведи озго од лакта; и удари врата ковчегу са стране; и начини га на три боја: доњи, други и трећи.
೧೬ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
17 Јер ево пустићу потоп на земљу да истребим свако тело у коме има жива душа под небом; шта је год на земљи све ће изгинути.
೧೭ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
18 Али ћу с тобом учинити завет свој: и ући ћеш у ковчег ти и синови твоји и жена твоја и жене синова твојих с тобом.
೧೮“ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
19 И од свега живог, од сваког тела, узећеш у ковчег по двоје, да сачуваш у животу са собом, а мушко и женско нека буде.
೧೯ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
20 Од птица по врстама њиховим, од стоке по врстама њеним, и од свега што се миче на земљи по врстама његовим, од свега по двоје нека уђе с тобом, да их сачуваш у животу.
೨೦ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
21 И узми са собом свега што се једе, и чувај код себе, да буде хране теби и њима.
೨೧ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.
22 И Ноје учини, како му заповеди Бог, све онако учини.
೨೨ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.

< 1 Мојсијева 6 >

The World is Destroyed by Water
The World is Destroyed by Water