< Књига пророка Јоне 4 >

1 А Јони би врло недраго, и расрди се.
ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು.
2 И помоли се Господу и рече: Господе! Не рекох ли то кад још бејах у својој земљи? Зато хтедох пре побећи у Тарсис; јер знах да си Ти Бог милостив и жалостив, спор на гнев и обилан милосрђем и кајеш се ода зла.
ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.
3 Сада Господе, узми душу моју од мене, јер ми је боље умрети него живети.
ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.
4 А Господ рече: Је ли добро што се срдиш?
ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.
5 И Јона изиђе из града, и седе с истока граду и начини онде колибу, и сеђаше под њом у хладу да види шта ће бити од града.
ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು.
6 А Господ Бог заповеди, те узрасте тиква над Јоном да му буде сен над главом да му помогне у муци његовој; и Јона се обрадова тикви веома.
ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.
7 Потом заповеди Бог, те дође црв у зору сутрадан, и подгризе тикву, те усахну.
ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.
8 И кад ограну сунце, посла Бог сув источни ветар; и сунце стаде жећи Јону по глави тако да обамираше и пожеле да умре говорећи: Боље ми је умрети него живети.
ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.
9 А Бог рече Јони: Је ли добро што се срдиш тикве ради? А он рече: Добро је што се срдим до смрти.
ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.
10 А Господ му рече: Теби је жао тикве, око које се ниси трудио, и које ниси одгајио, него једну ноћ узрасте а другу ноћ пропаде.
ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,
11 А мени да не буде жао Ниневије, великог града, у коме има више од сто и двадесет хиљада људи који још не знају шта је десно шта ли лево, и много стоке?
ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.

< Књига пророка Јоне 4 >