< Књига о судијама 12 >

1 А људи од племена Јефремовог скупише се, и прешавши на север рекоше Јефтају: Зашто си ишао у бој на синове Амонове а нас ниси позвао да идемо с тобом? Спалићемо огњем дом твој и тебе.
ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.
2 А Јефтај им рече: Имах велику распру са синовима Амоновим ја и мој народ, и позвах вас, али ме не избависте из руку његових.
ಆಗ ಅವನು ಅವರಿಗೆ, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.
3 Па видећи да ме не избависте, ставих душу своју у руку своју и отидох на синове Амонове, и Господ ми их даде у руке; па што сте сада дошли к мени да се бијете са мном?
ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,
4 Тада Јефтај скупи све људе од Галада, и удари на Јефрема; и људи од Галада побише Јефрема; јер говораху: Бегунци сте Јефремови ви, људи од Галада, који се бавите међу Јефремом и међу Манасијом.
ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು “ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.
5 И Галад узе Јефрему бродове јорданске. И кад који од Јефрема добеже и рече: Пусти ме да пређем, рекоше му они од Галада: Јеси ли од Јефрема? И кад он рече: Нисам,
ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.
6 Онда му рекоше: Реци: Шиболет. А он рече: Сиболет, не могући добро изговорити. Тада га ухватише и заклаше на броду јорданском. И погибе у оно време из племена Јефремовог четрдесет и две хиљаде.
ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.
7 И Јефтај би судија Израиљу шест година; и умре, и би погребен у граду галадском.
ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು.
8 А после њега би судија Израиљу Авесан из Витлејема.
ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.
9 И имаше тридесет синова и тридесет кћери, које разуда из куће, а тридесет девојака доведе синовима својим из других кућа; и би судија Израиљу седам година.
ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.
10 И потом умре Авесан, и би погребен у Витлејему.
೧೦ಇವನು ಇಸ್ರಾಯೇಲ್ಯರನ್ನು ಏಳು ವರ್ಷ ಪಾಲಿಸಿದನು. ಇಬ್ಚಾನನು ಸತ್ತ ಮೇಲೆ ಅವನ ಶವವನ್ನು ಬೇತ್ಲೆಹೇಮಿನಲ್ಲಿ ಸಮಾಧಿಮಾಡಿದರು.
11 А после њега би судија Израиљу Елон о д Завулона; он би судија Израиљу десет година.
೧೧ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು.
12 Потом умре Елон од Завулона и би погребен у Ајалону у земљи Завулоновој.
೧೨ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.
13 После њега би судија у Израиљу Авдон син Елилов Фаратоњанин.
೧೩ಇವನ ತರುವಾಯ ಪಿರಾತೋನಿನವನೂ, ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರ ಪಾಲಕನಾದನು.
14 Он имаше четрдесет синова и тридесет унука, који јахаху седамдесеторо магаради. И би судија Израиљу осам година.
೧೪ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;
15 Потом умре Авдон син Елилов Фаратоњанин, и би погребен у Фаратону у земљи Јефремовој на гори амаличкој.
೧೫ಅವನ ಶವವನ್ನು ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.

< Књига о судијама 12 >