< Лука 12 >
1 Кад се на њих скупише хиљаде народа да стадоше газити један другог, онда поче најпре говорити ученицима својим: Чувајте се квасца фарисејског, који је лицемерје.
೧ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
2 Јер ништа није сакривено што се неће открити, ни тајно што се неће дознати;
೨ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.
3 Јер шта у мраку рекосте, чуће се на виделу; и шта на ухо шаптасте у клетима, проповедаће се на крововима.
೩ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
4 Али вам кажем, пријатељима својим: не бојте се од оних који убијају тело и потом не могу ништа више учинити.
೪“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
5 Него ћу вам казати кога да се бојите: бојте се Оног који има власт пошто убије бацити у пакао; да, кажем вам, Оног се бојте. (Geenna )
೫ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. (Geenna )
6 Не продаје ли се пет врабаца за два динара? И ниједан од њих није заборављен пред Богом.
೬ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.
7 А у вас је и коса на глави избројана. Не бојте се дакле; ви сте бољи од много врабаца.
೭ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
8 Него вам кажем: који год призна мене пред људима признаће и Син човечији њега пред анђелима Божијим;
೮“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
9 А који се одрече мене пред људима њега ће се одрећи пред анђелима Божијим.
೯ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.
10 И сваки који рече реч на Сина човечијег опростиће му се, а који хули на Светог Духа неће му се опростити.
೧೦ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
11 А кад вас доведу у зборнице и на судове и пред поглаваре, не брините се како ћете или шта одговорити, или шта ћете казати;
೧೧ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
12 Јер ће вас Свети Дух научити у онај час шта треба рећи.
೧೨ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.
13 Рече Му пак неки из народа: Учитељу! Реци брату мом да подели са мном достојање.
೧೩ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,
14 А Он му рече: Човече! Ко је мене поставио судијом или кметом над вама?
೧೪ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
15 А њима рече: Гледајте и чувајте се од лакомства; јер нико не живи оним што је сувише богат.
೧೫ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
16 Каза им, пак, причу говорећи: У једног богатог човека роди њива.
೧೬ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.
17 И мишљаше у себи говорећи: Шта ћу чинити? Немам у шта сабрати своју летину.
೧೭ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,
18 И рече: Ево ово ћу чинити: покварићу житнице своје и начинићу веће; и онде ћу сабрати сва своја жита и добро своје;
೧೮‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,
19 И казаћу души својој: Душо! Имаш много имање на много година; почивај, једи, пиј, весели се.
೧೯ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.
20 А Бог њему рече: Безумниче! Ову ноћ узеће душу твоју од тебе; а шта си приправио чије ће бити?
೨೦“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
21 Тако бива ономе који себи тече благо, а не богати се у Бога.
೨೧ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
22 А ученицима својим рече: Зато вам кажем: не брините се душом својом шта ћете јести; ни телом у шта ћете се обући:
೨೨ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.
23 Душа је претежнија од јела и тело од одела.
೨೩ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.
24 Погледајте гавране како не сеју ни жању, који немају подруме ни житнице, и Бог их храни: а колико сте ви претежнији од птица?
೨೪ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
25 А ко од вас бринући се може примакнути расту свом лакат један?
೨೫ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲುನಿಮ್ಮಲ್ಲಿ ಯಾರಿಂದಾದೀತು?
26 А кад ни најмање шта не можете, зашто се бринете за остало?
೨೬ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?
27 Погледајте љиљане како расту: не труде се, нити преду; али ја вам кажем да ни Соломун у свој слави својој не обуче се као један од њих.
೨೭ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
28 А кад траву по пољу, која данас јесте, а сутра се у пећ баца, Бог тако одева, а камоли вас, маловерни!
೨೮ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
29 И ви не иштите шта ћете јести или шта ћете пити, и не брините се;
೨೯ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.
30 Јер ово све ишту и незнабошци овог света; а Отац ваш зна да вама треба ово.
೩೦ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
31 Него иштите царство Божије, и ово ће вам се све додати.
೩೧ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
32 Не бој се мало стадо! Јер би воља вашег Оца да вам да царство.
೩೨ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
33 Продајте шта имате и дајте милостињу; начините себи торбе које неће оветшати, хазну која се никад неће испразнити, на небесима, где се лупеж не прикучује нити мољац једе.
೩೩ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
34 Јер где је ваше благо онде ће бити и срце ваше.
೩೪ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
35 Нека буду ваша бедра запрегнута и свеће запаљене;
೩೫“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.
36 И ви као људи који чекају господара свог кад се врати са свадбе да му одмах отворе како дође и куцне.
೩೬ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
37 Благо оним слугама које нађе господар кад дође, а они страже. Заиста вам кажем да ће се запрегнути, и посадиће их, и приступиће, те ће им служити.
೩೭ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
38 И ако дође у другу стражу, и у трећу стражу дође, и нађе их тако, благо оним слугама.
೩೮ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
39 Али ово знајте: кад би знао домаћин у који ће час доћи лупеж, чувао би и не би дао поткопати кућу своју.
೩೯ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
40 И ви, дакле, будите готови: јер у који час не мислите доћи ће Син човечији.
೪೦ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.
41 А Петар Му рече: Господе! Говориш ли нама ову причу или свима?
೪೧ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,
42 А Господ рече: Ко је дакле тај верни и мудри пристав ког постави господар над чељади својом да им даје храну на оброк?
೪೨ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
43 Благо том слузи ког дошавши господар његов нађе да извршује тако.
೪೩ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು.
44 Заиста вам кажем: над свим својим имањем поставиће га.
೪೪ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
45 Ако ли каже слуга у срцу свом: Неће мој господар још задуго доћи; и стане бити слуге и слушкиње, и јести и пити, и опијати се;
೪೫ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
46 Доћи ће господар тога слуге у дан кад се не нада, и у час кад не мисли, и расећи ће га, и део његов метнуће с невернима.
೪೬ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.
47 А онај слуга који зна вољу господара свог, и није се приправио, нити учинио по вољи његовој, биће врло бијен;
೪೭ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
48 А који не зна па заслужи бој, биће мало бијен. Коме је год много дано много ће се искати од њега; а коме предаше највише највише ће искати од њега.
೪೮ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
49 Ја сам дошао да бацим огањ на земљу; и како би ми се хтело да се већ запалио!
೪೯“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
50 Али се мени ваља крстити крштењем, и како ми је тешко док се не сврши!
೫೦ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.
51 Мислите ли да сам ја дошао да дам мир на земљу? Не, кажем вам, него раздор.
೫೧ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
52 Јер ће, одселе, пет у једној кући бити раздељени, устаће три на два, и два на три.
೫೨ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
53 Устаће отац на сина и син на оца; мати на кћер и кћи на матер; свекрва на снаху своју и снаха на свекрву своју.
೫೩ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.
54 А народу говораше: Кад видите облак где се диже од запада одмах кажете: Биће дажд; и бива тако.
೫೪ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
55 И кад видите југ где дува кажете: Биће врућина; и бива.
೫೫ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
56 Лицемери! Лице неба и земље умете познавати, а време ово како не познајете?
೫೬ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
57 Зашто пак и сами од себе не судите праведно?
೫೭“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?
58 Јер кад идеш са својим супарником кнезу, гледај не би ли се на путу с њим поравнао да те не притегне судији, и судија да те не преда слузи, и слуга да те не баци у тамницу.
೫೮ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.
59 Кажем ти: нећеш оданде изићи док не даш и последњи динар.
೫೯ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.