< Лука 19 >
1 И кад уђе у Јерихон и пролажаше кроза њ,
೧ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ,
2 И гле, човек по имену Закхеј, који беше старешина царинички, и беше богат,
೨ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.
3 И искаше да види Исуса да Га позна; и не могаше од народа, јер беше малог раста;
೩ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.
4 И потрчавши напред, попе се на дуд да Га види; јер Му је онуда требало проћи.
೪ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
5 И кад дође Исус на оно место, погледавши горе виде га, и рече му: Закхеју! Сиђи брзо; јер ми данас ваља бити у твојој кући.
೫ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,
6 И сиђе брзо; и прими Га радујући се.
೬ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.
7 И сви, кад видеше, викаху на Њега говорећи да грешном човеку дође у кућу.
೭ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
8 А Закхеј стаде и рече Господу: Господе! Ево пола имања свог даћу сиромасима, и ако сам кога занео вратићу онолико четворо.
೮ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
9 А Исус му рече: Данас дође спасење кући овој; јер је и ово син Авраамов.
೯ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.
10 Јер је Син човечији дошао да нађе и спасе шта је изгубљено.
೧೦ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
11 А кад они то слушаху настави казивати причу; јер беше близу Јерусалима, и мишљаху да ће се одмах јавити царство Божије.
೧೧ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.
12 Рече дакле: Један човек од доброг рода отиде у далеку земљу да прими себи царство, и да се врати.
೧೨ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
13 Дозвавши пак десет својих слуга даде им десет кеса, и рече им: Тргујте док се ја вратим.
೧೩ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.
14 И грађани његови мржаху на њега, и послаше за њим посланике говорећи: Нећемо да он царује над нама.
೧೪ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
15 И кад се он врати, пошто прими царство, рече да дозову оне слуге којима даде сребро, да види шта је који добио.
೧೫ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
16 Тада дође први говорећи: Господару! Кеса твоја донесе десет кеса.
೧೬ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,
17 И рече му: Добро, добри слуго; кад си ми у малом био веран ево ти власт над десет градова.
೧೭ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
18 И дође други говорећи: Господару! Кеса твоја донесе пет кеса.
೧೮ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,
19 А он рече и ономе: и ти буди над пет градова.
೧೯ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
20 И трећи дође говорећи: Господару! Ево твоја кеса коју сам завезао у убрус и чувао.
೨೦ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.
21 Јер сам се бојао тебе: јер си човек тврд: узимаш шта ниси оставио, и жњеш шта ниси сејао.
೨೧
22 А господар му рече: По твојим ћу ти речима судити, зли слуго! Знао си да сам ја тврд човек, узимам шта нисам сејао:
೨೨ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?
23 Па зашто ниси дао моје сребро трговцима, и ја дошавши примио бих га с добитком?
೨೩ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,
24 И рече онима што стајаху пред њим: Узмите од њега кесу и подајте ономе што има десет кеса.
೨೪ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.
25 И рекоше му: Господару! Он има десет кеса.
೨೫ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು.
26 А он им одговори: Јер вам кажем да ће се свакоме који има дати: а од оног који нема узеће се од њега и оно што има.
೨೬ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ
27 А оне моје непријатеље који нису хтели да ја будем цар над њима, доведите амо, и исеците преда мном.
೨೭ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.
28 И казавши ово пође напред, и иђаше горе у Јерусалим.
೨೮ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.
29 И кад се приближи Витфази и Витанији код горе која се зваше Маслинска, посла двојицу од ученика својих
೨೯ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,
30 Говорећи: Идите у то село према вама, и кад уђете у њега наћи ћете магаре привезано на које никакав човек никад није уседао; одрешите га и доведите.
೩೦“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.
31 И ако вас ко упита: Зашто дрешите: овако му кажите: Оно Господу треба.
೩೧ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’” ಎಂದು ಹೇಳಿಕಳುಹಿಸಿದನು.
32 А кад отидоше послани, нађоше као што им каза.
೩೨ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
33 А кад они дрешаху магаре рекоше им господари од њега: Зашто дрешите магаре?
೩೩ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ
34 А они рекоше: Оно Господу треба.
೩೪ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು.
35 И доведоше га к Исусу, и бацише хаљине своје на магаре, и посадише Исуса.
೩೫ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.
36 А кад иђаше, простираху хаљине своје по путу.
೩೬ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37 А кад се приближи већ да сиђе с горе Маслинске, поче све мноштво ученика у радости хвалити Бога гласно за сва чудеса што су видели,
೩೭ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,
38 Говорећи: Благословен цар који иде у име Господње! Мир на небу и слава на висини!
೩೮“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
39 И неки фарисеји из народа рекоше Му: Учитељу! Запрети ученицима својим.
೩೯ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,
40 И одговарајући рече им: Кажем вам: ако они ућуте, камење ће повикати.
೪೦ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.
41 И кад се приближи, угледа град и заплака за њим
೪೧ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
42 Говорећи: Кад би и ти знао у овај твој дан шта је за мир твој! Али је сад сакривено од очију твојих.
೪೨“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
43 Јер ће доћи дани на тебе, и окружиће те непријатељи твоји опкопима, и опколиће те, и обузеће те са свију страна;
೪೩ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.
44 И разбиће тебе и децу твоју у теби, и неће оставити у теби камена на камену, зато што ниси познао време у коме си похођен.
೪೪
45 И ушавши у цркву стаде изгонити оне што продаваху у њој и куповаху,
೪೫ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,
46 Говорећи им: У писму стоји: Дом мој дом је молитве, а ви начинисте од њега пећину хајдучку.
೪೬“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.
47 И учаше сваки дан у цркви. А главари свештенички и књижевници и старешине народне гледаху да Га погубе.
೪೭ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.
48 И не налажаху шта би Му учинили; јер сав народ иђаше за Њим, и слушаху Га.
೪೮ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.