< Лука 2 >
1 У то време пак изиђе заповест од ћесара Августа да се препише сав свет.
೧ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.
2 Ово је био први препис за владања Киринова Сиријом.
೨ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.
3 И пођоше сви да се препишу, сваки у свој град.
೩ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.
4 Тада пође и Јосиф из Галилеје, из града Назарета у Јудеју у град Давидов који се зваше Витлејем, јер он беше из дома и племена Давидовог,
೪ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
5 Да се препише с Маријом, испрошеном за њега женом, која беше трудна.
೫
6 И кад онамо беху, дође време да она роди.
೬ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು.
7 И роди Сина свог првенца, и пови Га, и метну Га у јасле; јер им не беше места у гостионици.
೭ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.
8 И беху пастири у оном крају који чуваху ноћну стажу код стада свог.
೮ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,
9 И гле, анђео Господњи стаде међу њима, и слава Господња обасја их; и уплашише се врло.
೯ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.
10 И рече им анђео: Не бојте се; јер гле, јављам вам велику радост која ће бити свему народу.
೧೦ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
11 Јер вам се данас роди спас, који је Христос Господ, у граду Давидовом.
೧೧ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
12 И ето вам знака: Наћи ћете дете повито где лежи у јаслама.
೧೨ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು.
13 И уједанпут постаде с анђелом мноштво војника небеских, који хваљаху Бога говорећи:
೧೩ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
14 Слава на висини Богу, и на земљи мир, међу људима добра воља.
೧೪
15 И кад анђели отидоше од њих на небо, пастири говораху један другом: Хајдемо до Витлејема, да видимо то што се тамо догодило шта нам каза Господ.
೧೫ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,
16 И дођоше брзо, и нађоше Марију и Јосифа и дете где лежи у јаслама.
೧೬ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.
17 А кад видеше, казаше све што им је казано за то дете.
೧೭ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು.
18 И сви који чуше дивише се томе што им казаше пастири.
೧೮ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.
19 А Марија чуваше све речи ове и слагаше их у срцу свом.
೧೯ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.
20 И вратише се пастири славећи и хвалећи Бога за све што чуше и видеше, као што им би казано.
೨೦ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
21 И кад се наврши осам дана да Га обрежу, наденуше Му име Исус, као што је анђео рекао док се још није био ни заметнуо у утроби.
೨೧ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.
22 И кад дође време да иду на молитву по закону Мојсијевом, донеше Га у Јерусалим да Га метну пред Господа,
೨೨ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
23 (Као што је написано у закону Господњем: Да се свако дете мушко које најпре отвори материцу посвети Господу; )
೨೩
24 И да принесу прилог, као што је речено у закону Господњем, две грлице, или два голубића.
೨೪ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
25 И гле, беше у Јерусалиму човек по имену Симеун, и тај човек беше праведан и побожан, који чекаше утехе Израиљеве, и Дух Свети беше у њему.
೨೫ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
26 И њему беше Свети Дух казао да неће видети смрт док не види Христа Господњег.
೨೬ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
27 И каза му Дух те дође у цркву; и кад донесоше родитељи дете Исуса да сврше за Њега закон по обичају,
೨೭ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,
28 И он Га узе на руке своје, и хвали Бога и рече:
೨೮ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ,
29 Сад отпушташ с миром слугу свог, Господе, по речи својој;
೨೯“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
30 Јер видеше очи моје спасење Твоје,
೩೦ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.
31 Које си уготовио пред лицем свих народа,
೩೧
32 Видело, да обасја незнабошце, и славу народа Твог Израиља.
೩೨ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.
33 И Јосиф и мати Његова чуђаху се томе што се говораше за Њега.
೩೩ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು,
34 И благослови их Симеун, и рече Марији, матери Његовој: Гле, Овај лежи да многе обори и подигне у Израиљу, и да буде знак против кога ће се говорити
೩೪ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;
35 (А и теби самој пробошће нож душу), да се открију мисли многих срца.
೩೫ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
36 И беше Ана пророчица, кћи Фануилова, од колена Асировог; она је остарела, а седам је година живела с мужем од девојаштва свог,
೩೬ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
37 И удова око осамдесет и четири године, која не одлажаше од цркве, и служаше Богу дан и ноћ постом и молитвама.
೩೭ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
38 И она у тај час дође, и хваљаше Господа и говораше за Њега свима који чекаху спасења у Јерусалиму.
೩೮ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
39 И кад свршише све по закону Господњем, вратише се у Галилеју у град свој Назарет.
೩೯ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.
40 А дете растијаше и јачаше у духу, и пуњаше се премудрости, и благодат Божија беше на Њему.
೪೦ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.
41 И родитељи Његови иђаху сваке године у Јерусалим о празнику пасхе.
೪೧ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.
42 И кад Му би дванаест година, дођоше они у Јерусалим по обичају празника;
೪೨ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.
43 И кад дане проведоше и они се вратише, оста дете Исус у Јерусалиму; и не знаде Јосиф и мати Његова;
೪೩ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,
44 Него мислећи да је с друштвом, отидоше дан хода, и стадоше Га тражити по родбини и по знанцима.
೪೪ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,
45 И не нашавши Га вратише се у Јерусалим да Га траже.
೪೫ಆತನನ್ನು ಕಾಣದಿದ್ದಾಗ ತಿರುಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು.
46 И после три дана нађоше Га у цркви где седи међу учитељима, и слуша их, и пита их,
೪೬ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.
47 И сви који Га слушаху дивљаху се Његовом разуму и одговорима.
೪೭ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.
48 И видевши Га зачудише се, и мати Његова рече Му: Сине! Шта учини нама тако? Ево отац твој и ја са страхом тражисмо те.
೪೮ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,
49 И рече им: Зашто сте ме тражили? Зар не знате да мени треба у оном бити што је Оца мог?
೪೯ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.
50 И они не разумеше речи што им рече.
೫೦ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.
51 И сиђе с њима и дође у Назарет; и беше им послушан. И мати Његова чуваше све речи ове у срцу свом.
೫೧ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.
52 И Исус напредоваше у премудрости и у расту и у милости код Бога и код људи.
೫೨ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.