< Матеј 20 >
1 Јер је царство небеско као човек домаћин који ујутру рано изиђе да наима посленике у виноград свој.
೧“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
2 И погодивши се с посленицима по грош на дан посла их у виноград свој.
೨ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
3 И изишавши у трећи сат, виде друге где стоје на тргу беспослени,
೩ಅವನು ಪುನಃ ಸುಮಾರುಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
4 И њима рече: Идите и ви у мој виноград, и шта буде право даћу вам.
೪ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
5 И они отидоше. И опет изишавши у шести и девети сат, учини тако.
೫ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತುಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
6 И у једанаести сат изишавши нађе друге где стоје беспослени, и рече им: Што стојите овде сав дан беспослени?
೬ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
7 Рекоше му: Нико нас не најми. Рече им: Идите и ви у мој виноград, и шта буде право примићете.
೭ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
8 А кад би у вече, рече господар од винограда к приставу свом: Дозови посленике и подај им плату почевши од последњих до првих.
೮ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
9 И дошавши који су у једанаести сат најмљени примише по грош.
೯ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
10 А кад дођоше први, мишљаху да ће више примити: И примише и они по грош.
೧೦ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
11 И примивши викаху на господара.
೧೧ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,
12 Говорећи: Ови последњи један сат радише, и изједначи их с нама који смо се читав дан мучили и горели.
೧೨‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
13 А он одговарајући рече једном од њих: Пријатељу! Ја теби не чиним криво; Ниси ли погодио са мном по грош?
೧೩ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
14 Узми своје па иди; А ја хоћу и овом последњем да дам као и теби.
೧೪ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
15 Или зар ја нисам властан у свом чинити шта хоћу? Зар је око твоје зло што сам ја добар?
೧೫ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
16 Тако ће бити последњи први и први последњи; јер је много званих, а мало избраних.
೧೬ಹೀಗೆಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.
17 И пошавши Исус у Јерусалим узе насамо дванаест ученика на путу, и рече им:
೧೭ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
18 Ево идем у Јерусалим, и Син човечији биће предан главарима свештеничким и књижевницима; и осудиће Га на смрт;
೧೮“ನೋಡಿರಿನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
19 И предаће Га незнабошцима да Му се ругају и да Га бију и разапну; и трећи дан устаће.
೧೯ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನುಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
20 Тада приступи к Њему мати синова Зеведејевих са својим синовима клањајући Му се и молећи Га за нешто.
೨೦ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
21 А Он јој рече: Шта хоћеш? Рече Му: Заповеди да седу ова моја два сина, један с десне стране Теби, а један с леве стране Теби, у царству Твом.
೨೧ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
22 А Исус одговарајући рече: Не знате шта тражите; можете ли пити чашу коју ћу ја пити и крстити се крштењем којим се ја крстим? Рекоше Му: Можемо.
೨೨ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
23 И рече им: Чашу дакле моју испићете, и крстићете се крштењем којим се ја крстим; али да седете с десне стране мени и с леве, не могу ја дати, него коме је уготовио Отац мој.
೨೩ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
24 И кад чуше осталих десет ученика, расрдише се на та два брата.
೨೪ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
25 А Исус дозвавши их рече: Знате да кнезови народни заповедају народу, и поглавари управљају њим.
೨೫ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
26 Али међу вама да не буде тако; него који хоће да буде већи међу вама, да вам служи.
೨೬ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
27 И који хоће међу вама да буде први, да вам буде слуга.
೨೭ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
28 Као што ни Син човечији није дошао да Му служе, него да служи и да душу своју у откуп да за многе.
೨೮ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
29 И кад је излазио из Јерихона за Њим иђаше народ многи.
೨೯ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
30 И гле, два слепца сеђаху крај пута, и чувши да Исус пролази повикаше говорећи: Помилуј нас Господе, сине Давидов!
೩೦ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
31 А народ прећаше им да ућуте; а они још већма повикаше говорећи: Помилуј нас Господе, сине Давидов!
೩೧ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
32 И уставивши се Исус дозва их, и рече: Шта хоћете да вам учиним?
೩೨ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
33 Рекоше Му: Господе, да се отворе очи наше.
೩೩ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.
34 И смилова се Исус, и дохвати се очију њихових, и одмах прогледаше очи њихове, и отидоше за Њим.
೩೪ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.