< Псалми 95 >

1 Ходите, запевајмо Господу, покликнимо Богу, граду спасења свог!
ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.
2 Изађимо пред лице Његово с хвалом, у песмама покликнимо Му!
ಧನ್ಯವಾದದೊಡನೆ ಅವರ ಸನ್ನಿಧಿಯಲ್ಲಿ ಮುಂದೆ ಬಂದು ಕೀರ್ತನೆಗಳಿಂದ ಅವರಿಗೆ ಜಯಧ್ವನಿ ಮಾಡೋಣ.
3 Јер је Господ велик Бог и велик Цар над свим боговима.
ಯೆಹೋವ ದೇವರು ಮಹಾ ದೇವರು, ಎಲ್ಲಾ ದೇವರುಗಳ ಮೇಲೆ ಮಹಾರಾಜರೂ ಆಗಿದ್ದಾರೆ.
4 У Његовој су руци дубине земаљске, и висине горске Његове су.
ಅವರ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಇವೆ; ಬೆಟ್ಟಗಳ ಬಲವು ಅವರದೇ.
5 Његово је море и Он га је створио, и сухоту руке су Његове начиниле.
ಸಮುದ್ರವು ಅವರಿಗೆ ಸೇರಿದ್ದು; ಅವರು ಅದನ್ನು ಸೃಷ್ಟಿಸಿದರು; ಅವರ ಕೈಗಳು ಒಣ ಭೂಮಿಯನ್ನು ರೂಪಿಸಿದವು.
6 Ходите, поклонимо се, припаднимо, клекнимо пред Господом, Творцем својим.
ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.
7 Јер је Он Бог наш, и ми народ паше Његове и овце руке Његове. Сад кад бисте послушали глас Његов:
ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.
8 "Немојте да вам одрвени срце ваше као у Мериви, као у дан кушања у пустињи,
“ನೀವು ಮೆರೀಬದಲ್ಲಿ ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.
9 Где ме кушаше оци ваши, испиташе и видеше дело моје.
ನಾನು ಮಾಡಿದ್ದನ್ನು ಕಂಡಿದ್ದರೂ, ಅಲ್ಲಿ ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ, ನನ್ನನ್ನು ಪರೀಕ್ಷಿಸಿದರು.
10 Четрдесет година срдих се на род онај, и рекох: Ови људи тумарају срцем, и не знају путеве моје;
ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.
11 И зато се заклех у гневу свом да неће ући у мир мој."
ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.

< Псалми 95 >