< Откривење 2 >

1 Анђелу ефеске цркве напиши: Тако говори Онај што држи седам звезда у десници својој, и што ходи посред седам свећњака златних:
“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡುಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,
2 Знам твоја дела, и труд твој, и трпљење твоје, и да не можеш сносити зле, и искушао си оне који говоре да су апостоли, а нису и нашао си их лажне;
“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನುಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
3 И поднео си много, и трпљење имаш, и за име моје трудио си се, и ниси сустао.
ನೀನು ತಾಳ್ಮೆಯುಳ್ಳವನಾಗಿನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.
4 Но имам на тебе, што си љубав своју прву оставио.
ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.
5 Опомени се дакле откуда си спао, и покај се, и прва дела чини; ако ли не, доћи ћу ти скоро, и дигнућу свећњак твој с места његовог, ако се не покајеш.
ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.
6 Но ово имаш што мрзиш на дела Николинаца, на која и ја мрзим.
ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
7 Ко има ухо нека чује шта говори Дух црквама: који победи даћу му да једе од дрвета животног које је насред раја Божијег.
ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
8 И анђелу цркве смиранске напиши: Тако говори Први и Последњи, који беше мртав, и ево је жив:
“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂಹೇಳುವುದೇನಂದರೆ,
9 Знам твоја дела, и невољу и сиромаштво (али си богат), и хуле оних који говоре да су Јевреји а нису, него зборница сотонина.
ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮಂದಿರದವರಾಗಿದ್ದಾರೆ.
10 Не бој се ни ода шта што ћеш пострадати. Гле, ђаво ће неке од вас метати у тамницу, да се искушате, и имаћете невољу до десет дана. Буди веран до саме смрти, и даћу ти венац живота.
೧೦ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು.
11 Ко има ухо да чује нека чује шта говори Дух црквама: Који победи неће му наудити друга смрт.
೧೧ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
12 И анђелу пергамске цркве напиши: Тако говори Онај што има мач оштар с обе стране:
೧೨“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,
13 Знам дела твоја, и где живиш, где је престо сотонин; и држиш име моје, и ниси се одрекао вере моје и у оне дане у које је Антипа, верни сведок мој, убијен код вас, где живи сотона.
೧೩ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.
14 Но имам на тебе мало, што имаш ту који држе науку Валама, који учаше Валака да положи саблазан пред синовима Израиљевим, да једу жртве идолске, и да се курвају.
೧೪ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
15 Тако имаш и ти који држе науку Николинаца, на коју ја мрзим.
೧೫ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
16 Покај се дакле; ако ли не, доћи ћу ти скоро, и војеваћу с њима мачем уста својих.
೧೬ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು.
17 Ко има ухо да чује нека чује шта говори Дух црквама: који победи даћу му да једе од мане сакривене, и даћу му камен бео, и на камену ново име написано, ког нико не зна осим оног који прими.
೧೭ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
18 И анђелу тијатирске цркве напиши: Тако говори Син Божји, који има очи своје као пламен огњени, и ноге Његове као бронза:
೧೮“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
19 Знам твоја дела, и љубав, и службу, и веру, и трпљење твоје, и дела твоја, и да последњих има више од првих;
೧೯ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.
20 Но имам на тебе мало, што допушташ жени Језавељи, која говори да је пророчица, да учи и да вара слуге моје да чине прељубу и да једу жртву идолску.
೨೦ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
21 И дадох јој време да се покаје од курварства свог, и не покаја се.
೨೧ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
22 Ево је ја мећем на одар, и оне који чине прељубу с њом у невољу велику, ако се не покају од својих дела.
೨೨ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
23 И децу њену побићу на место; и познаће све цркве да сам ја који испитујем срца и бубреге, и даћу вам свакоме по делима вашим:
೨೩ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
24 А вама говорим и осталима који су у Тијатиру који немају науке ове, и који не познају дубина сотониних (као што говоре): нећу метнути на вас другог бремена,
೨೪“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನುಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.
25 Осим који имате, држите докле дођем.
೨೫ಆದರೆನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.
26 И који победи и одржи дела моја до краја, даћу му власт над незнабошцима;
೨೬ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
27 И пашће их гвозденом палицом, и они ће се раздробити као судови лончарски; као и ја што примих од Оца свог;
೨೭
28 И даћу му звезду даницу.
೨೮
29 Ко има ухо да чује нека чује шта говори Дух црквама.
೨೯ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

< Откривење 2 >