< Римљанима 1 >
1 Од Павла, слуге Исуса Христа, позваног апостола изабраног за јеванђеље Божије,
೧ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
2 Које Бог унапред обећа преко пророка својих у светим писмима
೨ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;
3 О сину свом, који је по телу рођен од семена Давидовог,
೩ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
4 А посведочен силно за Сина Божијег Духом светиње по васкрсењу из мртвих, Исусу Христу Господу нашем,
೪ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.
5 Преко ког примисмо благодат и апостолство, да покоримо све незнабошце вери имена Његовог;
೫ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.
6 Међу којима сте и ви позвани Исусу Христу,
೬ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,
7 Свима који су у Риму, љубазнима Богу, и позванима светима: благодат вам и мир од Бога Оца нашег и Господа Исуса Христа.
೭ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
8 Прво, дакле, захваљујем Богу свом кроз Исуса Христа за све вас што се вера ваша гласи по свему свету.
೮ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.
9 Јер ми је сведок Бог, коме служим духом својим у јеванђељу Сина његовог, да вас се опомињем без престанка,
೯ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.
10 Молећи се свагда Богу у молитвама својим да би ми кад Божија воља помогла да дођем к вама;
೧೦ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
11 Јер желим видети вас, да вам дам какав духовни дар за ваше утврђење,
೧೧ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
12 То јест, да се с вама утешим вером општом, и вашом и мојом.
೧೨
13 Али вам нећу затајити, браћо, да сам много пута хтео да вам дођем, па бих задржан досле, да и међу вама имам какав плод, као и међу осталим незнабошцима.
೧೩ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.
14 Дужан сам и Грцима и дивљацима, и мудрима и неразумнима.
೧೪ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.
15 Зато, од моје стране, готов сам и вама у Риму проповедати јеванђеље.
೧೫ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.
16 Јер се не стидим јеванђеља Христовог; јер је сила Божија на спасење свакоме који верује, а најпре Јеврејину и Грку.
೧೬ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
17 Јер се у Њему јавља правда Божија из вере у веру, као што је написано: Праведник ће од вере жив бити.
೧೭ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
18 Јер се открива гнев Божји с неба на сваку безбожност и неправду људи који држе истину у неправди.
೧೮ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
19 Јер шта се може дознати за Бога познато је њима: јер им је Бог јавио;
೧೯ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
20 Јер шта се на Њему не може видети, од постања света могло се познати и видети на створењима, и Његова вечна сила и божанство, да немају изговора. (aïdios )
೨೦ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. (aïdios )
21 Јер кад познаше Бога, не прославише Га као Бога нити Му захвалише, него залудеше у својим мислима, и потамне неразумно срце њихово.
೨೧ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
22 Кад се грађаху мудри, полудеше,
೨೨ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
23 И претворише славу вечног Бога у обличје смртног човека и птица и четвороножних животиња и гадова.
೨೩ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.
24 Зато их предаде Бог у жељама њихових срца у нечистоту, да се погане телеса њихова међу њима самима;
೨೪ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
25 Који претворише истину Божију у лаж, и већма поштоваше и послужише твар него Творца, који је благословен ва век. Амин. (aiōn )
೨೫ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. (aiōn )
26 Зато их предаде Бог у срамне сласти; јер жене њихове претворише путно употребљавање у беспутно.
೨೬ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
27 Тако и људи оставивши путно употребљавање женског рода, распалише се жељом својом један на другог, и људи с људима чињаху срам, и плату која требаше за превару њихову примаху на себи.
೨೭ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
28 И као што не мараху да познаду Бога, зато их Бог предаде у покварен ум да чине шта не ваља,
೨೮ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
29 Да буду напуњени сваке неправде, курварства, злоће, лакомства, пакости; пуни зависти, убиства, свађе лукавства, злоћудности;
೨೯ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
30 Шаптачи, опадачи, богомрсци, силеџије, хвалише, поносити, измишљачи зала, непокорни родитељима,
೩೦ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,
31 Неразумни, невере, нељубавни, непримирљиви, немилостиви.
೩೧ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.
32 А неки правду Божију познавши да који то чине заслужују смрт, не само то чине, него пристају на то и онима који чине.
೩೨ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.