< Песма над песмама 4 >
1 Лепа ти си, драга моја, лепа ти си, очи су ти као у голубице између витица твојих; коса ти је као стадо коза које се виде на гори Галаду;
೧ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ.
2 Зуби су ти као стадо оваца једнаких, кад излазе из купала, које се све близне, а ниједне нема јалове.
೨ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
3 Усне су ти као конац скерлета, а говор ти је љубак; као кришка шипка јагодице су твоје између витица твојих;
೩ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
4 Врат ти је као кула Давидова сазидана за оружје, где висе хиљадама штитови и свакојако оружје јуначко;
೪ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.
5 Две су ти дојке као два ланета близанца, који пасу међу љиљанима.
೫ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.
6 Док дан захлади и сенке отиду, ићи ћу ка гори смирновој и ка хуму тамјановом.
೬ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.
7 Сва си лепа драга моја, и нема недостатака на теби.
೭ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.
8 Ходи са мном с Ливана, невесто, ходи са мном с Ливана, да гледаш с врха аманског, с врха сенирског и ермонског, из пећина лавовских, с гора рисовских.
೮ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.
9 Отела си ми срце, сестро моја невесто, отела си ми срце једним оком својим и једним ланчићем с грла свог.
೯ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.
10 Лепа ли је љубав твоја, сестро моја невесто, боља је од вина љубав твоја, и мирис уља твојих од свих мирисних ствари.
೧೦ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
11 С усана твојих капље саће, невесто, под језиком ти је мед и млеко, и мирис је хаљина твојих као мирис ливански.
೧೧ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
12 Ти си као врт затворен, сестро моја невесто, извор затворен, студенац запечаћен.
೧೨ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.
13 Биље је твоје воћњак од шипака с воћем красним, од кипра и нарда.
೧೩ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,
14 Од нарда и шафрана, од иђирота и цимета са свакојаким дрвљем за кад, од смирне и алоја и са сваким прекрасним мирисима.
೧೪ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.
15 Изворе вртовима, студенче воде живе и која тече с Ливана!
೧೫ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.
16 Устани севере, и ходи јуже, и дуни по врту мом да капљу мириси његови; нека дође драги мој у врт свој, и једе красно воће своје.
೧೬ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.