< Genesisi 8 >
1 Asi Mwari akarangarira Noa nemhuka dzose dzesango nezvipfuwo zvakanga zvinaye muareka, uye akatuma mhepo pamusoro penyika, uye mvura zhinji ikaserera.
೧ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
2 Zvino zvitubu zvepakadzika uye masuo amafashamu okudenga zvakanga zvazarirwa, uye mvura yakanga yaguma kunaya kubva kudenga.
೨ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
3 Mvura yakaserera zvishoma nezvishoma kubva panyika. Pakupera kwamazuva zana namakumi mashanu mvura yakanga yadzika,
೩ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.
4 uye pazuva regumi namanomwe romwedzi wechinomwe, areka yakagara pamakomo eArarati.
೪ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
5 Mvura yakaramba ichiserera kusvikira pamwedzi wegumi, uye pazuva rokutanga romwedzi wegumi misoro yamakomo yakatanga kuonekwa.
೫ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
6 Shure kwamazuva makumi mana, Noa akazarura windo raakanga aita muareka,
೬ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.
7 uye akatuma gunguo, uye rakaramba richibhururuka kuno nokoko kusvikira mvura yapwa panyika.
೭ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
8 Ipapo akatuma njiva kuti aone kana mvura yakanga yaserera kubva pamusoro penyika.
೮ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.
9 Asi njiva haina kuwana nzvimbo yokumhara nokuti mvura yakanga iri pose pose; saka yakadzokera kuna Noa muareka. Akatambanudza ruoko rwake akadzorera njiva muareka maaiva.
೯ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
10 Akarindira kwamamwezve mazuva manomwe uye akabudisazve njiva muareka.
೧೦ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
11 Njiva yakati yadzokera kwaari panguva yamanheru, onei heyo mumuromo mayo yakaruma shizha nyoro rakatanhwa pamuorivhi! Ipapo Noa akaziva kuti mvura yakanga yaserera panyika.
೧೧ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
12 Akamirirazve kwamamwe mazuva manomwe uye akabudisazve njiva, asi panguva iyi haina kuzodzoka kwaari.
೧೨ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
13 Pazuva rokutanga romwedzi wokutanga wegore ramazana matanhatu nerimwe aNoa, mvura yakanga yapwa panyika. Ipapo Noa akabvisa chifukidziro cheareka akaona kuti pamusoro penyika pakanga paoma.
೧೩ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
14 Pazuva ramakumi maviri namanomwe romwedzi wechipiri nyika yakanga yaoma kwazvo.
೧೪ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.
15 Ipapo Mwari akati kuna Noa,
೧೫ಆಗ ದೇವರು ನೋಹನಿಗೆ,
16 “Budai muareka, iwe nomukadzi wako navanakomana vako navakadzi vavo.
೧೬“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
17 Budisa mhando dzose dzezvisikwa zvipenyu zvaunazvo, shiri, mhuka nezvisikwa zvose zvinokambaira panyika, kuitira kuti zvibereke uye zvive zvizhinji pamusoro payo.”
೧೭ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
18 Saka Noa akabuda, pamwe chete navanakomana vake nomukadzi wake uye navakadzi vavanakomana vake.
೧೮ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.
19 Mhuka dzose nezvisikwa zvose zvinokambaira panyika neshiri dzose, zvinhu zvose zvinofamba panyika, zvakabuda muareka, rudzi ruchitevera rumwe.
೧೯ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
20 Ipapo Noa akavakira Jehovha aritari, uye akatora dzimwe dzemhuka dzose dzakanaka neshiri dzakanaka, akabayira zvipiriso zvinopiswa pamusoro payo.
೨೦ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
21 Jehovha akanzwa kunhuhwira kwakanaka akati mumwoyo make, “Handichazotukazve nyika nokuda kwomunhu, kunyange hazvo kufunga kwomwoyo wake kwakaipa kubva pakuberekwa kwake. Uye handichazoparadzazve zvisikwa zvipenyu zvose, sezvandakaita.
೨೧ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
22 “Kana nyika ichingovapo, nguva dzokudyara nedzokukohwa, kutonhora nokupisa, zhizha nechando, masikati nousiku hazvingatongogumi.”
೨೨ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.