< Jeremia 18 >
1 Iri ndiro shoko rakauya kuna Jeremia richibva kuna Jehovha richiti,
೧ಯೆಹೋವನು ಯೆರೆಮೀಯನಿಗೆ,
2 “Buruka uende kuimba yomuumbi wehari, ndigokupa shoko rangu ikoko.”
೨“ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು” ಎಂಬ ಮಾತನ್ನು ದಯಪಾಲಿಸಿದನು.
3 Saka ndakaenda kuimba yomuumbi wehari, ndikamuona achishanda paguyo.
೩ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.
4 Asi hari yaakanga achiumba nevhu yakashatiswa mumaoko ake; saka muumbi akaita imwe hari akaiumba namaumbiro aaiona akanaka.
೪ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು.
5 Ipapo shoko raJehovha rakasvika kwandiri richiti,
೫ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು,
6 “Haiwa imba yaIsraeri, handingagoni kuita nemi sezvinoita muumbi wehari uyu here?” ndizvo zvinotaura Jehovha. “Sezvakaita ivhu muruoko rwomuumbi, ndizvo zvamakaita muruoko rwangu, imi imba yaIsraeri.
೬“ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.
7 Kana ndikazivisa panguva ipi zvayo kuti rudzi kana ushe zvidzurwe nokubvarurwa uye zviparadzwe,
೭ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,
8 uye kana rudzi urwo rwandakayambira rukatendeuka pane zvakaipa zvarwo, ipapo ndichazvidemba ndigorega kuisa pamusoro pavo njodzi yandakanga ndavarongera.
೮ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
9 Uye kana pane imwe nguva ndikazivisa kuti rudzi kana ushe zvivakwe uye zvisimwe,
೯ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,
10 uye kana rukaita zvakaipa pamberi pangu uye rukasanditeerera, ipapo ndicharangarirazve zvakanaka zvandakanga ndichida kuruitira.
೧೦ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
11 “Naizvozvo zvino uti kuvanhu veJudha naavo vanogara muJerusarema, ‘Zvanzi naJehovha: Tarirai, ndiri kugadzirira njodzi uye ndiri kuronga urongwa hwakaipa pamusoro penyu. Saka dzokai mubve panzira dzenyu dzakaipa, mumwe nomumwe wenyu, uye mushandure nzira dzenyu namaitiro enyu.’
೧೧ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.
12 Asi vachapindura vachiti, ‘Hazvina maturo. Ticharambira pane zvatakafunga; mumwe nomumwe wedu achatevera kusindimara kwomwoyo wake wakaipa.’”
೧೨ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”
13 Naizvozvo zvanzi naJehovha: “Bvunzai pakati pevedzimwe ndudzi kuti: Ndiani akambonzwa chimwe chinhu chakadai? Chinhu chakaipa kwazvo chakaitwa neMhandara Israeri.
೧೩ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.
14 Ko, chando cheRebhanoni chinomboshayikwawo pamawere ematombo here? Ko, mvura yaro inotonhorera inoyerera ichibva kure inombomira kuyerera here?
೧೪ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?
15 Kunyange zvakadaro, vanhu vangu vakandikanganwa; vanopisira zvinonhuhwira kuzvifananidzo zvisina maturo, izvo zvakaita kuti vagumburwe munzira dzavo, uye napamakwara ekare kare. Vakavaita kuti vafambe mumakwara akatsauka nomumigwagwa isina kugadzirwa.
೧೫ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
16 Nyika yavo ichaitwa dongo, chiseko chisingaperi; vose vanopfuura nemo vachashamiswa uye vachadzungudza misoro yavo.
೧೬ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.
17 Semhepo inobva kumabvazuva, ndichavaparadzira pamberi pavavengi vavo; ndichavaratidza musana wangu kwete uso hwangu, pazuva renjodzi yavo.”
೧೭ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”
18 Vakati, “Uyai tironge zvatingaita naJeremia; nokuti kudzidziswa kwomurayiro navaprista hakungaraswi, kunyange zano rinobva kuna vakachenjera, kana shoko rinobva kuvaprofita. Saka uyai, timurove nendimi dzedu tirege kuteerera chinhu chipi nechipi chaanoreva.”
೧೮ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.
19 Haiwa Jehovha ndinzweiwo; inzwai zvinorehwa navapomeri vangu!
೧೯ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.
20 Ko, zvakanaka zvingatsiviwa nezvakaipa here? Kunyange zvakadaro vakandicherera gomba. Rangarirai kuti ndakamira pamberi penyu ndichivareverera, kuti mudzore kutsamwa kwenyu kwavari;
೨೦ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
21 Saka sundirai vana vavo kunzara; vaisei kusimba romunondo. Vakadzi vavo ngavarege kuva navana uye ngavave chirikadzi; varume vavo ngavaurayiwe, majaya avo ngaaurayiwe nomunondo muhondo.
೨೧ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
22 Kuchema ngakunzwike kuchibva kudzimba dzavo, pamunouyisa vapambi pamusoro pavo pakarepo, nokuti vakachera hunza kuti vandibate, uye vakavanzira tsoka dzangu misungo.
೨೨ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
23 Asi munoziva, imi Jehovha, rangano dzavo dzose dzokundiuraya. Musavakanganwira mhaka dzavo kana kudzima zvivi zvavo pamberi penyu. Ngavawisirwe pasi pamberi penyu, muvarove panguva yokutsamwa kwenyu.
೨೩ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.