< Книга пророка Амоса 9 >
1 Видех Господа стояща на жертвеннице, и рече: порази очистилище, и поколеблются преддверия, и пресецы в главы всех: и оставшыя их оружием избию, не убежит от них бежай, и не уцелеет от них уцелеваяй:
೧ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
2 аще сокрыются во аде, то и оттуду рука Моя исторгнет я, и аще взыдут на небо, то и оттуду свергу я: (Sheol )
೨ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol )
3 и аще скрыются на версе Кармила, то и оттуду взыщу и возму я, и аще погрузятся от очию Моею во глубинах морских, то и тамо повелю змиеви, и угрызет я:
೩ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.
4 и аще пойдут в плен пред лицем враг своих, и тамо повелю оружию, и избиет их: и утвержу очи Мои на них во злая, а не во благая.
೪ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”
5 И Господь Бог Вседержитель прикасаяйся земли и колебля ею, и возрыдают вси живущии на ней, и взыдет яко река скончание ея, и снидет яко река Египетская:
೫ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.
6 сотворяяй на небо восход Свой и обещание Свое на земли основаяй, призываяй воду морскую и проливаяй ю на лице земли: Господь Бог Вседержитель имя Ему.
೬ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.
7 Не якоже ли сынове Ефиопстии вы есте Мне, сынове Израилевы? Глаголет Господь. Не Израиля ли изведох из земли Египетския и иноплеменники из Каппадокии и Сиряны из Рова?
೭ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?
8 Се, очи Господа Бога на царство грешных, и отвергу е от лица земли: обаче не в конец отвергу дом Израилев, глаголет Господь.
೮ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.
9 Понеже, се, Аз заповедаю и развею дом Израилев во вся языки, якоже веется на веяле, и не падет сотрение на землю.
೯“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
10 Оружием скончаются вси грешнии людий Моих, глаголющии: не приближатся, ни приидут на нас злая.
೧೦ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.
11 В той день возставлю скинию Давидову падшую, и возгражду падшая ея, и раскопаная ея возставлю, и возгражду ю якоже дние века:
೧೧“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
12 яко да взыщут мене оставшиися человецы и вси языцы, в нихже призвася имя Мое в них, глаголет Господь творяй сия вся.
೧೨ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.
13 Се, дние грядут, глаголет Господь, и постигнет жатва оымание винограда, и созреет гроздие в сеятву, и искапают горы сладость, и вси холми насаждени будут:
೧೩ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.
14 и возвращу плен людий Моих Израиля, и возградят грады разореныя, и населятся, и насадят винограды и испиют вино их, и сотворят вертограды и снедят плод их:
೧೪ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.
15 и насажду я на земли их, и не исторгнутся ктому от земли своея, юже дах им, глаголет Господь Бог Вседержитель.
೧೫ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.