< Второзаконие 7 >

1 И будет егда введет тя Господь Бог твой в землю, в нюже входиши тамо наследити ю, и изженет языки великия и многия от лица твоего, Хеттеа и Гергесеа, и Аморреа и Хананеа, и Ферезеа и Евеа и Иевусеа, седмь языков великих и многих, и крепчае вас:
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
2 и предаст их Господь Бог твой в руце твои, и избиеши я, пагубою погубиши я, да не завещаеши к ним завета, ниже да помилуеши их,
ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
3 ниже сватовства сотвориши с ними: дщери своея не даси сыну его, и дщере его да не поймеши сыну твоему:
ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.
4 отвратит бо сына твоего от Мене, и послужит богом инем: и разгневается Господь гневом на вы, и потребит тя вскоре.
ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.
5 Но сице да сотворите им: требища их разсыплете, и столпы их да сокрушите, и дубравы их да посечете, и ваяния богов их да сожжете огнем:
ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
6 яко люди святи есте Господеви Богу вашему: и вас избра Господь Бог ваш, да будете Ему люди избранни паче всех языков, елицы на лицы земли.
ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
7 Не яко мнози есте паче всех язык, предприя вас Господь и избра вас Господь, вы бо есте меншии от всех языков:
ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.
8 но яко возлюби Господь вас, и храня клятву, еюже клятся отцем вашым, изведе Господь вас рукою крепкою и мышцею высокою, и избави тя от дому работы, от руки фараона царя Египетска,
ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
9 и да увеси, яко Господь Бог твой Сей Бог: Бог верный, храняй завет Свой и милость любящым Его и хранящым заповеди Его в тысящы родов:
ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
10 и воздаяй ненавидящым Его в лице потребити я, и не умедлит ненавидящым, в лице воздаст им.
೧೦ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
11 И да сохраниши заповеди и оправдания и суды сия, елика аз заповедаю тебе творити днесь.
೧೧ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.
12 И будет егда послушаете вся оправдания сия, и сохраните и сотворите я, сохранит и Господь Бог твой тебе завет и милость, якоже клятся отцем вашым,
೧೨ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.
13 и возлюбит тя, и благословит тя и умножит тя, и благословит плод чрева твоего и плод земли твоея, пшеницу твою и вино твое и елей твой, и стада волов твоих и паствы овец твоих на земли, юже клятся Господь отцем твоим дати тебе:
೧೩ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.
14 и благословен будеши паче всех язык и не будет в вас безчадный, ниже неплоды, и в скотех твоих:
೧೪ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
15 и отимет Господь Бог твой от тебе всяко разслабление и всяку язю Египетскую злую, яже видел еси и елика веси: не возложит на тя, но возложит я на вся ненавидящыя тебе:
೧೫ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
16 и ясти будеши вся корысти языков, яже Господь Бог твой дает тебе: да не пощадит их око твое, и да не послужиши богом их, яко претыкание тебе есть сие.
೧೬ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
17 Аще же речеши во уме твоем: яко язык сей множае паче мене, како возмогу аз потребити я?
೧೭ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.
18 Не убоишися их: памятию да помянеши, елика сотвори Господь Бог твой фараону и всем Египтяном,
೧೮ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.
19 искушения великая, яже видеста очи твои, знамения она и чудеса великая, руку крепкую и мышцу высокую, якоже изведе тя Господь Бог твой: тако сотворит Господь Бог ваш всем языком, ихже ты боишися от лица их:
೧೯ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.
20 и шершни послет Господь Бог твой на них, дондеже потребятся оставшиися и сокрывшиися от тебе:
೨೦ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು.
21 не повредишися от лица их: яко Господь Бог твой в тебе, Бог великий и крепкий:
೨೧ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.
22 и погубит Господь Бог твой языки сия от лица твоего, помалу малу: не возможеши погубити их вскоре, да не будет земля пуста, и умножатся зверие дивии на тя:
೨೨ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
23 и предаст их Господь Бог твой в руце твои, и погубиши их погублением великим, дондеже искорените их:
೨೩ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.
24 и предаст цари их в руце твои, и погубите имя их от места онаго: ниже един постоит пред лицем твоим, дондеже погубиши их.
೨೪ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.
25 Ваяния богов их да сожжете огнем, да не похощеши злата и сребра взяти себе от них, да не когда согрешиши того ради, яко мерзость есть Господеви Богу твоему:
೨೫ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
26 и да не внесеши мерзости в свой дом, и проклят будеши якоже сия: ненавидением да возненавидиши, и омерзением да омерзиши, яко проклятие есть.
೨೬ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

< Второзаконие 7 >