< Исход 4 >
1 Отвеща же Моисей и рече: аще не уверуют ми, ниже послушают гласа моего, рекут бо, яко не явися тебе Бог, что реку к ним?
೧ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.
2 И рече к нему Господь: что сие есть в руце твоей? Он же рече: жезл.
೨ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.
3 И рече: поверзи его на землю. И верже и на землю, и бысть змий: и отбеже Моисей от него.
೩ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.
4 И рече Господь к Моисею: простри руку и ими за хвост. Простер убо руку, взя за хвост, и бысть жезл в руце его.
೪ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ” ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.
5 Да уверуют ти, яко явися тебе Господь Бог отец твоих, Бог Авраамов и Бог Исааков и Бог Иаковль.
೫ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.
6 Рече же ему Господь паки: вложи руку твою в недро твое. И вложи руку в недро свое, и изят ю от недра своего, и бысть рука его прокажена яко снег.
೬ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
7 И рече паки ему Господь: вложи руку твою в недро твое. И вложи руку свою в недро свое, и изят ю от недра своего, и бысть паки в румянстве плоти своея.
೭ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.
8 Аще же не уверуют тебе, ниже послушают гласа знамения перваго, уверуют тебе ради гласа знамения втораго:
೮ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.
9 и будет аще не уверуют тебе двема знамениями сими, ниже послушают гласа твоего, да возмеши от воды речныя, и пролиеши на сухо: и будет вода, юже возмеши от реки, кровию на сусе.
೯ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.
10 Рече же Моисей ко Господу: молюся ти, Господи: недоброречив есмь прежде вчерашняго и третияго дне, ниже отнележе начал еси глаголати рабу Твоему: худогласен и косноязычен аз есмь.
೧೦ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
11 И рече Господь к Моисею: кто даде уста человеку? И кто сотвори нема и глуха, и видяща и слепа? Не Аз ли Господь Бог?
೧೧ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
12 И ныне иди, и Аз отверзу уста твоя и устрою тебе, еже имаши глаголати.
೧೨ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
13 Рече же Моисей: молюся ти, Господи, избери могуща иного, егоже послеши.
೧೩ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.
14 И разгневався яростию Господь на Моисеа, рече: не се ли брат твой Аарон Левитин? Вем, яко глаголя возглаголет он вместо тебе: и се, той изыдет во сретение тебе, и узрев тя, возрадуется в себе:
೧೪ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.
15 и речеши к нему, и вдаси словеса Моя во уста его: Аз же отверзу уста твоя и уста его, и устрою вам яже имате творити:
೧೫ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
16 и той возглаголет от тебе к людем, и той будет уста твоя: ты же будеши ему в тех, яже к Богу:
೧೬ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.
17 и жезл сей обращенный в змию, возми в руку твою, сим сотвориши знамения.
೧೭ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.
18 Пойде же Моисей, и возвратися ко Иофору тестю своему и рече: пойду и возвращуся ко братии моей, иже во Египте, и увижду, аще еще живи суть. И рече Иофор к Моисею: иди здрав. По днех же оных многих, умре царь Египетский.
೧೮ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.
19 И рече Господь к Моисею в земли Мадиамстей: иди, отиди во Египет: измроша бо вси ищущии души твоея.
೧೯ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
20 Поим же Моисей жену свою и отрочата, всади я на ослята, и возвратися во Египет. И взя Моисей жезл, иже от Бога, в руку свою.
೨೦ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.
21 Рече же Господь к Моисею: идущу тебе и возвращающуся во Египет, зри вся чудеса, яже дах в руце твои, да сотвориши Я пред фараоном: Аз же ожесточу сердце его, и не отпустит людий:
೨೧ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
22 ты же возглаголеши фараону: сия глаголет Господь Бог Еврейский: сын Мой первенец Израиль:
೨೨ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.
23 рех же тебе: отпусти люди Моя, да Ми послужат: аще убо не хощеши отпустити их, блюди убо, Аз убию сына твоего первенца.
೨೩ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.
24 Бысть же на пути на стану, срете его Ангел Господнь и искаше его убити.
೨೪ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.
25 И вземши Сепфора камень, обреза конечную плоть сына своего, и припаде к ногам его и рече: ста кровь обрезания сына моего.
೨೫ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.
26 И отиде от него Ангел, занеже рече: ста кровь обрезания сына моего.
೨೬ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, “ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂಬ ಮಾತನ್ನು ಹೇಳಿದಳು.
27 Рече же Господь ко Аарону: изыди во сретение Моисею в пустыню. И иде, и срете его в горе Божии: и целовастася оба.
೨೭ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
28 И поведа Моисей Аарону вся словеса Господня, яже посла, и вся знамения, яже заповеда ему.
೨೮ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.
29 Иде же Моисей и Аарон, и собраша вся старцы сынов Израилевых:
೨೯ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.
30 и глагола им Аарон вся словеса сия, яже глагола Бог к Моисею: и сотвори знамения пред людьми.
೩೦ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.
31 И вероваша людие, и возрадовашася, яко посети Бог сыны Израилевы и яко призре на их скорбение: и преклоншеся людие поклонишася.
೩೧ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.