< Книга пророка Исаии 61 >
1 Дух Господень на Мне, Егоже ради помаза Мя, благовестити нищым посла Мя, изцелити сокрушенныя сердцем, проповедати пленником отпущение и слепым прозрение,
೧ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
2 нарещи лето Господне приятно и день воздаяния, утешити вся плачущыя,
೨ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
3 дати плачущым Сиона славу вместо пепела, помазание веселия плачущым, украшение славы вместо, духа уныния: и нарекутся родове правды насаждение Господне во славу.
೩ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
4 И созиждут пустыни вечныя, запустевшыя прежде воздвигнут: и обновят грады пустыя, опустошенныя в роды.
೪ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.
5 И приидут инороднии, пасущии овцы твоя, и иноплеменницы орателие и виноградарие ваши:
೫ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.
6 вы же священницы Господни наречетеся, служителие Бога вашего, речется вам: крепость язык снесте и в богатстве их чудни будете.
೬ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.
7 Сице землю свою вторицею наследят, и веселие вечное над главою их.
೭ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
8 Аз бо есмь Господь любяй правду и ненавидяй грабления от неправды: и дам труд их праведником и завет вечен завещаю им.
೮ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
9 И познается во языцех семя их, и внуцы их посреде людий: всяк видяй я познает я, яко сии суть семя благословено от Бога, и радостию возрадуются о Господе.
೯ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
10 Да возрадуется душа моя о Господе: облече бо мя в ризу спасения и одеждею веселия (одея мя): яко на жениха возложи на мя венец, и яко невесту украси мя красотою.
೧೦ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
11 И яко земля растящая цвет свой, и яко вертоград семена своя прозябает: тако возрастит Господь Господь правду и веселие пред всеми языки.
೧೧ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.