< Книга пророка Иеремии 27 >
1 В начале царства Иоакима сына Иосиина, царя Иудина, бысть слово сие ко Иеремии от Господа глаголя:
೧ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
2 тако рече Господь: сотвори себе узы и клады и возложи на выю свою,
೨“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,
3 и да послеши я ко царю Идумейску и ко царю Моавску и ко царю сынов Аммоних, и ко царю Тирску и ко царю Сидонску, в руку послов их идущих сретением своим во Иерусалим ко Седекии царю Иудину,
೩ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
4 и завещай им ко господем их рещи: тако рече Господь Бог Израилев: тако рцыте ко господем своим:
೪ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’
5 Аз сотворих землю и человека и скоты, яже на лицы земли, крепостию Моею великою и мышцею Моею высокою, и дам ю, емуже будет угодно пред очима Моима.
೫‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
6 И ныне Аз дах всю землю сию в руце Навуходоносору царю Вавилонску, да ему работают, и звери селныя дах делати ему:
೬ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
7 и послужат ему вси языцы и сыну его и сыну сына его, дондеже приидет время земли его и его самого, и послужат ему мнози народи и царие велицы:
೭ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.
8 страна же и царство, елицы аще не поработают царю Вавилонску и елицы не вдежут выи своея в ярем царя Вавилонска, мечем и гладом посещу их, рече Господь, дондеже скончаются в руце его.
೮ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.
9 Вы же не слушайте лжепророк ваших и волхвующих вам и видящих сония вам, ни чарований ваших, ни обаятелей ваших глаголющих: не послужите царю Вавилонскому:
೯‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
10 яко лжу прорицают тии вам, еже бы удалитися вам от земли вашея, извергнути вас и еже погибнути вам.
೧೦ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.
11 Страна же, яже склонит выю свою под ярем царя Вавилонска и послужит ему, оставлю ю на земли своей, глаголет Господь: и орати будет ю и вселится на ней.
೧೧ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”
12 И ко Седекии царю Иудину глаголах по всем словесем сим, глаголя: склоните выи вашя под иго царя Вавилонска и служите ему и людем его, и живи будете:
೧೨ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
13 почто умираете, ты и людие твои, мечем и гладом и мором, якоже рече Господь ко странам, не хотевшым служити царю Вавилонску?
೧೩ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.
14 Не послушайте слов пророков глаголющих вам: не послужите царю Вавилонску:
೧೪‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
15 яко неправедно тии прорицают вам: яко не послах их, рече Господь, тии же прорицают именем Моим о неправде, еже бы погубити вас, и погибнете вы и пророцы ваши, прорицающии вам о неправде ложная.
೧೫ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”
16 Вам и всем людем сим и жерцем глаголах, рекий: тако рече Господь: не слушайте словес пророческих, прорицающих вам лжу и глаголющих: се, сосуди дому Господня возвратятся от Вавилона ныне вскоре: яко лжу прорицают вам,
೧೬ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
17 не послушайте их, но служите царю Вавилонскому, да живи будете. Вскую даете град сей в запустение?
೧೭ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.
18 Аще суть пророцы и есть слово Господне в них, да предстанут Господу Вседержителю, да не отидут сосуди, оставшиися в дому Господни и в дому царя Иудина и во Иерусалиме, в Вавилон.
೧೮ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.
19 Тако бо глаголет Господь Вседержитель о столпех и о умывалнице, и о подставах и о прочих сосудех оставшихся во граде сем,
೧೯ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.
20 ихже не взя Навуходоносор царь Вавилонский, егда пресели Иехонию сына Иоакимова, царя Иудина, из Иерусалима в Вавилон, и вся старейшины Иудины и Иерусалимли.
೨೦ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,
21 Тако бо глаголет Господь Вседержитель Бог Израилев о сосудех оставшихся в дому Господни и в дому царя Иудина и в Иерусалиме:
೨೧ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
22 в Вавилон принесутся и тамо будут даже до дне посещения своего, глаголет Господь: и повелю принести я и возвратити на место сие.
೨೨‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’”