< Книга Иисуса Навина 11 >

1 Егда же услыша Иавин царь Асорск, посла ко Иоваву царю Мадонску, и к царю Семеронску и к царю Ахиавску,
ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,
2 и к царем иже в Сидоне велицем и в горней, и в Араву прямо Хенерефу, и на поляну, и в Нафеддор,
ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ
3 и к приморским Хананеам от восток, и к приморским Аморреом и Хеттеом, и Ферезеом и Иевусеом, иже на горе, и Евеом, и иже под Аермоном, в землю Массифа.
ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.
4 И изыдоша сии и царие их с ними, людие мнози, яко песок иже при краи моря множеством, и кони и колесницы многи зело.
ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
5 И снидошася вси царие сии, и приидоша вкупе, и ополчишася при воде Маррон воевати на Израиля.
ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
6 И рече Господь ко Иисусу: не убойся от лица их, яко заутра в сей час Аз предам их язвенных пред сыны Израилевы: конем их жилы пресечеши и колесницы их да сожжеши огнем.
ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.
7 И прииде Иисус и вси людие воинстии с ним на них к воде Марронстей внезапу, и нападоша на ня в горней.
ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
8 И предаде их Господь под руце Израилевы: и секуще их, прогнаша даже до Сидона великаго и до Масрефоф-Маима и до поль Массифских к востоком: и изсекоша их, дондеже не остася в них ни един цел и избегший.
ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
9 И сотвори им Иисус, якоже заповеда ему Господь: конем их жилы пресече и колесницы их сожже огнем.
ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.
10 И обратися Иисус в то время, и взя Асор, и царя его уби мечем: Асор бо бе прежде обладающий всеми царствы сими:
೧೦ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
11 и изби все дышущее, еже в нем бысть, острием меча, и потребиша вся, и не остася в нем все дышущее: и Асор запалиша огнем.
೧೧ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.
12 И вся грады царств сих и вся цари их взя Иисус и изби я мечем, и потреби их, якоже повеле им Моисей раб Господень.
೧೨ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.
13 Но вся грады крепки не запали Израиль, точию Асор един запали Иисус.
೧೩ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.
14 И вся корысти их и вся скоты их плениша себе сынове Израилевы: людий же всех потребиша мечем, дондеже погубиша их, и не оставиша от них ни единаго дышущаго.
೧೪ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.
15 Якоже повеле Господь Моисею рабу Своему, тако Моисей заповеда Иисусу: и тако сотвори Иисус, не преступи ни единаго же от всех, яже заповеда Господь Моисею.
೧೫ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.
16 И взя Иисус всю землю горную и всю землю нагев, и всю землю Госомску, и равную, и яже на запад, и гору Израилеву, и поля яже при горе,
೧೬ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
17 от горы Хелха, и яже восходит к Сеиру, и даже до Валгада, и поле Ливана под горою Аермон: и вся цари их взя и изби.
೧೭ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
18 И многи дни сотвори Иисус с цари сими брань:
೧೮ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧ ಮಾಡಿದನು.
19 и не бе ни единаго града, егоже не предаде Господь сыном Израилевым, кроме Евеа обитающаго в Гаваоне: всех взяша бранию:
೧೯ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.
20 яко Господем бысть укрепитися их сердцу, сопротивитися на брани противу Израиля, да потребят их, яко да не дастся им милость, но да потребятся, якоже глагола Господь к Моисею.
೨೦ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
21 И прииде Иисус в то время, и потреби (вся) Енакимы от горныя, от Хеврона и от Давира и от Анова, и от всея горы Израилевы и от всея горы Иудины, с грады их, и потреби я Иисус:
೨೧ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
22 не остася ни един Енаким от сынов Израилевых, но точию в Газе и в Гефе и во Асидофе осташася.
೨೨ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.
23 И взя Иисус всю землю, якоже заповеда Господь Моисею: и даде ю Иисус в наследие Израилю, разделением по племеном их. И преста земля воюема быти.
೨೩ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.

< Книга Иисуса Навина 11 >