< Псалтирь 122 >
1 Возвеселихся о рекших мне: в дом Господень пойдем.
೧ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
2 Стояще бяху ноги нашя во дворех твоих, Иерусалиме.
೨ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
3 Иерусалим зиждемый яко град, емуже причастие его вкупе.
೩ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
4 Тамо бо взыдоша колена, колена Господня, свидение Израилево, исповедатися имени Господню:
೪ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5 яко тамо седоша престоли на суд, престоли в дому Давидове.
೫ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
6 Вопросите же яже о мире Иерусалима: и обилие любящым тя.
೬ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
7 Буди же мир в силе твоей, и обилие в столпостенах твоих.
೭ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”
8 Ради братий моих и ближних моих глаголах убо мир о тебе.
೮ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.
9 Дому ради Господа Бога нашего взысках благая тебе.
೯ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.