< Псалтирь 129 >

1 Множицею брашася со мною от юности моея, да речет убо Израиль:
ಯಾತ್ರಾಗೀತೆ. “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.
2 множицею брашася со мною от юности моея, ибо не премогоша мя.
“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.
3 На хребте моем делаша грешницы, продолжиша беззаконие свое.
ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.”
4 Господь праведен ссече выя грешников.
ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
5 Да постыдятся и возвратятся вспять вси ненавидящии Сиона:
ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.
6 да будут яко трава на здех, яже прежде восторжения изсше:
ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
7 еюже не исполни руки своея жняй, и недра своего рукояти собираяй:
ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
8 и не реша мимоходящии: благословение Господне на вы, благословихом вы во имя Господне.
ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

< Псалтирь 129 >