< Псалтирь 41 >

1 В конец, псалом Давиду. Блажен разумеваяй на нища и убога, в день лют избавит его Господь.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
2 Господь да сохранит его и живит его, и да ублажит его на земли и да не предаст его в руки врагов его.
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
3 Господь да поможет ему на одре болезни его: все ложе его обратил еси в болезни его.
ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
4 Аз рех: Господи, помилуй мя, изцели душу мою, яко согреших Ти.
ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
5 Врази мои реша мне злая: когда умрет, и погибнет имя его?
ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.
6 И вхождаше видети, всуе глаголаше сердце его: собра беззаконие себе, исхождаше вон и глаголаше вкупе.
ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
7 На мя шептаху вси врази мои, на мя помышляху злая мне.
ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
8 Слово законопреступное возложиша на мя: еда спяй не приложит воскреснути?
“ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
9 Ибо человек мира моего, на негоже уповах, ядый хлебы моя, возвеличи на мя запинание.
ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
10 Ты же, Господи, помилуй мя и возстави мя, и воздам им.
೧೦ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
11 В сем познах, яко восхотел мя еси, яко не возрадуется враг мой о мне.
೧೧ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
12 Мене же за незлобие приял, и утвердил мя еси пред Тобою в век.
೧೨ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
13 Благословен Господь Бог Израилев от века и до века: буди, буди.
೧೩ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

< Псалтирь 41 >