< 2 Kroniška 2 >
1 Salomon se je odločil, da zgradi hišo za Gospodovo ime in hišo za svoje kraljestvo.
೧ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.
2 Salomon je naročil sedemdeset tisoč možem, da nosijo bremena in osemdeset tisočim, da sekajo na gori in tri tisoč šeststotim, da jih nadzorujejo.
೨ಅದಕ್ಕಾಗಿ ಹೊರೆ ಹೊರುವ ಎಪ್ಪತ್ತು ಸಾವಿರ ಜನರನ್ನು, ಎಂಭತ್ತು ಸಾವಿರ ಜನರು ಕಲ್ಲುಗಣಿಗಳಲ್ಲಿ ಕೆಲಸ ಮಾಡುವವರನ್ನು, ಇವರ ಮೇಲ್ವೀಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಲ್ವೀಚಾರಕರನ್ನು ಸೊಲೊಮೋನನು ನೇಮಿಸಿದನು.
3 Salomon je poslal k tirskemu kralju Hurámu, rekoč: »Kakor si ti postopal z mojim očetom Davidom in si mu poslal cedre, da mu zgradijo hišo, da prebiva v njej, celo tako postopaj z menoj.
೩ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.
4 Glej, gradim hišo imenu Gospoda, svojega Boga, da mu jo posvetim in da pred njim zažigam dišeče kadilo in za neprestane hlebe navzočnosti, za žgalne daritve zjutraj in zvečer, na šabate, na mlaje in na slovesne praznike Gospoda, našega Boga. To je odredba za Izraela na veke.
೪ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
5 Hiša, ki jo gradim, je velika, kajti velik je naš Bog nad vsemi bogovi.
೫ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
6 Toda kdo mu je zmožen zgraditi hišo, glede na to, da ga nebo in nebesa nebes ne morejo obseči? Kdo sem potem jaz, da bi mu zgradil hišo, razen da pred njim zažigam daritev?
೬ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!
7 Pošlji mi torej sedaj človeka, spretnega za delo v zlatu, v srebru, v bronu, v železu, v vijolični, v karmezinu in modri in da lahko vešče rezbari z veščimi možmi, ki so z menoj v Judeji in v Jeruzalemu, ki jih je priskrbel moj oče David.
೭ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.
8 Pošlji mi tudi cedrovino, cipresovino in sandalovino iz Libanona, kajti vem, da tvoji služabniki lahko vešče sekajo les na Libanonu in glej, moji služabniki bodo s tvojimi služabniki,
೮ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.
9 celo, da mi pripravijo lesa v obilju, kajti hiša, ki jo nameravam zgraditi, bo čudovito velika.
೯ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.
10 Glej, tvojim služabnikom, sekalcem, ki sekajo les, bom dajal dvajset tisoč mer zmlete pšenice, dvajset tisoč mer ječmena, dvajset tisoč čebrov vina in dvajset tisoč čebrov olja.«
೧೦ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.
11 Potem je tirski kralj Hurám odgovoril v pisanju, ki ga je poslal Salomonu: ›Ker Gospod ljubi svoje ljudstvo, te je naredil kralja nad njimi.‹
೧೧ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”
12 Poleg tega je Hurám rekel: »Blagoslovljen bodi Gospod, Izraelov Bog, ki je naredil nebo in zemljo, ki je kralju Davidu dal modrega sina, opremljenega z razumnostjo in razumevanjem, da lahko gradi hišo za Gospoda in hišo za svoje kraljestvo.
೧೨ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.
13 Sedaj pošiljam spretnega moža, opremljenega z razumevanjem, od mojega očeta Huráma,
೧೩ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ.
14 sina ženske izmed Danovih hčera, njegov oče pa je bil človek iz Tira, vešč, da dela v zlatu, srebru, bronu, železu, kamnu, lesu, vijoličnem, modrem, tankem lanenem platnu in v karmezinu. Tudi da gravira vsako vrsto graviranja in da spozna vsako napravo, ki bo postavljena k njemu, s tvojimi spretnimi ljudmi in s spretnimi ljudmi mojega gospoda Davida, tvojega očeta.
೧೪ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ
15 Zdaj naj torej pšenico, ječmen in vino, o katerem je govoril moj gospod, pošlje svojim služabnikom,
೧೫ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.
16 mi pa bomo sekali les iz Libanona, kolikor ga boš potreboval in ga k tebi spravili na splavih po morju v Jopo, ti pa ga boš odpeljal gor v Jeruzalem.«
೧೬ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.
17 Salomon je preštel vse tujce, ki so bili v deželi Izrael, po štetju, s katerim jih je preštel njegov oče David in najdenih je bilo sto triinpetdeset tisoč šeststo.
೧೭ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.
18 Sedemdeset tisoč izmed njih je postavil, da bodo nosilci bremen in osemdeset tisoč, da bodo sekalci na gori in tri tisoč šeststo nadzornikov, da ljudstvu pripravljajo delo.
೧೮ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.