< Hebrejcem 10 >
1 Kajti postava, ki vsebuje senco dobrih stvari, ki pridejo in ne prave podobe stvari, s temi žrtvami, ki jih leto za letom stalno darujejo, še prišlecev nikoli ne more storiti popolnih.
೧ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
2 Kajti ali takrat ne bi nehali biti darovani? Zato ker ti oboževalci, enkrat očiščeni, naj ne bi imeli nič več zavedanja o grehih.
೨ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
3 Toda s temi daritvami je vsako leto storjen ponoven opomin zaradi grehov.
೩ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,
4 Kajti ni mogoče, da naj bi kri bikov in kozlov odvzemala grehe.
೪ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
5 Zato, ko prihaja na svet, pravi: »Žrtvovanja in daritve nočeš, toda telo si mi pripravil;
೫ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ, ) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
6 v žgalnih daritvah in daritvah za greh nimaš nobenega veselja.
೬ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
7 Tedaj sem rekel: ›Glej, prihajam (v zvitku knjige je to zapisano o meni), da izpolnim tvojo voljo, oh Bog.‹«
೭ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
8 Še več, ko je rekel: »Žrtve in darovanja in žgalnih daritev ter darovanja za greh nočeš niti nimaš veselja v teh, « ki so darovane po postavi;
೮ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
9 je potem rekel: »Glej, prihajam, da izpolnim tvojo voljo, oh Bog.« Odpravlja prvo, da lahko vzpostavi drugo.
೯ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
10 Po tej volji smo z daritvijo telesa Jezusa Kristusa posvečeni enkrat za vselej.
೧೦ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
11 In vsak duhovnik vsak dan stoji, služi in pogosto daruje iste žrtve, ki nikoli ne morejo odvzeti grehov.
೧೧ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
12 Toda ta človek, potem ko je daroval eno žrtev za grehe na veke, je sédel na Božjo desnico;
೧೨ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
13 in od tega časa naprej čaka, dokler ne bodo njegovi sovražniki narejeni [za] njegovo pručko.
೧೩ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
14 Kajti z eno daritvijo je na veke izpopolnil te, ki so posvečeni.
೧೪ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
15 O tem nam je priča tudi Sveti Duh; kajti potem ko nam je prej rekel:
೧೫ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
16 »To je zaveza, ki jo bom sklenil z njimi po tistih dneh, « govori Gospod, »svoje postave bom položil v njihova srca in v njihove misli jih bom zapisal;
೧೬“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
17 in njihovih grehov ter krivičnosti se ne bom več spominjal.«
೧೭“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
18 Torej kjer je odpuščanje le-teh, ni več daritve za greh.
೧೮ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
19 Ker imamo torej, bratje, hrabrost, da po Jezusovi krvi vstopimo v najsvetejše,
೧೯ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
20 po novi in živi poti, ki jo je za nas posvetil skozi zagrinjalo, to se pravi svoje meso;
೨೦
21 in ker imamo vélikega duhovnika nad Božjo hišo;
೨೧ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
22 se približajmo z resničnim srcem, v polni gotovosti vere, ker smo naša srca poškropili pred zlo vestjo in naša telesa umili s čisto vodo.
೨೨ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
23 Trdno, brez omahovanja, se držimo veroizpovedi naše vere (ker je zvest on, ki je obljubil)
೨೩ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
24 in preudarimo drug drugega, da spodbujamo k ljubezni in k dobrim delom.
೨೪ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
25 Ne zapuščajmo zbiranja nas samih, kakor je navada nekaterih, temveč drug drugega spodbujajmo in [to] toliko bolj, kakor vidite, da se približuje dan.
೨೫ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
26 Kajti če namerno grešimo, potem ko smo prejeli spoznanje o resnici, za grehe ne ostane nobena žrtev več,
೨೬ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
27 temveč neizogibno strašno pričakovanje sodbe in ognjene vročine, ki bo požrla nasprotnike.
೨೭ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
28 Kdor je preziral Mojzesovo postavo, je na osnovi dveh ali treh prič brez usmiljenja umrl.
೨೮ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
29 Predvidevajte, koliko hujše kazni bo vreden tisti, ki je pod stopalom pomendral Božjega Sina in je štel kri zaveze, s katero je bil posvečen, za nesveto stvar in [to] storil navzlic Duhu milosti?
೨೯ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
30 Kajti poznamo tistega, ki je rekel: »Maščevanje pripada meni, jaz bom poplačal, « govori Gospod. In ponovno: »Gospod bo sodil svoje ljudi.«
೩೦“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
31 To je strašna stvar, pasti v roke živega Boga.
೩೧ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
32 Toda spomnite se prejšnjih dni, v katerih ste, potem ko ste bili razsvetljeni, pretrpeli velik boj stisk;
೩೨ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
33 deloma, medtem ko ste bili narejeni [za] predmet zaničevanja, tako z grajami kakor s stiskami, in deloma medtem ko ste postali družabniki teh, ki so bili tega navajeni.
೩೩ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
34 Kajti do mene ste imeli sočutje v mojih vezeh in ste radostno sprejeli plenjenje svojih dobrin, vedoč v sebi, da imate v nebesih boljše in trajno imetje.
೩೪ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
35 Ne odvrzite torej svoje zaupnosti, ki ima veliko povračilo nagrade.
೩೫ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
36 Kajti potrebo imate po potrpežljivosti, da potem ko ste storili Božjo voljo, lahko prejmete obljubo.
೩೬ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
37 Kajti še malo časa in on, ki prihaja, bo prišel in ne bo okleval.
೩೭“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
38 Torej pravični bo živel iz vere. Toda če se kdorkoli umakne, moja duša nad njim ne bo imela veselja.
೩೮ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
39 Toda mi nismo od teh, ki se umikajo v pogubo, temveč od teh, ki verujejo v rešitev duše.
೩೯ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.