< Matej 14 >
1 Ob tistem času je Herod, vladar četrtinskega dela province, slišal o Jezusovem slôvesu
ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,
2 in rekel svojim služabnikom: »To je Janez Krstnik. Obujen je od mrtvih in zato so se v njem naznanila mogočna dela.«
ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.
3 Kajti Herod je prijel Janeza in ga zvezal ter ga posadil v ječo zaradi Herodiade, žene svojega brata Filipa.
ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.
4 Kajti Janez mu je rekel: »Zate ni zakonito, da jo imaš.«
ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.
5 Ko pa ga je skušal usmrtiti, se je zbal množice, ker so ga šteli za preroka.
ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.
6 Toda ko je bil Herodov rojstni dan, je Herodiadina hči plesala pred njimi in se dopadla Herodu.
ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.
7 Nakar ji je ta s prisego obljubil dati, karkoli bi prosila.
ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.
8 In ona je, prej poučena od svoje matere, rekla: »Daj mi tukaj, na velikem pladnju, glavo Janeza Krstnika.«
ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.
9 In kralju je bilo žal. Kljub temu je zaradi prisege in teh, ki so z njim sedeli pri obedu, velel, da naj ji bo dana.
ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
10 In poslal je ter v ječi obglavil Janeza.
ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.
11 In njegova glava je bila prinesena na velikem pladnju ter dana gospodični in ona jo je odnesla svoji materi.
ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
12 In prišli so njegovi učenci in vzeli telo ter ga pokopali in odšli ter povedali Jezusu.
ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು.
13 Ko je Jezus slišal o tem, je od tam z ladjo ločeno odplul v zapuščen kraj. In ko je množica slišala o tem, mu je peš sledila iz mest.
ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.
14 In Jezus je odšel naprej in zagledal veliko množico in bil prevzet s sočutjem do njih in ozdravil njihove bolne.
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.
15 In ko je bil večer, so k njemu prišli njegovi učenci, rekoč: »To je zapuščen kraj in čas je sedaj potekel. Pošlji množico proč, da bodo lahko šli v vasi in si kupili živeža.«
ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.
16 Toda Jezus jim je rekel: »Ni jim treba oditi proč, vi jim dajte jesti.«
ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು.
17 In rekli so mu: »Mi imamo tukaj samo pet hlebov in dve ribi.«
ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು.
18 Rekel je: »Prinesite jih sèm k meni.«
ಯೇಸು, “ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದರು.
19 In velel je množici, naj séde na travo in vzel je pet hlebov ter dve ribi in zroč k nebu, je blagoslovil in razlomil ter hlebe dal svojim učencem, učenci pa množici.
ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
20 In vsi so jedli in bili nasičeni in od odlomkov, ki so ostali, so pobrali dvanajst polnih košar.
ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
21 In teh, ki so jedli, je bilo okoli pet tisoč mož, poleg žensk in otrok.
ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.
22 In Jezus je svoje učence nemudoma primoral, naj stopijo na ladjo in da gredo pred njim na drugo stran, sam pa je medtem odpustil množice.
ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.
23 In ko je odpustil množice, je sam posebej odšel na goro, da moli. In ko je prišel večer, je bil tam sam.
ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು.
24 Toda ladja je bila sedaj na sredi morja, premetavana z valovi, kajti bil je nasproten veter.
ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
25 In ob četrti nočni straži je Jezus šel proti njim, hodeč po morju.
ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.
26 In ko so ga učenci zagledali hoditi po morju, so bili prestrašeni, rekoč: »To je duh.« In od strahu so zakričali.
ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, “ಅದು ಭೂತ,” ಎಂದು ಭೀತಿಯಿಂದ ಕೂಗಿಕೊಂಡರು.
27 Toda Jezus jim je nemudoma spregovoril, rekoč: »Bodite dobre volje, jaz sem, ne bojte se.«
ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.
28 In Peter mu je odgovoril ter rekel: »Gospod, če si ti, mi zaukaži po vodi priti k tebi.«
ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು.
29 In on je rekel: »Pridi.« In ko je Peter prišel dol iz ladje, da pride k Jezusu, je hodil po vodi.
ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.
30 Toda ko je videl silovitost vetra, je bil prestrašen. In ko se je začel utapljati, je zavpil, rekoč: »Gospod, reši me.«
ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.
31 In Jezus je takoj iztegnil svojo roko ter ga prijel in mu rekel: »Oh ti maloveren, zakaj si podvomil?«
ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.
32 In ko sta prišla na ladjo, je veter ponehal.
ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.
33 Potem so prišli oni, ki so bili na ladji in ga oboževali, rekoč: »Resnično, ti si Božji Sin.«
ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.
34 In ko so se prepeljali, so prišli v deželo Genezaret.
ಅವರು ಸರೋವರವನ್ನು ದಾಟಿ, ಗೆನೆಜರೇತ್ ಊರಿಗೆ ಬಂದರು.
35 In ko so ljudje tega kraja dobili spoznanje o njem, so razposlali v vso to pokrajino naokoli in privedli k njemu vse, ki so bili bolni,
ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು.
36 in rotili so ga, da bi se lahko samo dotaknili obšiva njegove obleke in prav vsi, ki so se ga dotaknili, so postali popolnoma zdravi.
ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.