< Rooma 15 >

1 Kuweenna xoogga leh waxaa inagu waajib ah inaynu qaadno itaaldarrada kuwa xoogga yar, oo aynaan nafteenna ka farxin.
ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
2 Midkeen kastaaba deriskiisa ha ka farxiyo inuu ku wanaagsanaado oo ku dhismo.
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.
3 Waayo, Masiixiiba naftiisii kama uu farxin, laakiinse sida qoran, Caydii kuwii adiga ku caayay ayaa igu kor dhacday.
ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
4 Waayo, wax alla wixii hore loo qorayba waxaa loo qoray waxbarashadeenna, inaynu dulqaadashada iyo gargaarka Qorniinka rajo ku lahaanno.
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
5 Ilaaha dulqaadashada iyo gargaariddu ha ka dhigo in midkiinba midka kale la fikir ahaado sida Ciise Masiix,
ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
6 inaad isku qalbi iyo isku af ku ammaantaan Ilaaha ah Aabbaha Rabbigeenna Ciise Masiix.
ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.
7 Sidaas daraaddeed isdhoweeya sida Masiixuna idiin dhoweeyey in Ilaah la ammaano.
ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.
8 Waayo, waxaan idinku leeyahay, Masiixu wuxuu noqday kuwa gudan midiidinkooda, runta Ilaah aawadeed, inuu u xaqiijiyo ballamadii awowayaashii hore la siiyey,
ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
9 iyo in quruumuhu Ilaah u ammaanaan naxariistiisa, sida qoran, Sidaas daraaddeed waxaan kugu ammaani doonaa quruumaha dhexdooda, Oo magacaaga waan u gabyi doonaa.
ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
10 Oo haddana wuxuu leeyahay, Quruumahow, la reyreeya dadkiisa.
೧೦ಇನ್ನೊಮ್ಮೆ, “ಅನ್ಯಜನಾಂಗಗಳಿರಾ ದೇವರ ಜನರೊಡನೆ ಉಲ್ಲಾಸಪಡಿರಿ” ಎಂದೂ,
11 Oo haddana, Rabbiga ammaana, quruumahoo dhammow, Dadkoo dhammuna ha ammaano isaga.
೧೧ಮತ್ತೊಮ್ಮೆ, “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.
12 Oo haddana Isayos wuxuu leeyahay, Waxaa jiri doona xididkii Yesay, Iyo kan u kacaya inuu u taliyo quruumaha, Isagayna quruumuhu wax ku rajayn doonaan.
೧೨ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”
13 Ilaaha rajadu ha idinka buuxiyo farxad iyo nabad oo dhan, idinkoo rumaysan, si rajadiinnu ugu badato xoogga Ruuxa Quduuskaa.
೧೩ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
14 Oo aniga qudhayduna waxaan idiin hubaa, walaalahayow, inuu wanaag idinka buuxo, oo laydinka buuxiyey aqoon oo dhan, oo aad kartaan inaad iswaanisaan.
೧೪ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.
15 Laakiinse siyaalaha qaarkood dhiirranaan badan baan idiinku soo qoray inaan idin xusuusiyo, nimcadii xagga Ilaah layga siiyey aawadeed,
೧೫ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.
16 inaan dadka aan Yuhuudda ahayn u noqdo midiidinkii Ciise Masiix, anigoo shuqulka wadaadnimada u qabanaya injiilka Ilaah, in sadaqada dadka aan Yuhuudda ahayn la aqbalo, iyadoo quduus lagaga dhigay Ruuxa Quduuskaa.
೧೬
17 Haddaba xagga Ciise Masiix waxaan leeyahay wax aan ku faano, waana wax ku saabsan Ilaah.
೧೭ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು
18 Waayo, kuma dhici doono inaan waxba ka hadlo wixii Masiixii iga dhex shaqeeyey mooyaane, dadka aan Yuhuudda ahayn addeeciddooda aawadeed, oo uu igaga dhex shaqeeyey hadal iyo camal,
೧೮ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.
19 oo uu ku sameeyey xoogga calaamooyinka iyo yaababka, iyo xoogga Ruuxa Quduuskaa, oo sidaasaan injiilka Masiixa ugu wada wacdiyey Yeruusaalem iyo hareeraheeda iyo ilaa Illurikon.
೧೯ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.
20 Sidaasaan u hawaystay inaan injiilka ku wacdiyo meel aan Masiixa awil lagu magacaabin, si aanan ugu dul dhisin aasaaska nin kale dhigay.
೨೦ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.
21 Laakiinse, sida qoran, Waxaa arki doona kuwo aan warkiisu u iman, Kuwii aan maqlinuna waa garan doonaan.
೨೧“ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.
22 Sidaas daraaddeed marar badan baa layga hor joogsaday imaatinkii aan idiin iman lahaa;
೨೨ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು.
23 laakiinse haatan anigoo aan meelahakan meel dambe ku lahayn, oo idin boholyoobayay sannado badan inaan idiin imaado,
೨೩ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ
24 markaan Isbaanya tago waxaan rajaynayaa inaan sodcaalkayga idinku arko oo idinna aad halkaas iga ambabbixisaan, markaan cabbaar idinku raaxaysto dabadeed,
೨೪ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.
25 laakiinse haatan waxaan aadayaa Yeruusaalem inaan u adeego quduusiinta.
೨೫ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.
26 Waayo, dadka Makedoniya iyo Akhaya waxay aad u jeclaysteen inay wax u ururiyaan masaakiinta ka midka ah quduusiinta Yeruusaalem joogta.
೨೬ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
27 Way jeclaysteen, waana ku waajib inay sameeyaan. Waayo, dadka aan Yuhuudda ahayn hadday noqdeen kuwo ka qayb galay waxyaalahooda ruuxa, de markaas waxaa ku waajib ah iyaga inay ugu adeegaan waxyaalaha jidhka.
೨೭ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.
28 Sidaas daraaddeed markaan tan dhammeeyo oo aan iyaga midhahan ku hubsado, idinkaan idin soo mari doonaa, anoo Isbaanya u socda.
೨೮ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
29 Oo waxaan ogahay markaan idiin imaado inaan ku iman doono buuxnaanta barakada Masiixa.
೨೯ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.
30 Walaalayaalow, waxaan idinku baryayaa Rabbigeenna Ciise Masiix iyo jacaylka Ruuxa, inaad igula dadaashaan tukashooyinkiinna markaad Ilaah ii baridaan,
೩೦ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
31 in layga samatabbixiyo kuwa caasiyiinta ah oo Yahuudiya jooga, iyo in hawshayda aan Yeruusaalem u qabanayo ay noqoto mid ay quduusiintu aqbalaan;
೩೧ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.
32 inaan farxad idiinku imaado haddii Ilaah doonayo, oo aan idinla nasto.
೩೨ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.
33 Ilaaha nabaddu ha idinla jiro kulligiin. Aamiin.
೩೩ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

< Rooma 15 >