< Ester 9 >
1 En el duodécimo mes, que es el mes de Adar, el día trece del mismo, cuando había de ejecutarse la orden del rey y su edicto, y cuando los enemigos de los judíos creían obtener el dominio sobre ellos, sucedió todo lo contrario; pues los judíos prevalecieron contra quienes los odiaban.
ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.
2 Los judíos se reunieron en sus ciudades, por todas las provincias del rey Asuero, para echar mano de todos aquellos que buscaban perderlos; y ninguno pudo resistirles; pues el temor de ellos había caído sobre todos los pueblos.
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
3 Y todos los jefes de las provincias, los sátrapas y los gobernadores, y todos los dignatarios del rey, favorecían a los judíos; porque los había invadido el temor de Mardoqueo.
ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.
4 Pues Mardoqueo era poderoso en la casa del rey, y su fama iba por todas las provincias, de suerte que este hombre, Mardoqueo, crecía cada día más en poder.
ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.
5 Los judíos hirieron a golpe de espada a todos sus enemigos, los mataron y los exterminaron y trataron a su gusto a los que los odiaban.
ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
6 En Susa, la capital, los judíos mataron y exterminaron a quinientos hombres.
ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.
7 Mataron también a Parsandata, Dalfón, Aspata,
ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,
8 Porata, Adalia, Aridata,
ಪೊರಾತನು, ಅದಲ್ಯನು, ಅರಿದಾತನು,
9 Parmasta, Arisai, Aridai, y Yezata,
ಪರ್ಮಷ್ಟನು, ಅರಿಸಾಯನು, ಅರಿದಾಯನು, ವೈಜಾತನು ಎಂಬವರನ್ನು ಕೊಂದರು.
10 los diez hijos de Amán, hijo de Hamedata, adversario de los judíos; pero no alargaron su mano para despojarlos.
ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
11 Aquel mismo día llegó al conocimiento del rey el número de los muertos en Susa, la capital.
ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.
12 Y dijo el rey a la reina Ester: “En Susa, la capital, los judíos han matado y exterminado a quinientos hombres y a los diez hijos de Amán. ¿Qué habrán hecho en las demás provincias? ¿Cuál es ahora tu petición?, pues te será concedida. ¿Y qué más deseas?, pues será otorgado.”
ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.
13 Dijo Ester: “Si al rey le parece bien concédase a los judíos que están en Susa, hacer también mañana, según el decreto de hoy; y que los diez hijos de Amán sean colgados en la horca.”
ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.
14 Mandó entonces el rey que se hiciera así; se dio un decreto en Susa y los diez hijos de Amán fueron colgados.
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.
15 Se reunieron, pues, los judíos de Susa el catorce del mes de Adar y mataron en Susa a trescientos hombres; pero no se dieron al saqueo.
ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
16 Los otros judíos que estaban en las provincias del rey, se reunieron del mismo modo para defender su vida, y obtuvieron que sus enemigos los dejasen en paz. Mataron de sus enemigos a setenta y cinco mil: pero no se dieron al saqueo.
ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
17 Esto sucedió el día trece del mes de Adar. El día catorce del mismo mes descansaron, haciendo de él un día de banquete y de alegría.
ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
18 Solo los judíos de Susa se habían reunido el trece y el catorce del mes, y descansaron el quince del mismo, haciendo de él un día de banquete y de alegría.
ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
19 Por eso los judíos de la campaña, los que habitan en ciudades sin murallas, hacen del día catorce del mes de Adar día de regocijo y de banquete, día de fiesta en que se mandan regalos los unos a los otros.
ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.
20 Mardoqueo escribió estas cosas, y envió cartas a todos los judíos que había en todas las provincias del rey Asuero, cercanas y remotas,
ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.
21 obligándolos a celebrar todos los años el día catorce del mes de Adar, y el día quince del mismo
ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.
22 —como días en que los judíos se deshicieron de sus enemigos, y como mes en que la tristeza se les trocó en regocijo, y el luto en día bueno— y hacer de ellos días de banquete y de regocijo, con el fin de mandarse regalos los unos a los otros y repartir dádivas a los pobres.
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.
23 Los judíos adoptaron (como costumbre) lo que habían va comenzado a hacer, y lo que Mardoqueo les había escrito.
ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.
24 Porque Amán, hijo de Hamedata agagita, enemigo de todos los judíos, había tramado el proyecto de exterminar a los judíos, echando el “pur”, es decir, la suerte, para destruirlos y exterminarlos.
ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು.
25 Mas cuando (Ester) se presentó al rey, mandó este por escrito, que recayese sobre su misma cabeza el proyecto maligno que había tramado contra los judíos, y así le colgaron a él y a sus hijos en la horca.
ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;
26 Por esto llamaron a aquellos días Purim, del nombre de pur. Y por lo mismo, a raíz de todas las palabras de aquella carta, y por lo que ellos mismos habían visto y que les había acaecido,
ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ
27 los judíos establecieron como obligación para sí, para sus descendientes y para los que se les agregasen, celebrar irrevocablemente estos dos días, conforme a lo prescrito y en el tiempo señalado, año tras año
ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.
28 y que estos días fuesen recordados y celebrados de generación en generación, en cada familia, en cada provincia y en cada ciudad; y que estos días de Purim no cayesen en desuso entre los judíos, ni se borrase su recuerdo entre sus descendientes.
ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.
29 Por esto la reina Ester, hija de Abihael, y Mardoqueo el judío escribieron con toda instancia, por segunda vez, para confirmar la carta sobre Purim.
ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.
30 Mandaron cartas a todos los judíos de las ciento veinte y siete provincias del rey Asuero, con palabras de paz y verdad,
ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.
31 y recomendaron celebrar estos días de Purim en su tiempo determinado, como Mardoqueo judío y la reina Ester lo habían ordenado y como ellos mismos se habían obligado para sí y para sus descendientes en lo tocante a los ayunos y sus lamentaciones.
ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.
32 La orden de Ester confirmó estas observancias de Purim; y se escribió esto en el libro.
ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.