< Números 1 >
1 El segundo año después de la salida del país de Egipto, el primer día del mes segundo, habló Yahvé a Moisés en el desierto del Sinaí, en el Tabernáculo de la Reunión, diciendo:
೧ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,
2 “Haced el censo de toda la Congregación de los hijos de Israel, según sus familias y casas paternas, contando por cabezas los nombres de todos los varones
೨“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
3 de veinte años para arriba de todos los israelitas aptos para la guerra. Tú y Aarón los contaréis según sus escuadrones.
೩ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.
4 Os acompañará un hombre de cada tribu, que sea cabeza de su casa paterna.
೪ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.
5 Estos son los nombres de los varones que os ayudarán: De Rubén, Elisur, hijo de Sedeur,
೫ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
6 de Simeón, Selumiel, hijo de Surisadai;
೬ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,
7 de Judá, Naasón, hijo de Aminadab;
೭ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
8 de Isacar, Natanael, hijo de Suar;
೮ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
9 de Zabulón, Eliab, hijo de Helón;
೯ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
10 de los hijos de José: de Efraím, Elisamá, hijo de Amiud; de Manasés, Gamaliel, hijo de Pedasur:
೧೦ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
11 de Benjamín, Abidán, hijo de Gedeoní;
೧೧ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,
12 de Dan, Ahiéser, hijo de Amisadai;
೧೨ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
13 de Aser, Pagiel, hijo de Ocrán;
೧೩ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
14 de Gad, Eliasaf, hijo de Deuel;
೧೪ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
15 de Neftalí, Ahirá, hijo de Enan.”
೧೫ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
16 Estos fueron los designados de entre la Congregación. Eran los príncipes de las tribus de sus padres y cabezas de los millares de Israel.
೧೬ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.
17 Moisés y Aarón tomaron a estos hombres designados nominalmente
೧೭ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.
18 y reunieron a toda la Congregación el día primero del segundo mes. Entonces fueron registrados, cabeza por cabeza, los varones de veinte años para arriba, según sus familias y casas paternas, conforme al número de los nombres.
೧೮ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
19 Como Yahvé había mandado a Moisés, así los contó este en el desierto del Sinaí.
೧೯ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.
20 Hijos de Rubén, primogénito de Israel. Fueron alistados sus descendientes según sus familias y casas paternas, nominalmente y cabeza por cabeza, todos los varones de veinte años para arriba, todos los aptos para la guerra,
೨೦ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
21 y fueron contados de la tribu de Rubén cuarenta y seis mil quinientos.
೨೧ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
22 Hijos de Simeón. Fueron alistados sus descendientes, según sus familias y casas paternas, nominalmente y cabeza por cabeza, todos los varones de veinte años para arriba, todos los aptos para la guerra;
೨೨ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
23 y fueron contados de la tribu de Simeón cincuenta y nueve mil trescientos.
೨೩ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.
24 Hijos de Gad. Fueron alistados nominalmente sus descendientes, según sus familias y casas paternas, los de veinte años para arriba, todos los aptos para la guerra;
೨೪ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
25 y fueron contados de la tribu de Gad cuarenta y cinco mil seiscientos cincuenta.
೨೫ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.
26 Hijos de Judá. Fueron alistados nominalmente sus descendientes, según sus familias y casas paternas, los de veinte años para arriba, todos los aptos para la guerra;
೨೬ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
27 y fueron contados de la tribu de Judá setenta y cuatro mil seiscientos.
೨೭ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.
28 Hijos de Isacar. Fueron alistados nominalmente sus descendientes, según sus familias y casas paternas, los de veinte años para arriba, todos los aptos para la guerra;
೨೮ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
29 y fueron contados de la tribu de Isacar cincuenta y cuatro mil cuatrocientos.
೨೯ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.
30 Hijos de Zabulón. Fueron alistados nominalmente sus descendientes, según sus familias y casas paternas, de veinte años para arriba, todos los aptos para la guerra;
೩೦ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
31 y fueron contados de la tribu de Zabulón cincuenta y siete mil cuatrocientos.
೩೧ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.
32 Hijos de José, hijos de Efraím. Fueron alistados nominalmente sus descendientes, según sus familias y casas paternas, los de veinte años para arriba, todos los aptos para la guerra;
೩೨ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
33 y fueron contados de la tribu de Efraím cuarenta mil quinientos.
೩೩ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.
34 Hijos de Manasés. Fueron alistados nominalmente sus descendientes, según sus familias y sus casas paternas, los de veinte años para arriba, todos los aptos para la guerra;
೩೪ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
35 y fueron contados de la tribu de Manasés treinta y dos mil doscientos.
೩೫ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.
36 Hijos de Benjamín. Fueron alistados nominalmente sus descendientes, según sus familias y sus casas paternas, los de veinte años para arriba, todos los aptos para la guerra;
೩೬ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
37 y fueron contados de la tribu de Benjamín treinta y cinco mil cuatrocientos.
೩೭ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.
38 Hijos de Dan. Fueron alistados nominalmente sus descendientes, según sus familias y casas paternas, los de veinte años para arriba, todos los aptos para la guerra;
೩೮ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
39 y fueron contados de la tribu de Dan sesenta y dos mil setecientos.
೩೯ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.
40 Hijos de Aser. Fueron alistados nominalmente sus descendientes, según sus familias y casas paternas, los de veinte años para arriba, todos los aptos para la guerra;
೪೦ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
41 y fueron contados de la tribu de Aser cuarenta y un mil quinientos.
೪೧ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.
42 Hijos de Neftalí. Fueron alistados nominalmente sus descendientes, según sus familias y casas paternas, los de veinte años para arriba, todos los aptos para la guerra;
೪೨ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
43 y fueron contados de la tribu de Neftalí cincuenta y tres mil cuatrocientos.
೪೩ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.
44 Estos son los empadronados, a quienes contaron Moisés y Aarón, con los doce príncipes de Israel, uno por cada casa paterna,
೪೪ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.
45 y fue el número de todos los empadronados de los hijos de Israel, según sus casas paternas, de veinte años para arriba, todos aptos para la guerra:
೪೫ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.
46 el número de todos esos empadronados fue de seiscientos tres mil quinientos cincuenta.
೪೬ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
47 Los levitas no fueron contados como los otros, según la tribu de sus padres;
೪೭ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.
48 porque Yahvé habló a Moisés, diciendo:
೪೮ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
49 “No contarás la tribu de Leví, y no harás su censo entre los hijos de Israel.
೪೯“ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.
50 Encargarás a los levitas el cuidado del Tabernáculo del Testimonio, con todos sus utensilios, y todo cuanto le pertenece: ellos llevarán el Tabernáculo y todos sus utensilios, ejercerán allí su ministerio y acamparán alrededor del Tabernáculo.
೫೦ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
51 Al ponerse en marcha el Tabernáculo, los levitas lo desarmarán; y al pararse el Tabernáculo, los levitas lo armarán; y el extraño que se acercare morirá.
೫೧ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
52 Los hijos de Israel fijarán sus tiendas, cada (tribu) en su campamento, y bajo su bandera, según sus escuadrones;
೫೨ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
53 los levitas, en cambio, acamparán alrededor del Tabernáculo del Testimonio, para que la ira (de Dios) no estalle contra la Congregación de los hijos de Israel. Los levitas estarán encargados de guardar el Tabernáculo del Testimonio.”
೫೩ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
೫೪ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.