< Génesis 11 >
1 En ese tiempo se hablaba en todo el mundo un solo idioma y todos usaban palabras con el mismo significado.
೧ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.
2 Al trasladarse hacia el oriente, descubrieron una llanura en la región del Sinar y se asentaron allí.
೨ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.
3 Y se dijeron unos a otros: “Vengan, juntemos ladrillos y cocinémoslos con fuego”. (Usaron ladrillo en lugar de piedra, y alquitrán en lugar de cemento).
೩“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
4 Y entonces dijeron: “Construyamos ahora una ciudad para nosotros mismos con una torre cuya cúspide llegue hasta el cielo. Así lograremos tener una gran reputación y no andaremos dispersos por todo el mundo”.
೪ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5 Pero el Señor descendió para mirar la ciudad y la torre que estas personas estaban construyendo.
೫ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.
6 Y el Señor dijo: “Miren cómo estas personas están unidas y hablando el mismo idioma. ¡Si pueden lograr todo esto tan solo comenzando, nada les será imposible si se fijan un propósito!
೬ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
7 Necesitamos bajar allí y confundir su idioma para que no puedan entender lo que se dicen unos a otros”.
೭ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.
8 Y entonces el Señor los expulsó de allí e hizo que se dispersaran por todo el mundo, y dejaron de construir la ciudad.
೮ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.
9 Por eso la ciudad fue llamada Babel, porque el Señor confundió el idioma que se hablaba en el mundo.
೯ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
10 La siguiente es la genealogía de Sem. Cuando Sem tuvo 100 años, nació su hijo Arfaxad. Esto sucedió dos años después del diluvio.
೧೦ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.
11 Después del nacimiento de Arfaxad, Sem vivió 500 años más y tuvo más hijos e hijas.
೧೧ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು.
12 Cuando Arfaxad tuvo 35 años, nació su hijo Selaj.
೧೨ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು.
13 Después del nacimiento de Selaj, Arfaxad vivió 403 años más y tuvo más hijos e hijas.
೧೩ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
14 Cuando Selaj tuvo 30 años, nació su hijo Éber.
೧೪ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು.
15 Después del nacimiento de Éber, Selaj vivió 403 años más y tuvo más hijos e hijas.
೧೫ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
16 Cuando Éber tuvo 34 años, nació su hijo Peleg.
೧೬ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು.
17 Después del nacimiento de Peleg, Éber vivió 430 años más y tuvo más hijos e hijas.
೧೭ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು.
18 Cuando Peleg tuvo 30 años, nació su hijo Reú.
೧೮ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು.
19 Después del nacimiento de Reú, Peleg vivió 209 años más y tuvo más hijos e hijas.
೧೯ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.
20 Cuando Reú tuvo 32 años, nació su hijo Serug.
೨೦ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು.
21 Después del nacimiento de Serug, Reú vivió 207 años más, y tuvo más hijos e hijas.
೨೧ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.
22 Cuando Serug tuvo 30 años, nació su hijo Nacor.
೨೨ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು.
23 Después del nacimiento de Nacor, Serug vivió 200 años más y tuvo más hijos e hijas.
೨೩ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.
24 Cuando Nacor tuvo 29 años, nació su hijo Téraj.
೨೪ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು.
25 Después del nacimiento de Téraj, Nacor vivió 119 años más, y tuvo más hijos e hijas.
೨೫ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.
26 Cuando Téraj tuvi 70 años, nacieron sus hijos Abram, Nacor y Harán.
೨೬ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
27 Esta es la genealogía de Téraj. Téraj fue el padre de Abram, Nacor y Harán. Harán fue el padre de Lot.
೨೭ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.
28 Sin embargo, Harán murió cuando si padre Téraj aún vivía en Ur de los caldeos, la tierra donde nació.
೨೮ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.
29 Tanto Abram como Nacor se casaron. La esposa de Abram se llamaba Sarai, y la esposa de Nacor se llamaba Milca. (Milca era hija de Harán, quien era padre tanto de Milca como de Jiscá).
೨೯ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
30 Sarai no podia quedar embarazada, por lo tanto no tenía hijos.
೩೦ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
31 Téraj tomó a su hijo Abram, a su nieto Lot, (quien era el hijo de Arám), a su nuera Sarai, (que era la esposa de su hijo Abram), y se fue de Ur de los caldeos para mudarse a Canaán. Llegaron hasta Harán y se quedaron a vivir allí.
೩೧ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
32 Téraj vivió 205 años y murió en Harán.
೩೨ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.