< Isaías 52 >
1 ¡Despierta, despierta, Sión! ¡Sé fuerte! Ponte tus mejores galas, Jerusalén, la ciudad santa. Los extranjeros paganos no volverán a entrar en ti.
೧ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
2 Sacúdete del polvo y levántate. Siéntate en tu trono, Jerusalén. Lanza las cadenas de tu cuello, hija cautiva de Sión.
೨ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!
3 Esto es lo que dice el Señor: Fuiste vendida por nada, y serás comprada de nuevo sin dinero.
೩ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”
4 Esto es lo que dice el Señor: En primer lugar, mi pueblo fue a vivir a Egipto, luego Asiria lo conquistó sin razón.
೪ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.”
5 ¿Qué tengo que hacer ahora? pregunta el Señor. Mi pueblo ha sido llevado al cautiverio sin razón alguna. Los que los gobiernan se burlan de ellos, y a mí me tratan con desprecio todo ese tiempo, dice el Señor.
೫ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.
6 Así que voy a hacer que mi pueblo me conozca; en ese momento sabrán que soy yo quien habla en serio. ¡Sí, soy yo!
೬ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.
7 ¡Qué espectáculo tan maravilloso en las montañas es el que corre a traer buenas noticias, anunciando la paz y la buena nueva, anunciando la salvación, diciendo a Sión: “Tu Dios reina!”
೭ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.
8 Los vigilantes de la ciudad gritan con fuerza y cantan juntos de alegría; todos ven que el Señor vuelve a Jerusalén.
೮ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.
9 Que las ruinas de Jerusalén canten todas de alegría porque el Señor ha venido a cuidar a su pueblo; ha liberado a Jerusalén.
೯ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.
10 El Señor ha demostrado su santo poder a todas las naciones; el mundo entero verá la salvación de nuestro Dios.
೧೦ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
11 ¡Salgan, salgan, salgan de ahí! No traigan nada pagano; salgan y dejen todo atrás. Los que llevan los objetos sagrados del Señor deben purificarse.
೧೧ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
12 Pero no salgan con prisa, no se apresuren como si huyeran, porque el Señor irá delante de ustedes, y también protegerá a los de atrás.
೧೨ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.
13 Mira: mi siervo actuará con sabiduría; será muy alabado, será elevado en su posición y visto como alguien a quien la gente admira.
೧೩ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
14 Pero muchos se horrorizaron de él, tan desfigurado en apariencia, que ya no parece un hombre, tan distinto a cualquier ser humano.
೧೪ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,
15 Sorprenderá a muchas naciones, y los reyes callarán a causa de él, porque verán lo que no se les ha dicho, y entenderán lo que no habían oído.
೧೫ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.