< Jeremías 35 >
1 Este es el mensaje que le llegó a Jeremías de parte del Señor durante el reinado de Joacim hijo de Josías, rey de Judá:
ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು:
2 Ve a donde los recabitas en vivo. Invítalos a venir contigo a una de las salas del Templo del Señor y ofréceles vino para beber.
“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”
3 Fui, pues, a visitar a Jaazanías hijo de Jeremías, hijo de Habazzinías, y a sus hermanos y a todos sus hijos: toda la familia recabita.
ಆಗ ನಾನು ಹಬಚ್ಚಿನ್ಯನ ಮಗ, ಯೆರೆಮೀಯನ ಮಗನಾದ, ಯಾಜನ್ಯನೂ, ಅವನ ಸಹೋದರರನ್ನೂ, ಅವನ ಪುತ್ರರೆಲ್ಲರನ್ನೂ ರೇಕಾಬನ ಸಮಸ್ತ ಮನೆಯವರನ್ನೂ ಕರೆಯುವುದಕ್ಕೆ ಹೋದೆನು.
4 Luego los llevé al Templo del Señor, a una sala que usaban los hijos de Hanán, hijo de Igdaliah, un hombre de Dios. Estaba junto a la que usaban los funcionarios, que estaba encima de la habitación de Maasías hijo de Salum, que era el portero del Templo.
ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,
5 Coloqué unas jarras llenas de vino y unas copas delante de los recabitas y les dije: “Tomad vino”.
ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಹೂಜೆಗಳನ್ನೂ, ಪಂಚ ಪಾತ್ರೆಗಳನ್ನೂ ಇಟ್ಟು ಅವರಿಗೆ, “ದ್ರಾಕ್ಷಾರಸ ಕುಡಿಯಿರಿ,” ಎಂದನು.
6 “No bebemos vino”, dijeron, “porque nuestro antepasado Jonadab hijo de Recab nos dio estas órdenes: ‘Tú y tus descendientes no deben beber nunca vino.
ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ;
7 No construyan nunca casas, ni siembren cosechas, ni planten viñedos. No lo hagan. En cambio, vivan siempre en tiendas para que tengan una larga vida mientras se desplazan de un lugar a otro del país’.
ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
8 “Hemos hecho exactamente lo que nos dijo nuestro antepasado Jonadab hijo de Recab. Ninguno de nosotros ha bebido nunca vino, y eso incluye a nuestras esposas y a nuestros hijos e hijas, así como a nosotros.
ಈ ಪ್ರಕಾರ ನಾವು ನಮ್ಮ ಪೂರ್ವಜನಾದ ರೇಕಾಬನ ಮಗ ಯೆಹೋನಾದಾಬನ ಮಾತನ್ನು, ಅವನು ನಮಗೆ ಆಜ್ಞಾಪಿಸಿದ್ದೆಲ್ಲದರಲ್ಲಿ ನಾವೂ, ನಮ್ಮ ಹೆಂಡತಿಯರೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ನಮ್ಮ ದಿವಸಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ,
9 No hemos construido casas para vivir, ni hemos tenido viñas ni campos ni hemos cultivado nada.
ವಾಸಮಾಡುವುದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ಇದ್ದೇವೆ. ನಮಗೆ ದ್ರಾಕ್ಷಿ ತೋಟಗಳೂ, ಹೊಲಗಳೂ, ಬೀಜವೂ ಇಲ್ಲ.
10 Hemos vivido en tiendas de campaña y hemos obedecido a nuestro antepasado Jonadab, siguiendo todo lo que nos ordenaba.
ಗುಡಾರಗಳಲ್ಲಿ ವಾಸಮಾಡುತ್ತೇವೆ. ನಮ್ಮ ಪೂರ್ವಜನಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಕೇಳಿ ನಡೆದಿದ್ದೇವೆ.
11 “Por eso, cuando Nabucodonosor, rey de Babilonia, invadió el país, decidimos: ‘Vamos, entremos en Jerusalén para ponernos a salvo de los ejércitos de los caldeos, babilonios y arameos’. Por eso nos hemos quedado en Jerusalén”.
ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು.
12 Entonces llegó a Jeremías un mensaje del Señor:
ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,
13 Esto es lo que dice el Señor Todopoderoso, el Dios de Israel: Ve y dile a los hombres de Judá y a los habitantes de Jerusalén: ¿Por qué no aceptan mis instrucciones y obedecen lo que les digo? pregunta el Señor.
“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.
14 Se han seguido las instrucciones de Jonadab hijo de Recab. Él ordenó a sus descendientes que no bebieran vino, y no lo han bebido hasta hoy porque han obedecido el mandato de su antepasado. Pero yo les he dicho una y otra vez lo que deben hacer, ¡y sin embargo se niegan a obedecerme!
ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”
15 Una y otra vez les he enviado a muchos de mis siervos los profetas para decirles ¡Todos, dejen sus malos caminos y hagan lo que es correcto! No sigan a otros dioses ni los adoren. Vivan en la tierra que les di a ustedes y a sus padres. Pero no me han hecho caso ni me han obedecido.
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.
16 Estos descendientes de Jonadab hijo de Recab han seguido el mandato que les dio su antepasado, pero este pueblo no me ha obedecido.
ರೇಕಾಬನ ಮಗ ಯೆಹೋನಾದಾಬನ ಸಂತಾನದವರು ತಮ್ಮ ಪೂರ್ವಜನು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆ ಹೋದರು.
17 Así que esto es lo que dice el Señor Dios Todopoderoso, el Dios de Israel: Mira cómo hago caer sobre Judá y sobre todo el pueblo que vive en Jerusalén todos los desastres que he amenazado hacerles, porque les he dicho lo que deben hacer y no han obedecido; les he apelado y no han respondido.
“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’”
18 Entonces Jeremías dijo a los recabitas Esto es lo que dice el Señor Todopoderoso, el Dios de Israel: Como ustedes han obedecido las instrucciones de su antepasado Jonadab y han seguido sus órdenes y han hecho todo lo que él les dijo que hicieran,
ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆನ್ನುತ್ತಾರೆ: ನೀವು ನಿಮ್ಮ ಪೂರ್ವಜನಾದ ಯೆಹೋನಾದಾಬನ ಅಪ್ಪಣೆಯನ್ನು ಕೇಳಿ, ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ
19 esto es lo que dice el Señor Todopoderoso, el Dios de Israel: Jonadab hijo de Recab tendrá siempre a alguien que estará en mi presencia sirviéndome.
ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆ ಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು, ಇಸ್ರಾಯೇಲರ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಇದನ್ನು ನುಡಿದಿದ್ದಾರೆ,” ಎಂದನು.