< Jueces 9 >
1 Abimelec, hijo de Jerob-baal, se dirigió a los hermanos de su madre en Siquem y les dijo a ellos y a todos los parientes de su madre:
೧ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,
2 “Por favor, preguntad a todos los dirigentes de Siquem: ‘¿Qué es lo mejor para ustedes? ¿Que setenta hombres, todos ellos hijos de Jerob-baal, gobiernen sobre ustedes, o un solo hombre?’ Recuerda que soy de tu propia sangre”.
೨“ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.
3 Los hermanos de su madre compartieron su propuesta con todos los dirigentes de Siquem, y decidieron seguir a Abimelec, porque dijeron: “Es nuestro pariente”.
೩ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.
4 Le dieron setenta siclos de plata del templo de Baal-berit. Abimelec utilizó el dinero para contratar a unos alborotadores arrogantes como su banda.
೪ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,
5 Fue a la casa de su padre en Ofra, y de una pedrada mató a sus setenta hermanastros, los hijos de Jerob-baal. Pero Jotam, el hijo menor de Jerob-baal, escapó escondiéndose.
೫ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
6 Entonces todos los jefes de Siquem y Bet-millo se reunieron junto a la encina en la columna de Siquem y nombraron rey a Abimelec.
೬ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.
7 Cuando Jotam se enteró de esto, subió a la cima del monte Gerizim y gritó en voz alta: “¡Escúchenme, jefes de Siquem, y que Dios los escuche!
೭ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.
8 “Érase una vez que los árboles estaban decididos a ungir un rey que los gobernara. Le dijeron al olivo: ‘Tú serás nuestro rey’.
೮“ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು.
9 Pero el olivo replicó: ‘¿Debo dejar de dar mi rico aceite, que beneficia tanto a los dioses como a los hombres, sólo para ir de un lado a otro de los árboles?’
೯ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.
10 Entonces los árboles pidieron a la higuera: ‘Ven tú y sé nuestro rey’.
೧೦ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
11 Pero la higuera respondió: ‘¿Debo dejar de dar mi buen y dulce fruto para ir a balancearme sobre los árboles?’
೧೧ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
12 Entonces los árboles le preguntaron a la vid: ‘Ven y sé nuestro rey’.
೧೨ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
13 Pero la vid respondió: ‘¿Debo dejar de dar mi vino, que hace felices a los dioses y a los hombres, para ir a balancearme sobre los árboles?’
೧೩ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
14 Entonces todos los árboles le preguntaron al espino: ‘Ven y sé nuestro rey’.
೧೪ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು
15 El arbusto espinoso respondió a los árboles: ‘Si de verdad son sinceros al ungirme como su rey, venid a refugiaros a mi sombra. Pero si no, ¡que salga fuego del espino y queme los cedros del Líbano!’
೧೫ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
16 “¿Has actuado con sinceridad y honestidad al hacer a Abimelec tu rey? ¿Has actuado con honestidad con Jerub-baal y su familia? ¿Lo has respetado por todo lo que hizo?
೧೬“ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?
17 ¡No olvides cómo mi padre luchó por ti y arriesgó su propia vida para salvarte de los madianitas!
೧೭ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.
18 “Pero hoy te has rebelado contra la familia de mi padre. Has matado a sus setenta hijos de una sola piedra y has hecho a Abimelec, el hijo de su esclava, rey de los dirigentes de Siquem simplemente porque es pariente tuyo.
೧೮ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
19 ¿Has actuado hoy con sinceridad y honestidad con Jerub-baal y su familia? Si es así, ¡que seas feliz con Abimelec, y que él sea feliz también!
೧೯ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.
20 Pero si no lo has hecho, ¡que salga fuego de Abimelec y que queme a los líderes de Siquem y de Bet-millo, y que salga fuego de los líderes de Siquem y de Bet-millo y que queme a Abimelec!”
೨೦ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.
21 Entonces Jotam escapó y huyó. Fue a Beer y se quedó allí por la amenaza de su hermano Abimelec.
೨೧ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.
22 Abimelec gobernó sobre Israel durante tres años.
೨೨ಅಬೀಮೆಲೆಕನು ಇಸ್ರಾಯೇಲರನ್ನು ಮೂರು ವರ್ಷ ಆಳಿದ ನಂತರ
23 Entonces Dios envió un espíritu maligno para causar problemas entre Abimelec y los líderes de Siquem. Los líderes de Siquem traicionaron a Abimelec.
೨೩ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.
24 Esto sucedió por el asesinato de los setenta hijos de Jerob-baal y para que la responsabilidad de su sangre recayera en Abimelec, su hermano, que los mató, y en los líderes de Siquem, que proporcionaron los medios para matar a sus hermanos.
೨೪ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.
25 Los jefes de Siquem enviaron hombres a los pasos de la colina para que acecharan y atacaran a Abimelec, y, mientras tanto, robaban a todos los que pasaban por el camino. Abimelec se enteró de lo que ocurría.
೨೫ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
26 Gaal, hijo de Ebed, se había trasladado a Siquem con sus parientes, y se ganó la lealtad de los dirigentes de Siquem.
೨೬ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.
27 En la época de la cosecha salieron al campo, recogieron las uvas de sus viñedos y las pisaron. Lo celebraron haciendo una fiesta en el templo de su dios, donde comieron y bebieron, y maldijeron a Abimelec.
೨೭ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.
28 “¿Quién es ese Abimelec?”, preguntó Gaal, hijo de Ebed. “¿Y quién es Siquem, para que tengamos que servirle? ¿No es él el hijo de Jerub-baal, mientras que Zebul es el que manda en realidad? Deberías servir a la familia de Hamor, el padre de Siquem. ¿Por qué tendríamos que servir a Abimelec?
೨೮ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.
29 ¡Si yo fuera el encargado de ustedes, me desharía de Abimelec! Le diría: ‘¡Reúne a tu ejército y ven a luchar!’”.
೨೯ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು” ಎಂದು ಹೇಳಿ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ” ಎಂದು ಕೊಚ್ಚಿಕೊಂಡನು.
30 Cuando Zebul, el gobernador de la ciudad, escuchó lo que decía Gaal, se enojó mucho.
೩೦ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,
31 Envió secretamente mensajeros a Abimelec para decirle: “Mira, Gaal, hijo de Ebed, y sus parientes han llegado a Siquem, y están incitando al pueblo a rebelarse contra ti.
೩೧“ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.
32 Así que ven de noche con tu ejército y escóndete en el campo.
೩೨ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ
33 Por la mañana, en cuanto salga el sol, ve a atacar la ciudad. Cuando Gaal y sus hombres salgan a combatirte, podrás hacerles lo que quieras”.
೩೩ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು.
34 Abimelec partió de noche junto con su ejército, y se separaron en cuatro compañías que acecharon cerca de Siquem.
೩೪ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.
35 Cuando Gaal, hijo de Ebed, salió y se puso a la puerta de entrada de la ciudad, Abimelec y su ejército salieron de donde se habían escondido.
೩೫ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
36 Gaal vio que el ejército se acercaba y le dijo a Zebul: “¡Mira, hay gente que baja de las cumbres!”. “Eso son sólo sombras hechas por las colinas que parecen hombres”, respondió Zebul.
೩೬ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ” ಎಂದು ಹೇಳಿದನು. ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ” ಅನ್ನಲು
37 “No, en realidad, la gente está bajando de las alturas”, repitió Gaal. “Además, hay otra compañía que viene por el camino que pasa por el roble de los adivinos”.
೩೭ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು.
38 “¿Dónde está tu bocaza ahora? Tú eres el que dijo: ‘¿Quién es ese Abimelec, para que tengamos que servirle?’”, le dijo Zebul. “¿No es ésta la gente que detestabas? Pues vete y lucha con ellos”.
೩೮ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.
39 Así que Gaal condujo a los líderes de Siquem fuera de la ciudad y luchó con Abimelec.
೩೯ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.
40 Abimelec los atacó y los persiguió a él y a sus hombres mientras huían, matando a muchos de ellos cuando trataban de regresar a la puerta del pueblo.
೪೦ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
41 Abimelec regresó a Arumá, mientras Zebul expulsaba a Gaal y a sus parientes de Siquem.
೪೧ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಓಡಿಸಿಬಿಟ್ಟನು.
42 Al día siguiente el pueblo de Siquem salió a los campos, y Abimelec fue informado de ello.
೪೨ಮರುದಿನ ಜನರು ಬೈಲಿಗೆ ಹೊರಟು ಬಂದರು;
43 Dividió a su ejército en tres compañías y las hizo emboscar en los campos. Cuando vio que la gente salía de la ciudad, los atacó y los mató.
೪೩ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು.
44 Abimelec y su compañía corrieron a ocupar la puerta de entrada de la ciudad, mientras que las dos compañías corrieron a atacar a todos en los campos y matarlos.
೪೪ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.
45 La batalla por la ciudad duró todo el día, pero finalmente Abimelec la capturó. Mató a la gente, demolió la ciudad y esparció sal por el suelo.
೪೫ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
46 Cuando todos los líderes de la torre de Siquem se dieron cuenta de lo que había sucedido, se refugiaron en la cámara acorazada del templo de El-berit.
೪೬ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.
47 Cuando Abimelec se enteró de que todos los líderes de la torre de Siquem se habían reunido allí,
೪೭ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ
48 él y todos los hombres que lo acompañaban subieron al monte Zalmón. Abimelec tomó un hacha y cortó una rama de los árboles. Se la subió al hombro y les dijo a sus hombres: “¡Rápido! Ya vieron lo que hice. Hagan ustedes lo mismo”.
೪೮ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು
49 Cada uno de ellos cortó una rama y siguió a Abimelec. Colocaron las ramas contra la cámara acorazada y le prendieron fuego. Así murió toda la gente que vivía en la torre de Siquem, unos mil hombres y mujeres.
೪೯ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
50 Luego Abimelec fue a atacar Tebez y la capturó.
೫೦ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.
51 Pero había una torre fuerte dentro de la ciudad. Todos los hombres y mujeres y los líderes de la ciudad corrieron hacia allí y se atrincheraron, y luego subieron al techo de la torre.
೫೧ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.
52 Abimelec subió a la torre para atacarla. Pero cuando se acercaba a la entrada de la torre para prenderle fuego,
೫೨ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,
53 una mujer dejó caer una piedra de molino sobre la cabeza de Abimelec y le abrió el cráneo.
೫೩ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
54 Rápidamente llamó al joven que llevaba sus armas y le ordenó: “Saca tu espada y mátame, para que no digan de mí que lo mató una mujer”. Entonces el joven lo atravesó con su espada, y murió.
೫೪ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.
55 Cuando los israelitas vieron que Abimelec estaba muerto, se fueron todos a sus casas.
೫೫ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.
56 Así pagó Dios a Abimelec el crimen que cometió contra su padre al asesinar a sus setenta hermanos.
೫೬ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.
57 También pagó al pueblo de Siquem por su maldad, y la maldición de Jotam, hijo de Jerob-baal, cayó sobre ellos.
೫೭ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.