< 1 Crónicas 22 >
1 Entonces David dijo: “Esta es la casa de Yahvé Dios, y este es el altar del holocausto para Israel”.
೧ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.
2 David dio órdenes de reunir a los extranjeros que estaban en la tierra de Israel, y puso a los albañiles a cortar piedras labradas para construir la casa de Dios.
೨ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
3 David preparó hierro en abundancia para los clavos de las puertas y para los enganches, y bronce en abundancia sin peso,
೩ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
4 y cedros en abundancia, porque los sidonios y la gente de Tiro le trajeron cedros en abundancia a David.
೪ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.
5 David dijo: “Salomón, mi hijo, es joven y tierno, y la casa que se va a construir para Yahvé debe ser sumamente magnífica, de fama y de gloria en todos los países. Por lo tanto, haré los preparativos para ello”. Así que David se preparó abundantemente antes de su muerte.
೫ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.
6 Luego llamó a su hijo Salomón y le ordenó que construyera una casa para Yahvé, el Dios de Israel.
೬ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.
7 David le dijo a su hijo Salomón: “En cuanto a mí, tenía en mi corazón construir una casa al nombre de Yahvé, mi Dios.
೭ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.
8 Pero vino a mí la palabra de Yahvé, diciendo: ‘Has derramado mucha sangre y has hecho grandes guerras. No construirás una casa a mi nombre, porque has derramado mucha sangre en la tierra a mis ojos.
೮ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.
9 He aquí que te nacerá un hijo, que será un hombre de paz. Le daré descanso de todos sus enemigos alrededor; porque su nombre será Salomón, y daré paz y tranquilidad a Israel en sus días.
೯ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
10 Él edificará una casa a mi nombre, y él será mi hijo, y yo seré su padre; y estableceré el trono de su reino sobre Israel para siempre.’
೧೦ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.
11 Ahora, hijo mío, que el Señor te acompañe y te haga prosperar, y que construyas la casa del Señor, tu Dios, como él ha hablado de ti.
೧೧ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
12 Que Yahvé te dé discreción y entendimiento, y te ponga al frente de Israel, para que cumplas la ley de Yahvé vuestro Dios.
೧೨ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.
13 Entonces prosperarás, si cumples con los estatutos y las ordenanzas que el Señor le dio a Moisés acerca de Israel. Sé fuerte y valiente. No tengas miedo ni te desanimes.
೧೩ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
14 Ahora bien, he aquí que en mi aflicción he preparado para la casa de Yahvé cien mil talentos de oro, un millón de talentos de plata, y bronce y hierro sin peso, pues hay en abundancia. También he preparado madera y piedra; y tú puedes añadirlas.
೧೪ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
15 También hay con vosotros obreros en abundancia — cortadores y trabajadores de la piedra y de la madera, y toda clase de hombres hábiles en toda clase de trabajos;
೧೫ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,
16 del oro, de la plata, del bronce y del hierro, no hay número. Levantaos y haced, y que el Señor esté con vosotros”.
೧೬ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
17 David también ordenó a todos los príncipes de Israel que ayudaran a su hijo Salomón, diciendo:
೧೭ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
18 “¿No está Yahvé, tu Dios, contigo? ¿No te ha dado descanso por todos lados? Porque él ha entregado a los habitantes de la tierra en mi mano; y la tierra está sometida ante el Señor y ante su pueblo.
೧೮ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
19 Ahora pon tu corazón y tu alma para seguir a Yahvé, tu Dios. Levántate, pues, y construye el santuario de Yahvé Dios, para llevar el arca de la alianza de Yahvé y los utensilios sagrados de Dios a la casa que se va a construir para el nombre de Yahvé.”
೧೯ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.