< San Lucas 10 >
1 Después de esto, el Señor designó también a otros setenta, y los envió de dos en dos delante de él a todas las ciudades y lugares a los que iba a llegar.
೧ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
2 Y les dijo: “La mies es abundante, pero los obreros son pocos. Rogad, pues, al Señor de la mies que envíe obreros a su mies.
೨ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
3 Seguid vuestro camino. He aquí que os envío como corderos en medio de lobos.
೩ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
4 No lleven bolso, ni cartera, ni sandalias. No saluden a nadie en el camino.
೪ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
5 En cualquier casa en la que entréis, decid primero: “Paz a esta casa”.
೫ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
6 Si hay un hijo de la paz, tu paz descansará en él; pero si no, volverá a ti.
೬ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
7 Quédate en esa misma casa, comiendo y bebiendo lo que te den, porque el trabajador es digno de su salario. No vayas de casa en casa.
೭ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
8 En cualquier ciudad en la que entres y te reciban, come lo que te pongan delante.
೮ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
9 Sanad a los enfermos que estén allí y decidles: “El Reino de Dios se ha acercado a vosotros”.
೯ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
10 Pero en cualquier ciudad en la que entréis y no os reciban, salid a sus calles y decid:
೧೦ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
11 ‘Hasta el polvo de vuestra ciudad que se nos pegue, lo limpiamos contra vosotros. Sin embargo, sabed que el Reino de Dios se ha acercado a vosotros’.
೧೧‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
12 Os digo que aquel día será más tolerable para Sodoma que para esa ciudad.
೧೨ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
13 “¡Ay de ti, Corazín! ¡Ay de ti, Betsaida! Porque si en Tiro y en Sidón se hubieran hecho las maravillas que se han hecho en vosotros, hace tiempo que se habrían arrepentido, sentados en cilicio y ceniza.
೧೩ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
14 Pero será más tolerable para Tiro y Sidón en el juicio que para vosotros.
೧೪ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
15 Vosotros, Capernaum, que estáis exaltados hasta el cielo, seréis descendida al Hades. (Hadēs )
೧೫ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. (Hadēs )
16 El que os escucha a vosotros me escucha a mí, y el que os rechaza a vosotros me rechaza a mí. El que me rechaza a mí, rechaza al que me envió”.
೧೬ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
17 Los setenta volvieron con alegría, diciendo: “¡Señor, hasta los demonios se nos someten en tu nombre!”
೧೭ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
18 Les dijo: “He visto a Satanás caer del cielo como un rayo.
೧೮ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
19 He aquí que os doy autoridad para pisar serpientes y escorpiones, y sobre todo el poder del enemigo. Nada podrá haceros daño.
೧೯ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
20 Sin embargo, no os alegréis de que los espíritus se os sometan, sino alegraos de que vuestros nombres estén escritos en el cielo.”
೨೦ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
21 En esa misma hora, Jesús se regocijó en el Espíritu Santo y dijo: “Te doy gracias, Padre, Señor del cielo y de la tierra, porque has ocultado estas cosas a los sabios y entendidos y las has revelado a los niños. Sí, Padre, porque así ha sido agradable a tus ojos”.
೨೧ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
22 Volviéndose a los discípulos, dijo: “Todo me ha sido entregado por mi Padre. Nadie sabe quién es el Hijo, sino el Padre, y quién es el Padre, sino el Hijo, y aquel a quien el Hijo quiera revelarlo.”
೨೨ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
23 Volviéndose a los discípulos, les dijo en privado: “Dichosos los ojos que ven lo que vosotros veis,
೨೩ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
24 porque os digo que muchos profetas y reyes desearon ver lo que vosotros veis, y no lo vieron, y oír lo que vosotros oís, y no lo oyeron.”
೨೪ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
25 He aquí que un abogado se levantó y le puso a prueba, diciendo: “Maestro, ¿qué debo hacer para heredar la vida eterna?” (aiōnios )
೨೫ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (aiōnios )
26 Le dijo: “¿Qué está escrito en la ley? ¿Cómo la lees?”
೨೬ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
27 Respondió: “Amarás al Señor tu Dios con todo tu corazón, con toda tu alma, con todas tus fuerzas y con toda tu mente, y a tu prójimo como a ti mismo”.
೨೭ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
28 Le dijo: “Has respondido correctamente. Haz esto y vivirás”.
೨೮ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
29 Pero él, queriendo justificarse, preguntó a Jesús: “¿Quién es mi prójimo?”
೨೯ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
30 Jesús respondió: “Un hombre bajaba de Jerusalén a Jericó, y cayó en manos de unos ladrones, que lo despojaron y golpearon, y se fueron dejándolo medio muerto.
೩೦ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
31 Por casualidad, un sacerdote bajaba por ese camino. Al verlo, pasó por el otro lado.
೩೧ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
32 Del mismo modo, un levita, al llegar al lugar y verlo, pasó por el otro lado.
೩೨ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
33 Pero un samaritano, que iba de camino, llegó donde él estaba. Al verlo, se compadeció,
೩೩ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
34 se acercó a él y vendó sus heridas, echando aceite y vino. Lo montó en su propio animal, lo llevó a una posada y lo cuidó.
೩೪ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
35 Al día siguiente, cuando se marchó, sacó dos denarios, se los dio al anfitrión y le dijo: “Cuida de él. Lo que gastes de más, te lo devolveré cuando vuelva’.
೩೫ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
36 Ahora bien, ¿cuál de estos tres te parece que era prójimo del que cayó entre los ladrones?”
೩೬ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
37 Dijo: “El que se apiadó de él”. Entonces Jesús le dijo: “Ve y haz lo mismo”.
೩೭ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
38 Mientras iban de camino, entró en una aldea, y una mujer llamada Marta le recibió en su casa.
೩೮ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
39 Ella tenía una hermana llamada María, que también se sentaba a los pies de Jesús y escuchaba su palabra.
೩೯ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
40 Pero Marta estaba distraída con muchos quehaceres, y se acercó a él y le dijo: “Señor, ¿no te importa que mi hermana me haya dejado sola para servir? Pídele, pues, que me ayude”.
೪೦ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
41 Jesús le contestó: “Marta, Marta, te afanas y te preocupas por muchas cosas,
೪೧ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
42 perouna cosa es necesaria. María ha elegido la parte buena, que no le será quitada”.
೪೨ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.