< Cantar de los Cantares 7 >

1 ¡Qué hermosos son tus pies en sandalias, hija del príncipe! Tus muslos redondeados son como joyas, el trabajo de las manos de un hábil obrero.
ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.
2 Tu cuerpo es como una copa redonda, no falta ningún vino mezclado. Tu cintura es como un montón de trigo, con lirios.
ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
3 Tus dos pechos son como dos cervatillos, que son gemelos de una corza.
ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳ ಹಾಗಿವೆ.
4 Tu cuello es como una torre de marfil. Tus ojos son como los estanques de Hesbón, junto a la puerta de Bathrabbim. Tu nariz es como la torre del Líbano que mira hacia Damasco.
ನಿನ್ನ ಕೊರಳು ದಂತದ ಗೋಪುರ. ನಿನ್ನ ಕಣ್ಣುಗಳು ಬತ್ ರಬ್ಬೀಮ್ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಕೊಳಗಳು. ನಿನ್ನ ಮೂಗು, ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದ ಹಾಗಿದೆ.
5 Tu cabeza en ti es como el Carmelo. El pelo de tu cabeza como la púrpura. El rey está cautivo en sus mechones.
ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.
6 Qué hermosa y qué agradable eres, ¡el amor, por las delicias!
ನನ್ನ ಪ್ರೇಮವೇ, ನೀನು ನಿನ್ನ ಹರ್ಷದಿಂದ ಎಷ್ಟೋ ಸುಂದರಿಯೂ ಎಷ್ಟೋ ಮನೋಹರಳೂ ಆಗಿರುವೆ.
7 Esta, tu estatura, es como una palmera, tus pechos como su fruto.
ನಿನ್ನ ನೀಳ ಆಕಾರವು ಖರ್ಜೂರ ಮರದಂತಿದೆ. ನಿನ್ನ ಸ್ತನಗಳು ಅದರ ಗೊಂಚಲುಗಳು.
8 Dije: “Me subiré a la palmera. Me apoderaré de su fruto”. Que tus pechos sean como racimos de vid, el olor de tu aliento como el de las manzanas.
ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.
9 Tu boca es como el mejor vino, que se le va de las manos a mi amada, deslizándose por los labios de los que duermen.
ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ಪ್ರಿಯತಮೆ ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.
10 Yo soy de mi amada. Su deseo es hacia mí.
ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.
11 ¡Ven, amado mío! Salgamos al campo. Alojémonos en los pueblos.
ನನ್ನ ಪ್ರಿಯನೇ, ಬಾ ಹೋಗೋಣ. ನಾವು ಗ್ರಾಮಗಳಲ್ಲಿ ವಸತಿಯಾಗಿರೋಣ ಬಾ.
12 Vayamos temprano a los viñedos. Veamos si la vid ha brotado, su flor está abierta, y las granadas están en flor. Allí te daré mi amor.
ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.
13 Las mandrágoras producen fragancia. A nuestras puertas hay todo tipo de frutos preciosos, nuevos y viejos, que he guardado para ti, mi amada.
ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.

< Cantar de los Cantares 7 >