< 1 Pedro 2 >
1 Por tanto desechen toda maldad, engaño, hipocresía, envidias y maledicencia.
೧ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.
2 Deseen como bebés recién nacidos la leche espiritual no adulterada para que por medio de ella crezcan en [la] salvación,
೨ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.
3 pues ustedes experimentaron la benignidad del Señor.
೩ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ.
4 Acérquense a [Cristo], Piedra Viva, ciertamente desechada por [los] hombres, pero para Dios escogida, preciosa.
೪ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.
5 Ustedes también, como piedras vivas, son edificados como casa espiritual y sacerdocio santo para ofrecer sacrificios espirituales aceptables a Dios por medio de Jesucristo.
೫ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
6 Por lo cual dice la Escritura: Ciertamente, pongo en Sion la Piedra del ángulo, escogida, preciosa. Y el que cree en Él, Que de ningún modo sea avergonzado.
೬“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
7 [Él] es precioso para ustedes los que creen, pero para los incrédulos: [La ]piedra que desecharon los edificadores Fue establecida como la cabeza del ángulo.
೭ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”
8 Y: Piedra de tropiezo y roca que hace caer. Éstos, al ser desobedientes, tropiezan en la Palabra. Tal es su destino.
೮ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
9 Pero ustedes son linaje escogido, sacerdocio real, nación santa, pueblo adquirido por Dios para que proclamen las virtudes del que los llamó de la oscuridad a su luz admirable,
೯ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
10 los que en un tiempo no eran pueblo, pero ahora son pueblo de Dios, los no compadecidos por misericordia, pero ahora compadecidos por misericordia.
೧೦ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.
11 Amados, les ruego como a extranjeros y peregrinos, que se abstengan de los ardientes deseos humanos que se enfrentan en batalla contra el alma.
೧೧ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
12 Sea buena su manera de vivir entre los gentiles, para que cuando los malhechores murmuren de ustedes, glorifiquen a Dios cuando vean sus obras buenas [el] día de la supervisión.
೧೨ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
13 Por causa del Señor, sométanse a toda institución que tiene poder como máxima autoridad,
೧೩ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ
14 tanto a los gobernadores, como a los enviados por ellos para castigar a los malhechores y para aprobar a los que hacen bien.
೧೪ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.
15 Porque así es la voluntad de Dios, que por hacer bien, callen la ignorancia de los hombres insensatos.
೧೫ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.
16 [Vivan] como libres, como esclavos de Dios, pero no como si tuvieran la libertad como pretexto para la maldad.
೧೬ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
17 Honren a todos, amen a la hermandad, teman a Dios, honren al rey.
೧೭ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.
18 Esclavos, sométanse con todo respeto a sus amos, no solo a los buenos y apacibles, sino también a los ásperos.
೧೮ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.
19 Porque esto merece aprobación: cuando alguno soporta aflicciones y padece injustamente por causa de la conciencia delante de Dios.
೧೯ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
20 Pues ¿qué mérito tienen si son abofeteados por pecar y soportan? Pero si cuando hacen el bien soportan y padecen, esto ciertamente es agradable ante Dios,
೨೦ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.
21 porque para esto fueron llamados. También Cristo padeció por nosotros y nos dejó ejemplo para que ustedes sigan sus pisadas.
೨೧ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.
22 Él no pecó, ni fue hallado engaño en su boca.
೨೨ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
23 Cuando era insultado, no replicaba. Cuando padecía, no amenazaba, sino se encomendaba al que juzga justamente.
೨೩ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
24 Él mismo llevó nuestros pecados en su cuerpo sobre el madero para que nosotros muramos a los pecados y vivamos para la justicia. Por su herida fueron sanados.
೨೪ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
25 Ustedes eran como ovejas descarriadas, pero ahora volvieron al Pastor y Supervisor de sus almas.
೨೫ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.