< 2 Crónicas 23 >
1 El año séptimo Joiada se fortaleció. Hizo un pacto con los jefes de centenas: con Azarías, hijo de Jeroham, Ismael, hijo de Johanán, Azarías, hijo de Obed, Maasías, hijo de Adaía, y Elisafat, hijo de Zicri.
ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.
2 Recorrieron Judá para convocar a los levitas de todas las ciudades de Judá y a los jefes de las casas paternas de Israel. Fueron a Jerusalén.
ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.
3 Entonces toda la congregación hizo un pacto con respecto al rey en la Casa de ʼElohim. Joiada les dijo: Aquí está el hijo del rey quien reinará, tal como Yavé habló acerca de los descendientes de David.
ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.
4 Esto es lo que harán: la tercera parte de ustedes, los sacerdotes y los levitas que entran el sábado, estarán de porteros en las puertas.
ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.
5 Otra tercera parte estará en el palacio real. Otra tercera parte, en la puerta del Fundamento. Todo el pueblo estará en los patios de la Casa de Yavé.
ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.
6 Pero nadie entrará en la Casa de Yavé, excepto los sacerdotes y los levitas que ministran. Solo éstos podrán entrar, porque están consagrados. Y todo el pueblo guardará la ordenanza de Yavé.
ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.
7 Los levitas rodearán al rey por todas partes, cada uno con sus armas en la mano, y cualquiera que entre en la Casa morirá. Estarán con el rey cuando entre y cuando salga.
ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.
8 Los levitas y todo Judá hicieron según todo lo que ordenó el sacerdote Joiada. Tomaron cada uno a sus hombres, a los que entrarían o saldrían el sábado, pues el sacerdote Joiada no dio licencia a los grupos.
ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.
9 Después el sacerdote Joiada entregó a los jefes de centenas las lanzas, los escudos pequeños y los escudos grandes del rey David que estaban en la Casa de ʼElohim.
ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,
10 Colocó a todo la gente en orden alrededor del rey, cada uno con su espada en la mano, desde el lado derecho de la Casa hasta el lado izquierdo, delante del altar y la Casa.
ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.
11 Luego sacaron al hijo del rey, lo coronaron, le dieron el Testimonio y lo proclamaron rey. Joiada y sus hijos lo ungieron y dijeron: ¡Viva el rey!
ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
12 Cuando Atalía oyó el ruido de la gente que corría y aclamaba al rey, se acercó al pueblo en la Casa de Yavé.
ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
13 Miró, y ahí estaba el rey en pie en su tarima real en la entrada, y los jefes y trompetistas junto al rey. Todo el pueblo de la tierra estaba alborozado y tocaba las trompetas. Los cantores con los instrumentos musicales dirigían las aclamaciones. Entonces Atalía rasgó sus ropas y exclamó: ¡Conspiración! ¡Conspiración!
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.
14 Pero el sacerdote Joiada sacó a los jefes de centenas que comandaban la tropa y les dijo: ¡Déjenla pasar entre las filas, y cualquiera que la siga, que muera a espada! Pues el sacerdote advirtió: No la maten en la Casa de Yavé.
ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
15 Así que ellos le abrieron paso, y ella fue hacia la puerta de los Caballos en el palacio real. Allí la mataron.
ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.
16 Entonces Joiada hizo un pacto con el rey y todo el pueblo, según el cual serían el pueblo de Yavé.
ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.
17 Después todo el pueblo fue al templo de baal y lo destruyó, destrozó sus altares y sus imágenes. Mató a Matán, sacerdote de baal, delante de los altares.
ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.
18 Luego Joiada organizó los ministerios en la Casa de Yavé bajo la mano de los sacerdotes levitas, a quienes David distribuyó en la Casa de Yavé para ofrecer los holocaustos a Yavé con regocijo y cánticos, según lo escrito en la Ley de Moisés, como David ordenó.
ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.
19 También estableció porteros en las puertas de la Casa de Yavé, para que ningún impuro entrara por ningún motivo.
ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.
20 Luego tomó a los jefes de centenas, los magistrados, los gobernadores del pueblo y todo el pueblo de la tierra y llevaron al rey desde la Casa de Yavé, pasaron por la puerta Superior al palacio real y sentaron al rey en el trono del reino.
ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.
21 Todo el pueblo de la tierra se regocijó. La ciudad estaba tranquila, porque mataron a Atalía a filo de espada.
ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.