< 2 Reyes 24 >
1 En su tiempo subió Nabucodonosor, rey de Babilonia, y Joacim fue su vasallo durante tres años. Luego cambió de parecer y se rebeló contra él.
ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.
2 Entonces Yavé envió contra él tropas de caldeos, sirios, moabitas y amonitas. Las envió contra Judá para destruirla, según la Palabra que Yavé habló por medio de sus esclavos profetas.
ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
3 Ciertamente por mandato de Yavé sucedió esto contra Judá para quitarla de su Presencia por los pecados de Manasés, en conformidad con todo lo que él hizo,
ನಿಶ್ಚಯವಾಗಿ ಯೆಹೋವ ದೇವರ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಮನಸ್ಸೆಯು ತನ್ನ ಸಮಸ್ತ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ, ಯೆಹೂದವನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕುವಂತೆ ಇದಾಯಿತು.
4 y también por la sangre inocente que derramó, pues llenó a Jerusalén de sangre inocente. Por tanto, Yavé no quiso perdonar.
ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.
5 Todo lo que hizo Joacim, ¿no está escrito en el rollo de las Crónicas de los reyes de Judá?
ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
6 Joacim reposó con sus antepasados, y reinó en su lugar su hijo Joaquín.
ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.
7 El rey de Egipto nunca volvió a salir de su tierra, pues el rey de Babilonia conquistó todo lo que era del rey de Egipto, desde el río de Egipto hasta el río Éufrates.
ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.
8 Joaquín tenía 18 años cuando comenzó a reinar, y reinó en Jerusalén tres meses. El nombre de su madre fue Nehusta, hija de Elnatán de Jerusalén.
ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ.
9 Hizo lo malo ante Yavé, conforme a todo lo que hizo su padre.
ಅವನು ತನ್ನ ತಂದೆಯು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.
10 En aquel tiempo los esclavos de Nabucodonosor, rey de Babilonia, subieron contra Jerusalén, y la ciudad fue sitiada.
ಆ ಕಾಲದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮಿಗೆ ವಿರೋಧವಾಗಿ ಬಂದು ಆ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.
11 También Nabucodonosor, rey de Babilonia, vino contra la ciudad cuando sus esclavos la sitiaban.
ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು.
12 Joaquín, rey de Judá, salió al rey de Babilonia con su madre, sus esclavos, sus jefes y sus funcionarios. Así que el año octavo de su reinado, el rey de Babilonia lo tomó cautivo.
ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.
13 Sacó de allí todos los tesoros de la Casa de Yavé y los tesoros de la casa real. Destrozó todos los utensilios de oro que Salomón, rey de Israel, hizo para el Santuario de Yavé, tal como habló Yavé.
ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು.
14 Llevó en cautiverio a toda Jerusalén, todos los gobernantes y todos los hombres valientes: 10.000 cautivos y a todos los artesanos y herreros. No quedaron sino los más pobres de la tierra.
ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.
15 También llevó cautivo a Babilonia a Joaquín, la madre del rey, las mujeres del rey, sus funcionarios y los nobles del país. Los llevó cautivos de Jerusalén a Babilonia.
ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.
16 El rey de Babilonia llevó cautivos a todos los 7.000 hombres de guerra, a los artesanos y herreros, que fueron 1.000, y todos valientes guerreros.
ಬಾಬಿಲೋನಿನ ಅರಸನು ಸಮಸ್ತ ಸ್ಥಿತಿವಂತರಾದ ಏಳು ಸಾವಿರ ಸೈನಿಕರನ್ನೂ, ಕೌಶಲಗಾರರನ್ನೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಾಬಿಲೋನಿಗೆ ಸೆರೆಯಾಗಿ ಒಯ್ದನು.
17 El rey de Babilonia colocó a Matanías, tío de Joaquín, como rey en lugar de Joaquín y le cambió el nombre por Sedequías.
ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು.
18 Cuando Sedequías comenzó a reinar tenía 21 años, y reinó 11 años en Jerusalén. El nombre de su madre fue Hamutal, hija de Jeremías de Libna.
ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.
19 Hizo lo malo ante Yavé, conforme a todo lo que hizo Joacim,
ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
20 porque Sedequías se rebeló contra el rey de Babilonia por causa de la ira que Yavé tenía contra Jerusalén y Judá para echarlas de su Presencia.
ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.