< Éxodo 27 >
1 El altar lo harás cuadrado, de madera de acacia de 2,25 metros de largo y de ancho, y de 1,35 metros de alto.
೧ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.
2 Le harás cuernos en sus cuatro esquinas. Los cuernos serán de una misma pieza, recubiertos de bronce.
೨ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.
3 También harás sus vasijas para recibir la ceniza, y sus paletas, tazones, tenedores y braseros. Todos sus utensilios los harás de bronce.
೩ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
4 Le harás una rejilla de bronce en forma de red. Sobre la rejilla en sus cuatro esquinas, harás cuatro argollas de bronce.
೪ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.
5 La pondrás debajo del borde del altar, y llegará hasta la mitad del altar.
೫ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
6 Harás varas de madera de acacia recubiertas de bronce para el altar.
೬ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.
7 Sus varas se meterán por las argollas, y cuando sea transportado, las varas estarán a ambos lados del altar.
೭ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.
8 Lo harás hueco, de tablas. Lo harán como te fue mostrado en la Montaña.
೮ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.
9 También harás el patio del Tabernáculo. Por el lado sur, el patio tendrá cortinas de cordoncillo de lino de 45 metros de largo por cada lado.
೯ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.
10 Sus 20 columnas y sus 20 basas serán de bronce, pero los capiteles de las columnas y sus molduras, de plata.
೧೦ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.
11 También en el lado norte habrá a lo largo cortinas de 45 metros de largo. Sus columnas serán 20, con sus 20 basas de bronce, pero los capiteles de las columnas y sus molduras serán de plata.
೧೧ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.
12 A lo ancho del patio, por el extremo del occidente, habrá cortinas de 22,5 metros. Sus columnas serán diez, con sus diez basas.
೧೨ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.
13 El patio de la puerta por el lado del oriente será de 22,5 metros.
೧೩ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
14 Las cortinas para un lado serán de 6,75 metros. Sus columnas serán tres, con sus tres basas y
೧೪ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.
15 al otro lado, cortinas de 6,75 metros, sus tres columnas, con sus tres basas.
೧೫ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು
16 En la entrada del patio habrá una cortina de 9 metros de [tela] azul, púrpura y carmesí y cordoncillo de lino, obra de bordador. Sus columnas serán cuatro, con sus cuatro basas.
೧೬ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.
17 Todas las columnas alrededor del patio tendrán abrazaderas de plata. Sus capiteles serán de plata y sus basas serán de bronce.
೧೭ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.
18 La longitud del patio será de 45 metros, la anchura de 22,5 metros por ambos lados y la altura de 2,25 metros. Sus cortinas serán de cordoncillo de lino y sus basas de bronce.
೧೮ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು.
19 Todos los utensilios del Tabernáculo para todo su servicio, todas sus estacas y todas las estacas del patio serán de bronce.
೧೯ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.
20 Y tú ordenarás a los hijos de Israel que te traigan aceite puro de olivas machacadas para el alumbrado, a fin de que la lámpara arda continuamente
೨೦ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
21 en el Tabernáculo de Reunión, afuera del velo que está antes del Testimonio. Desde la noche hasta la mañana Aarón y sus hijos la mantendrán delante de Yavé. Será un estatuto perpetuo para los hijos de Israel en todas sus generaciones.
೨೧ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.