< Éxodo 33 >

1 Yavé habló a Moisés: Sal. Sube de aquí, tú y el pueblo que sacaste de la tierra de Egipto para llevarlo a la tierra de la cual juré a Abraham, Isaac y Jacob: La daré a tus descendientes.
ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.
2 Enviaré delante de ti a mi Ángel, y expulsaré al cananeo, al amorreo, al heteo, al ferezeo, al heveo y al jebuseo,
ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.
3 a una tierra que fluye leche y miel. Porque no subiré en medio de ti, no sea que te consuma en el camino, pues eres un pueblo indómito.
ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.
4 Al escuchar el pueblo esta mala noticia, hicieron duelo y ninguno se vistió sus atavíos.
ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
5 Porque Yavé le dijo a Moisés: Dí a los hijos de Israel: Ustedes son un pueblo indómito. Si por un momento subiera en medio de ti, te consumiría. Ahora, pues, quita tus adornos de ti para que Yo sepa qué hacer contigo.
ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.
6 Por lo cual los hijos de Israel se despojaron de sus atavíos desde la Montaña Horeb en adelante.
ಅದರಂತೆಯೇ ಇಸ್ರಾಯೇಲರು ಹೋರೇಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
7 Moisés tomaba el Tabernáculo y lo levantaba lejos, fuera del campamento. Lo llamó Tabernáculo de Reunión. Todo el que buscaba a Yavé salía al Tabernáculo de Reunión que estaba fuera del campamento.
ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.
8 Sucedía que, cuando Moisés salía al Tabernáculo, todo el pueblo se levantaba. Cada cual estaba en pie en la entrada de su propia tienda y observaban a Moisés hasta cuando él entraba en el Tabernáculo.
ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು.
9 Ocurría que cuando Moisés entraba en el Tabernáculo, la columna de nube descendía y permanecía en la entrada del Tabernáculo mientras [Yavé] hablaba con Moisés.
ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು.
10 Todo el pueblo veía la columna de nube detenida en la entrada del Tabernáculo. Todo el pueblo se levantaba y se postraba, cada uno en la entrada de su propia tienda.
ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.
11 Yavé hablaba con Moisés cara a cara, como un hombre suele hablar con su amigo. Luego volvía al campamento, pero el joven Josué, hijo de Nun, nunca se apartaba de en medio del Tabernáculo.
ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
12 Entonces Moisés dijo a Yavé: Considera que Tú me dices: Lleva a este pueblo. Pero no me das a conocer a quién enviarás conmigo, aunque dijiste: Te conozco por nombre. Y también: Hallaste gracia delante de Mí.
ಮೋಶೆಯು ಯೆಹೋವ ದೇವರಿಗೆ, “‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ.
13 Ahora, si hallé gracia delante de Ti, te ruego que me muestres tu camino para que te conozca y halle gracia ante Ti. Considera que esta nación es tu pueblo.
ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು.
14 Él dijo: Mi Presencia irá contigo y te daré descanso.
ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.
15 Y le respondió: Si tu Presencia no va, no nos saques de aquí.
ಮೋಶೆಯು ಅವರಿಗೆ, “ನಿಮ್ಮ ಪ್ರಸನ್ನತೆಯು ನಮ್ಮೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗಬೇಡಿ.
16 Porque, ¿cómo se puede saber que yo y tu pueblo hallamos gracia delante de Ti? ¿No es al saber que Tú vas con nosotros para que yo y tu pueblo seamos distinguidos de todos los pueblos que hay sobre la tierra?
ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.
17 Yavé dijo a Moisés: También haré esto que dijiste por cuanto hallaste gracia delante de Mí, y te conocí por nombre.
ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.
18 Entonces Moisés dijo: ¡Te ruego, muéstrame tu gloria!
ಆಗ ಮೋಶೆ, “ನಿಮ್ಮ ಮಹಿಮೆಯನ್ನು ನನಗೆ ತೋರಿಸಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.
19 Y le respondió: Yo mismo haré pasar toda mi bondad delante de ti, y proclamaré el Nombre de Yavé delante de ti. Tendré compasión del que tendré compasión y me compadeceré del que me compadeceré.
ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.
20 Dijo además: No podrás ver mi rostro, pues no me verá hombre y vivirá.
ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು.
21 Y Yavé añadió: Aquí hay un lugar junto a Mí, y tú estarás en pie sobre la peña.
ಇದಲ್ಲದೆ ಯೆಹೋವ ದೇವರು, “ನನ್ನ ಬಳಿಯಲ್ಲಿ ಒಂದು ಸ್ಥಳವಿದೆ. ನೀನು ಬಂಡೆಯ ಮೇಲೆ ನಿಂತುಕೋ.
22 Sucederá que cuando pase mi gloria, te pondré en la hendidura de la peña y te cubriré con mi mano hasta que pase.
ಆಗ ನನ್ನ ಮಹಿಮೆಯು ಹಾದುಹೋಗುವಾಗ, ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ, ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.
23 Después apartaré mi mano y verás mi espalda, pero mi rostro no será visto.
ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು.

< Éxodo 33 >