< Job 5 >
1 ¡Clama ahora! ¿Habrá quién te responda? ¿A cuál de los santos acudirás?
೧“ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ?
2 Porque la ira mata al necio, y la envidia mata al simple.
೨ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.
3 Vi al necio que echaba raíces, y al instante maldije su vivienda.
೩ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು.
4 Sus hijos están lejos de toda seguridad. Son aplastados en la puerta y no habrá quién los defienda.
೪ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.
5 Su cosecha la devoran los hambrientos y aun la sacan de entre los espinos. Los sedientos sorben su hacienda.
೫ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.
6 Porque la aflicción no sale del polvo, ni el sufrimiento brota de la tierra,
೬ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; ದುಃಖವು ಭೂಮಿಯಿಂದ ಮೊಳೆಯುವುದಿಲ್ಲ.
7 sino el hombre nace para la aflicción, como las chispas salen hacia arriba.
೭ಜ್ವಾಲೆಗಳು ಮೇಲಕ್ಕೆ ಹಾರುವುದು, ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ.
8 Ciertamente yo buscaría a ʼElohim y encomendaría a Él mi causa,
೮(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.
9 Quien hace cosas grandes e inescrutables, maravillas incontables.
೯ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.
10 Él da la lluvia a la tierra y envía el agua sobre la superficie de los campos.
೧೦ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.
11 Él exalta a los humildes y levanta a los enlutados a la seguridad.
೧೧ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ.
12 Frustra los pensamientos de los astutos para que nada hagan sus manos y
೧೨ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.
13 atrapa a los sabios en su astucia. Frustra los designios del perverso.
೧೩ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.
14 Tropiezan de día con la oscuridad y a mediodía andan a tientas como de noche.
೧೪ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.
15 Así libra al pobre de la espada, de la boca de los poderosos y de su mano.
೧೫ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.
16 El necesitado conserva la esperanza. La perversidad cierra su boca.
೧೬ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.
17 Dichoso el hombre a quien ʼElohim disciplina. No menosprecies la corrección de ʼEL-Shadday,
೧೭ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.
18 porque Él hace la herida, pero también la venda. Hiere, pero sus manos sanan.
೧೮ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
19 Te librará de seis tribulaciones, y aun en la séptima no te tocará el mal.
೧೯ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.
20 Durante la hambruna te librará de la muerte, y del poder de la espada en la guerra.
೨೦ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.
21 Estarás escondido del azote de la lengua, y no temerás cuando venga la destrucción.
೨೧ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವುದಿಲ್ಲ.
22 Te reirás de la destrucción y de la hambruna y no temerás a las fieras del campo,
೨೨ನೀನು ನಾಶಕ್ಕೂ, ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ.
23 pues aun con las piedras del campo harás pacto, y las bestias del campo tendrán paz contigo.
೨೩ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.
24 Sabrás que hay paz en tu tienda. Nada te faltará cuando revises tu morada.
೨೪ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.
25 Verás también que tu descendencia es numerosa y tu prole como la hierba de la tierra.
೨೫ನಿನ್ನ ಸಂತಾನವು ದೊಡ್ಡದ್ದೆಂದೂ, ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ.
26 Irás a la tumba en la vejez, como la gavilla de trigo que se recoge a su tiempo.
೨೬ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.
27 Mira que esto lo investigamos, es así. Óyelo, y conócelo por ti mismo.
೨೭ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”