< Josué 14 >
1 Esto es lo que los hijos de Israel heredaron en tierra de Canaán, que les repartieron Eleazar, el sacerdote, Josué, hijo de Nun, y los jefes de las casas paternas de las tribus de los hijos de Israel,
ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.
2 tal como Yavé ordenó por medio de Moisés. La heredad se dio por sorteo a las nueve tribus y a la media tribu.
ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.
3 Porque Moisés dio heredades a las dos tribus y a la otra media tribu en la otra parte del Jordán. A los levitas no les dio herencia entre ellos.
ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ,
4 Pues los hijos de José formaron dos tribus: Manasés y Efraín. No dieron porción de la tierra a los levitas, sino solo ciudades para vivir, con sus pastizales para sus ganados y sus rebaños.
ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.
5 Los hijos de Israel hicieron como Yavé ordenó a Moisés, y se repartieron la tierra.
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರಮಾಡಿ, ದೇಶವನ್ನು ಹಂಚಿಕೊಡಲಾಯಿತು.
6 Los hijos de Judá acudieron a Josué en Gilgal. Caleb, hijo de Jefone, ceneceo, le dijo: Tú sabes lo que Yavé dijo a Moisés, varón de ʼElohim, con respecto a mí y a ti en Cades Barnea.
ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ.
7 Yo tenía 40 años cuando Moisés, esclavo de Yavé, me envió desde Cades Barnea a reconocer la tierra. Le llevé información conforme a lo que tenía en mi corazón.
ದೇಶವನ್ನು ಸಂಚರಿಸಿ ನೋಡಲು ಯೆಹೋವ ದೇವರ ಸೇವಕನಾದ ಮೋಶೆಯು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ ನಾನು ನಾಲ್ವತ್ತು ವರ್ಷ ಪ್ರಾಯದವನಾಗಿದ್ದೆನು. ನನ್ನ ಮನಸ್ಸಿಗೆ ಬಂದಿದ್ದ ವರದಿಯನ್ನು ತಂದು ತಿಳಿಸಿದೆನು.
8 Pero mis hermanos, los que subieron conmigo, hicieron desfallecer el corazón del pueblo, aunque yo seguí con integridad a Yavé, mi ʼElohim.
ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು.
9 Aquel día Moisés juró: Ciertamente la tierra que tu pie pisó será herencia tuya y de tus hijos para siempre, por cuanto seguiste con integridad a Yavé, mi ʼElohim.
ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’ ಎಂದು ಆಣೆ ಇಟ್ಟು ಹೇಳಿದನು.
10 Ahora bien, Yavé me permitió vivir, como Él dijo, estos 45 años desde cuando Él habló esta palabra a Moisés, cuando Israel vagaba por el desierto. Ahora, mira, hoy tengo 85 años de edad.
“ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ.
11 Aún estoy tan fuerte como el día cuando Moisés me envió. Como era entonces mi fuerza, así es ahora para la guerra, tanto para salir como para entrar.
ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲಿಷ್ಠನಾಗಿ ಇದ್ದೆನೋ, ಹಾಗೆಯೇ ಈಗಲೂ ಬಲಿಷ್ಠನಾಗಿದ್ದೇನೆ. ನಾನು ಯುದ್ಧ ಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳವನಾಗಿದ್ದೇನೆ.
12 Ahora pues, dame esta región montañosa, de la cual Yavé habló aquel día, porque tú mismo oíste aquel día que los anaceos estaban allí, y que hay ciudades grandes y fortificadas. Tal vez Yavé esté conmigo y yo pueda echarlos, como Yavé dijo.
ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.
13 Entonces Josué lo bendijo, y dio Hebrón como heredad a Caleb, hijo de Jefone.
ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು.
14 Por tanto Hebrón fue la herencia de Caleb, hijo de Jefone, ceneceo, hasta hoy, porque siguió cumplidamente a Yavé ʼElohim de Israel.
ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ.
15 Pero, el nombre de Hebrón antiguamente fue Quiriat-arba, porque Arba fue un hombre grande entre los anaceos. Entonces la tierra tuvo reposo de la guerra.
ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.