< Josué 21 >
1 En aquel tiempo los jefes de las casas paternas de los levitas acudieron al sacerdote Eleazar, a Josué, hijo de Nun, y a los jefes de las tribus de los hijos de Israel.
ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.
2 Les hablaron en Silo, en tierra de Canaán: Yavé ordenó por medio de Moisés que se nos den ciudades para vivir, con sus pastizales para nuestros animales.
ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು.
3 Entonces, según el mandamiento de Yavé, los hijos de Israel dieron de su heredad a los levitas estas ciudades con sus pastizales.
ಹಾಗೆಯೇ ಇಸ್ರಾಯೇಲರು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಯೆಹೋವ ದೇವರ ಆಜ್ಞೆಯ ಪ್ರಕಾರ ಪಟ್ಟಣಗಳನ್ನೂ ಗೋಮಾಳಗಳನ್ನೂ ಕೊಟ್ಟರು. ಅವುಗಳ ವಿವರ:
4 La suerte salió para las familias de los coatitas. Estos hijos del sacerdote Aarón, quien fue de los levitas, recibieron 13 ciudades por sorteo de parte de la tribu de Judá, de la tribu de Simeón y de la tribu de Benjamín.
ಕೊಹಾತ್ಯರ ಗೋತ್ರಗಳಿಗೆ ಚೀಟು ಬಂದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೆಹೂದದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ, ಬೆನ್ಯಾಮೀನನ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.
5 El resto de los hijos de Coat recibieron por sorteo diez ciudades de las familias de la tribu de Efraín, de la tribu de Dan y de la media tribu de Manasés.
ಕೊಹಾತ್ಯರಿಗೆ ಎಫ್ರಾಯೀಮನ ಗೋತ್ರದಲ್ಲಿಯೂ, ದಾನನ ಗೋತ್ರದಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹತ್ತು ಪಟ್ಟಣಗಳು ಚೀಟಿಯಿಂದ ದೊರಕಿದವು.
6 Los hijos de Gersón recibieron por sorteo de parte de las familias de la tribu de Isacar, de la tribu de Aser, de la tribu de Neftalí y de la media tribu de Manasés, en Basán, 13 ciudades.
ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.
7 Los hijos de Merari, según sus familias, recibieron de parte de la tribu de Rubén, la tribu de Gad y la tribu de Zabulón, 12 ciudades.
ಇದಲ್ಲದೆ ಮೆರಾರೀಯರಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ, ಗಾದನ ಗೋತ್ರದಲ್ಲಿಯೂ, ಜೆಬುಲೂನನ ಗೋತ್ರದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
8 Así, los hijos de Israel dieron por sorteo a los levitas estas ciudades con sus pastizales, como Yavé ordenó por medio de Moisés.
ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು.
9 De la tribu de los hijos de Judá y de la tribu de los hijos de Simeón, les dieron esas ciudades que se mencionan por nombre,
ಅವರು ಯೆಹೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರದಲ್ಲಿಯೂ ಕೆಲವು ಪಟ್ಟಣಗಳನ್ನು ಕೊಟ್ಟರು.
10 que fueron para una de las familias de los coatitas, de los hijos de Aarón, quien era de los hijos de Leví. Porque la primera suerte fue para ellos,
ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ:
11 a los cuales dieron Quiriat-arba (Arba fue el padre de Anac, que es Hebrón), en la región montañosa de Judá, con los pastizales en sus alrededores.
ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.
12 Pero le dieron a Caleb, hijo de Jefone, como posesión suya, los campos de la ciudad con sus aldeas.
ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು.
13 A los hijos del sacerdote Aarón les dieron Hebrón con sus pastizales como ciudad de refugio para los homicidas, y además, Libná con sus pastizales,
ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ
14 Jatir con sus pastizales, Estemoa con sus pastizales,
ಯತ್ತೀರನ್ನೂ ಎಷ್ಟೆಮೋವನ್ನೂ
15 Holón con sus pastizales, Debir con sus pastizales,
ಹೋಲೋನನ್ನೂ ದೆಬೀರನ್ನೂ
16 Aín con sus pastizales, Juta con sus pastizales y Bet-semes con sus pastizales: nueve ciudades de estas dos tribus.
ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.
17 De la tribu de Benjamín, Gabaón con sus pastizales, Geba con sus pastizales,
ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ ಗಿಬ್ಯೋನನ್ನೂ ಗೆಬಾನನ್ನೂ
18 Anatot con sus pastizales, y Almón con sus pastizales, cuatro ciudades.
ಅನಾತೋತನ್ನೂ ಅಲ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.
19 El total de las ciudades de los sacerdotes, hijos de Aarón, fue 13, con sus pastizales.
ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
20 Los levitas que quedaban de las familias de los hijos de Coat, recibieron por sorteo unas ciudades de la tribu de Efraín.
ಇದಲ್ಲದೆ ಲೇವಿಯರಾದ ಕೊಹಾತ್ಯನ ಗೋತ್ರದ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯೀಮನ ಗೋತ್ರದಲ್ಲಿ ಚೀಟಿಯಿಂದ ದೊರಕಿದ ಪಟ್ಟಣಗಳ ವಿವರ:
21 En la región montañosa de Efraín les dieron Siquem como ciudad de refugio para los homicidas, con sus pastizales, Gezer con sus pastizales,
ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯೀಮನ ಬೆಟ್ಟಗಳಲ್ಲಿರುವ, ಶೆಕೆಮನ್ನೂ ಗೆಜೆರನ್ನೂ
22 Quibsaim con sus pastizales y Bet-horón con sus pastizales, cuatro ciudades.
ಕಿಬ್‌ಚೈಮ್ ಮತ್ತು ಬೇತ್ ಹೋರೋನ್ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
23 De la tribu de Dan, Elteque con sus pastizales, Gibetón con sus pastizales,
ಇದಲ್ಲದೆ ದಾನ್ಯನ ಗೋತ್ರದಲ್ಲಿ, ಎಲ್ತೆಕೇಯನ್ನೂ ಗಿಬ್ಬೆತೋನನ್ನೂ
24 Ajalón con sus pastizales y Gat-rimón con sus pastizales, cuatro ciudades.
ಅಯ್ಯಾಲೋನನ್ನೂ ಗತ್ ರಿಮ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
25 De la media tribu de Manasés, Taanac con sus pastizales y Gat-rimón con sus pastizales, dos ciudades.
ಮನಸ್ಸೆಯ ಅರ್ಧಗೋತ್ರದಲ್ಲಿ, ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
26 El total de las ciudades para el resto de las familias de los hijos de Coat fue diez, con sus pastizales:
ಹೀಗೆ ಉಳಿದಂಥ ಕೊಹಾತ್ಯನ ಗೋತ್ರಗಳಲ್ಲಿ ಹತ್ತು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
27 A los hijos de Gersón, una de las familias de los levitas, les dieron de la media tribu de Manasés a Golán, una de las ciudades de refugio para los homicidas en Basán, con sus pastizales, y a Beestera con sus pastizales, dos ciudades.
ಲೇವಿ ಗೋತ್ರದ ಗೇರ್ಷೋನ್ಯರಿಗೆ ಮನಸ್ಸೆಯ ಅರ್ಧಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
28 De la tribu de Isacar, Cisón con sus pastizales, Daberat con sus pastizales,
ಇದಲ್ಲದೆ ಇಸ್ಸಾಕಾರನ ಗೋತ್ರದ ಸೊತ್ತಿನಿಂದ ಕಿಷ್ಯೋನನ್ನೂ ದಾಬೆರತನ್ನೂ
29 Jarmut con sus pastizales y En-ganim con sus pastizales, cuatro ciudades.
ಯರ್ಮೂತ್ ಮತ್ತು ಏಂಗನ್ನೀಮನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
30 De la tribu de Aser, Miseal con sus pastizales, Abdón con sus pastizales,
ಆಶೇರನ ಗೋತ್ರದ ಸೊತ್ತಿನಿಂದ ಮಿಷಾಲನ್ನೂ, ಅಬ್ದೋನನ್ನೂ
31 Helcat con sus pastizales, y Rehob con sus pastizales, cuatro ciudades.
ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
32 De la tribu de Neftalí, la ciudad de refugio para los homicidas, Cedes, en Galilea, con sus pastizales, Jamot-dor con sus pastizales y Cartán con sus pastizales: tres ciudades.
ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
33 El total de las ciudades de los gersonitas, por sus familias, fue 13 ciudades con sus pastizales.
ಗೇರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಹದಿಮೂರು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
34 A las familias de los hijos de Merari, los levitas que quedaron, les dieron, de la tribu de Zabulón, Jocneam con sus pastizales, Carta con sus pastizales,
ಉಳಿದ ಲೇವಿಯರಾದ ಮೆರಾರೀಯ ಕುಟುಂಬಗಳಿಗೆ ಜೆಬುಲೂನನ ಗೋತ್ರದ ಸೊತ್ತಿನಿಂದ ಯೊಕ್ನೆಯಾಮ್, ಕರ್ತಾ,
35 Dimna con sus pastizales y Nahalal con sus pastizales, cuatro ciudades.
ದಿಮ್ನಾ, ನಹಲಾಲ್, ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
36 De la tribu de Rubén, Beser con sus pastizales, Jasa con sus pastizales,
ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಯಹಚವನ್ನೂ
37 Cademot con sus pastizales y Mefaat con sus pastizales, cuatro ciudades.
ಕೆದೇಮೋತನ್ನೂ ಮೇಫಾತನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
38 De la tribu de Gad, la ciudad de refugio para los homicidas, Ramot en Galaad con sus pastizales, Mahanaim con sus pastizales,
ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,
39 Hesbón con sus pastizales y Jaser con sus pastizales, cuatro ciudades.
ಹೆಷ್ಬೋನನ್ನೂ ಯಜ್ಜೇರನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.
40 El total de las ciudades que tocaron por suerte a los hijos de Merari, según las familias que quedaban de los levitas, fueron 12.
ಹೀಗೆಯೇ ಲೇವಿ ಗೋತ್ರದ ಉಳಿದಂಥ ಮೆರಾರೀಯರ ಕುಟುಂಬಗಳ ಪ್ರಕಾರ ಚೀಟಿಯಿಂದ ದೊರೆತ ಪಟ್ಟಣಗಳು ಹನ್ನೆರಡು.
41 Todas las ciudades de los levitas que estaban en medio de la propiedad de los hijos de Israel fueron 48 ciudades con sus pastizales.
ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು.
42 Cada una de estas ciudades tenía sus pastizales alrededor. Así hicieron con todas estas ciudades.
ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು.
43 De esta manera Yavé dio a Israel toda la tierra que juró a sus antepasados que les daría. Y ellos la poseyeron y vivieron en ella.
ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.
44 Yavé les dio reposo alrededor, según todo lo que juró a sus antepasados. Ninguno de todos sus enemigos pudo hacerles frente, porque Yavé entregó a todos sus enemigos en sus manos.
ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.
45 No faltó palabra de todas las buenas cosas que Yavé habló a la casa de Israel. Todo se cumplió.
ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು.