< Ezequiel 40 >
1 En el año veinte y cinco de nuestro cautiverio, al principio del año, a los diez del mes, a los catorce años después que la ciudad fue herida, en aquel mismo día, fue sobre mí la mano de Jehová, y llevóme allá.
೧ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.
2 En visiones de Dios me llevó a la tierra de Israel, y púsome sobre un monte muy alto, sobre el cual estaba como edificio de una ciudad al mediodía.
೨ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.
3 Y llevóme allí, y he aquí un varón cuyo aspecto era como aspecto de metal, y tenía un cordel de lino en su mano, y una caña de medir; el cual estaba a la puerta.
೩ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು, ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು.
4 Y aquel varón me habló: Hijo del hombre, mira de tus ojos, y oye de tus oídos, y pon tu corazón a todas las cosas que te muestro; porque para que yo te mostrase eres traído aquí: cuenta todo lo que ves a la casa de Israel.
೪ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.
5 Y he aquí un muro fuera de la casa al derredor; y la caña de medir que aquel varón tenía en la mano era de seis codos, de a codo y palmo; y midió la anchura del edificio de una caña, y la altura de otra caña.
೫ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.
6 Y vino a la puerta, la haz de la cual era hacia el oriente, y subió por sus gradas, y midió el un poste de la puerta de una caña en anchura, y el otro poste de otra caña en anchura.
೬ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.
7 Y cada cámara, de una caña en longitud, y de otra caña en anchura; y entre las cámaras dejó cinco codos en anchura; y cada poste de la puerta junto a la entrada de la puerta por de dentro, una caña.
೭ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು.
8 Y midió la entrada de la puerta por de dentro, de una caña.
೮ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು. ಅದು ಒಂದು ಕೋಲು ಉದ್ದವಾಗಿತ್ತು.
9 Y midió la entrada del portal de ocho codos, y sus postes de dos codos, y la entrada del portal por de dentro.
೯ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.
10 Y la puerta de hacia el oriente tenía tres cámaras de cada parte, todas tres de una medida; y los portales de cada parte de una medida.
೧೦ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು.
11 Y midió la anchura de la entrada del portal de la puerta de diez codos: la longitud del portal de trece codos.
೧೧ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳವೆಂದೂ ಉದ್ದ ಹದಿಮೂರು ಮೊಳವೆಂದೂ ಅಳೆದನು.
12 Y el espacio de delante de las cámaras, de un codo de la una parte, y de otro codo de la otra; y cada cámara tenía seis codos de una parte, y seis codos de otra.
೧೨ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ.
13 Y midió la puerta desde la techumbre de la una cámara hasta su techumbre, de anchura de veinte y cinco codos puerta contra puerta.
೧೩ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು.
14 E hizo los portales de sesenta codos, cada portal del patio, y del portal todo al derredor.
೧೪ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು.
15 Y desde la delantera de la puerta de la entrada hasta la delantera de la entrada de la puerta de dentro, cincuenta codos.
೧೫ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು.
16 Y había ventanas estrechas en las cámaras, y en sus portales por de dentro de la puerta al derredor, y asimismo en los arcos; y las ventanas estaban al derredor por de dentro, y en cada poste estaban esculpidas palmas.
೧೬ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.
17 Y llevóme al patio de afuera, y he aquí cámaras, y solado hecho al patio todo en derredor; treinta cámaras había en aquel patio.
೧೭ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.
18 Y estaba solado al lado de las puertas delante de la longitud de los portales solado abajo.
೧೮ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು.
19 Y midió la anchura desde la delantera de la puerta de abajo, hasta la delantera del patio de dentro por de fuera, de cien codos hacia el oriente y el norte.
೧೯ಅವನು ಪೂರ್ವಕ್ಕೂ, ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳೆಯಲು, ಅದು ನೂರು ಮೊಳವಿತ್ತು.
20 Y de la puerta que estaba hacia el norte en el patio de afuera, midió su longitud y su anchura.
೨೦ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು.
21 Y sus cámaras, tres de una parte, y tres de otra, y sus postes, y sus arcos eran como la medida de la puerta primera, cincuenta codos su longitud, y su anchura de veinte y cinco codos.
೨೧ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು.
22 Y sus ventanas, y sus arcos, y sus palmas eran conforme a la medida de la puerta que estaba hacia el oriente; y subían a ella por siete gradas, y sus arcos delante de ellas.
೨೨ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.
23 Y la una puerta del patio de adentro estaba en frente de la otra puerta al norte, y al oriente; y midió de puerta a puerta cien codos.
೨೩ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳ ಅಳತೆ ಮಾಡಿದನು.
24 Y llevóme hacia el mediodía, y he aquí una puerta hacia el mediodía; y midió sus portales y sus arcos conforme a estas medidas dichas.
೨೪ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು.
25 Y tenía sus ventanas, y sus arcos al derredor, como las ventanas ya dichas: la longitud era de cincuenta codos, y la anchura de veinte y cinco codos.
೨೫ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಕಿಟಕಿಗಳೇ ಇದ್ದವು; ಅದರ ಉದ್ದವೂ ಐವತ್ತು ಮೊಳ ಮತ್ತು ಅಗಲವೂ ಇಪ್ಪತ್ತೈದು ಮೊಳವಾಗಿತ್ತು.
26 Y sus gradas eran siete gradas, y sus arcos delante de ellas; y tenía palmas, una de una parte, y otra en sus postes.
೨೬ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಜೂರ ಮರಗಳ ಚಿತ್ರಗಳಿದ್ದವು.
27 Y tal era la puerta de hacia el mediodía, del patio de dentro; y midió de puerta a puerta hacia el mediodía cien codos.
೨೭ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳ ಅಳೆದನು.
28 Y metióme en el patio de más adentro a la puerta del mediodía; y midió la puerta del mediodía conforme a estas medidas dichas:
೨೮ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.
29 Y sus cámaras, y sus postes, y sus arcos eran conforme a estas medidas dichas; y tenía sus ventanas, y sus arcos al derredor: la longitud era de cincuenta codos, y la anchura de veinte y cinco codos.
೨೯ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
30 Y tenía arcos al derredor de longitud de veinte y cinco codos, y la anchura de cinco codos.
೩೦ಸುತ್ತುಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳ ಮತ್ತು ಅಗಲ ಐದು ಮೊಳವಾಗಿತ್ತು.
31 Y sus arcos afuera al patio, y palmas a cada uno de sus postes; y sus gradas eran ocho gradas.
೩೧ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
32 Y llevóme al patio adentro hacia el oriente, y midió la puerta conforme a estas medidas dichas.
೩೨ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳೆಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು.
33 Y sus cámaras, y sus postes, y sus arcos conforme a estas medidas dichas; y tenía sus ventanas, y sus arcos al derredor: la longitud de cincuenta codos, y la anchura de veinte y cinco codos.
೩೩ಅದರಲ್ಲಿಯೂ ಮತ್ತು ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
34 Y sus arcos afuera al patio, y palmas a cada uno de sus postes de una parte y de otra; y sus gradas eran ocho gradas.
೩೪ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
35 Y llevóme a la puerta del norte, y midió conforme a estas medidas dichas.
೩೫ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳೆದನು.
36 Sus cámaras, y sus postes, y sus arcos, y sus ventanas al derredor: la longitud de cincuenta codos, y la anchura de veinte y cinco codos.
೩೬ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.
37 Y sus postes afuera al patio, y palmas a cada uno de sus postes de una parte y de otra; y sus gradas eran ocho gradas.
೩೭ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
38 Y había allí una cámara, y su puerta con postes de portales: allí lavarán el holocausto.
೩೮ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.
39 Y en la entrada de la puerta había dos mesas de la una parte, y otras dos de la otra, para degollar sobre ellas el holocausto, y la expiación, y el pecado.
೩೯ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.
40 Y al lado por de fuera de las gradas, a la entrada de la puerta del norte había dos mesas; y al otro lado que estaba a la entrada de la puerta otras dos mesas:
೪೦ಉತ್ತರದ ಹೆಬ್ಬಾಗಿಲಿನ ಪ್ರವೇಶ ಸ್ಥಾನದ ಮೆಟ್ಟಿಲುಗಳ ಹತ್ತಿರ ಎರಡು ಪೀಠಗಳು ಇದ್ದವು.
41 Cuatro mesas de la una parte, y otras cuatro mesas de la otra parte: había a cada lado de esta puerta ocho mesas, sobre las cuales degollarán.
೪೧ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.
42 Y las cuatro de estas mesas para el holocausto eran de piedras labradas, de longitud de un codo y medio, y de anchura de otro codo y medio, y de altura de un codo: sobre estas pondrán las herramientas con que degollarán el holocausto y el sacrificio.
೪೨ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು.
43 Y había ganchos de un palmo aparejados de dentro todo al derredor; y sobre las mesas la carne de la ofrenda.
೪೩ಒಳಗೆ, ಸುತ್ತಲು ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು.
44 Y de fuera de la puerta de la parte de adentro, en el patio de adentro a la parte que estaba al lado de la puerta del norte, estaban las cámaras de los cantores, las cuales miraban hacia el mediodía: una estaba al lado de la puerta del oriente que miraba hacia el norte.
೪೪ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.
45 Y díjome: Esta cámara que mira hacia el mediodía será de los sacerdotes que tienen la guarda del templo.
೪೫ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.
46 Y la cámara que mira hacia el norte será de los sacerdotes que tienen la guarda del altar: estos son los hijos de Sadoc, los cuales son llamados de los hijos de Leví al Señor, para ministrarle.
೪೬ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.
47 Y midió el patio, la longitud de cien codos, y la anchura de otros cien codos, cuadrado: y había un altar delante del templo.
೪೭ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.
48 Y llevóme a la entrada del templo, y midió cada poste de la entrada, cinco codos de una parte, y cinco codos de otra; y la anchura de la puerta tres codos de una parte, y tres codos de otra.
೪೮ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.
49 La longitud de la portada veinte codos, y la anchura once codos, a la cual subían por gradas; y había columnas junto a los postes, una de una parte, y otra de otra.
೪೯ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.